ಚುನಾವಣಾ ಕರ್ತವ್ಯದಲ್ಲಿ ಲೋಪವಾಗದಂತೆ ಕಾರ್ಯನಿರ್ವಹಿಸಿ-ಜಿಲ್ಲಾಧಿಕಾರಿ

| Published : Mar 18 2024, 01:48 AM IST / Updated: Mar 18 2024, 01:49 AM IST

ಚುನಾವಣಾ ಕರ್ತವ್ಯದಲ್ಲಿ ಲೋಪವಾಗದಂತೆ ಕಾರ್ಯನಿರ್ವಹಿಸಿ-ಜಿಲ್ಲಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಚುನಾವಣೆ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ನ್ಯಾಯ ಸಮ್ಮತ ಹಾಗೂ ಪಾರದರ್ಶಕ ಚುನಾವಣೆಗೆ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಚುನಾವಣಾ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.

ಹಾವೇರಿ: ಲೋಕಸಭಾ ಚುನಾವಣೆ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ನ್ಯಾಯ ಸಮ್ಮತ ಹಾಗೂ ಪಾರದರ್ಶಕ ಚುನಾವಣೆಗೆ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಚುನಾವಣಾ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಹಾವೇರಿ-ಗದಗ ಜಿಲ್ಲಾಡಳಿತ ಸಮನ್ವಯ ಸಭೆಯನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆಸಿದ ಅವರು, ಹಾವೇರಿ ಲೋಕಸಭಾ ವ್ಯಾಪ್ತಿಗೆ ಬರುವ ಹಾವೇರಿ ಹಾಗೂ ಗದಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಸಿದ್ಧತೆ, ಸಮಿತಿಗಳ ರಚನೆ, ಮತಗಟ್ಟೆಗಳ ಸಿದ್ಧತೆ, ಚೆಕ್ ಪೋಸ್ಟ್‌ಗಳ ಸ್ಥಾಪನೆ ಕುರಿತಂತೆ ಪರಸ್ಪರ ಮಾಹಿತಿಯನ್ನು ವಿನಿಮಯಮಾಡಿಕೊಂಡು, ಸಮನ್ವಯದಿಂದ ಕಾರ್ಯನಿರ್ವಹಿಸುವ ಕುರಿತಂತೆ ಚರ್ಚಿಸಲಾಯಿತು.

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಉಭಯ ಜಿಲ್ಲೆಗಳ ನೋಡಲ್ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳ ಪರಸ್ಪರ ಮಾಹಿತಿ ವಿನಿಮಯ ಹಾಗೂ ವಿವಿಧ ಸಮಿತಿಗಳ ಸಭೆ ಆಯೋಜನೆ ಕುರಿತಂತೆ ಚರ್ಚಿಸಿ, ಪಾರದರ್ಶಕ ಹಾಗೂ ನೈತಿಕ ಚುನಾವಣೆ ನಿಟ್ಟಿನಲ್ಲಿ ಸಮನ್ವಯವಾಗಿ ಕಾರ್ಯನಿರ್ವಹಿಸುವಂತ ಕುರಿತಂತೆ ಚರ್ಚಿಸಲಾಯಿತು.ನೀತಿ ಸಂಹಿತೆ ಅನುಷ್ಠಾನ: ಮಾ. ೧೬ರಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ತೆರವುಗೊಳಿಸಬಹದಾದ ಎಲ್ಲ ತರದ ರಾಜಕೀಯ ಪ್ರಚಾರ ಸಾಮಗ್ರಿಗಳು, ಪ್ರಚಾರ ಫಲಕಗಳನ್ನು ತೆರವುಗೊಳಿಸಬೇಕು. ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭದ ಫಲಕಗಳನ್ನು ಮರೆಮಾಚಬೇಕು. ಎಲ್ಲ ಎಆರ್‌ಒಗಳು ಜವಾಬ್ದಾರಿಯಿಂದ ತೆರವು ಕಾರ್ಯ ಕೈಗೊಳ್ಳಬೇಕು. ಚೆಕ್ ಪೋಸ್ಟ್ ಕರ್ತವ್ಯಕ್ಕೆ ಆವರ್ತ ಅನುಸಾರ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳು ಹಾಜರಾಗಬೇಕು ಎಂದು ಸೂಚಿಸಿದರು.

ಜಿಲ್ಲೆಯ ಗಡಿ ಭಾಗದಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪನೆಗೆ ಗುರುತಿಸಲಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ಸಿಸಿಟಿವಿ ಅಳಡಿಸಬೇಕು ಹಾಗೂ ಹ್ಯಾಂಡಿಕ್ಯಾಂ, ರಿಫ್ಲೆಕ್ಟೆಡ್ ಜಾಕೆಟ್, ಟಾರ್ಚ್ ಒದಗಿಸಬೇಕು. ಏನಾದರೂ ಸಮಸ್ಯೆಗಳಿದ್ದರೆ ಕೂಡಲೇ ಗಮನಕ್ಕೆ ತರಬೇಕು. ಎಲ್ಲ ಮತಗಟ್ಟೆಗಳಲ್ಲಿ ನೀರು, ವಿದ್ಯುತ್, ಬೆಳಕು, ರ‍್ಯಾಂಪ್, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಬೇಕು. ರಜೆ ಮೇಲೆ ತೆರಳಿದ ಅಧಿಕಾರಿ ಹಾಗೂ ಸಿಬ್ಬಂದಿಗಳು ಕೂಡಲೇ ಕೆಲಸಕ್ಕೆ ಹಾಜರಾಗಬೇಕು ಎಂದರು.

ಕ್ಷೇತ್ರದ ಪೋಸ್ಟಲ್ ಬ್ಯಾಲೇಟ್, ಇವಿಎಂ ರ‍್ಯಾಂಡಮೈಜೇಷನ್, ಅಭ್ಯರ್ಥಿಗಳ ವಾಹನ ಪರವಾನಗಿ, ರ‍್ಯಾಲಿ ಮತ್ತು ಕಾರ್ಯಕ್ರಮಗಳಿಗೆ ಅನುಮತಿ, ಮಸ್ಟರಿಂಗ್, ಡಿ-ಮಸ್ಟರಿಂಗ್, ಸ್ಟ್ರಾಂಗ ರೂಂ ಸ್ಥಾಪನೆ ಸೇರಿದಂತೆ ಗದಗ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.

ಗದಗ ಜಿಲ್ಲೆಯಲ್ಲಿ ಕೈಗೊಂಡಿರುವ ಸಿದ್ಧತೆಗಳ ಕುರಿತಂತೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಅವರು ವಿಡಿಯೋ ಸಂವಾದದ ಮೂಲಕ ಮಾಹಿತಿ ನೀಡಿದರು. ಅಪರ ಜಿಲ್ಲಾಧಿಕಾರಿ ಸುರೇಖಾ ಉಪಸ್ಥಿತರಿದ್ದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಜಿ.ಪಂ. ಉಪಕಾರ್ಯದರ್ಶಿ ಎಸ್.ಜಿ. ಮುಳ್ಳಳ್ಳಿ, ಉಪ ವಿಭಾಗಾಧಿಕಾರಿಗಳಾದ ಚೆನ್ನಪ್ಪ, ಮಹ್ಮದ ಖಿಜರ್, ನೋಡಲ್ ಅಧಿಕಾರಿಗಳಾದ ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಉಮೇಶಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಮಮತಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಜಿಲ್ಲಾ ವಾರ್ತಾಧಿಕಾರಿ ಡಾ.ಬಿ.ಆರ್. ರಂಗನಾಥ್, ಕೌಶಲ್ಯಾಧಿಕಾರಿ ಹುಲಿರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ನಗರಾಜ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.