ಸಾರಾಂಶ
ಹಳಿಯಾಳ: ಸರ್ಕಾರವು ಶಿಕ್ಷಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದರ ಜತೆಗೆ ಅಧ್ಯಾಪಕರು ನಿಷ್ಠೆಯಿಂದ ಹಾಗೂ ಜವಾಬ್ದಾರಿಯಿಂದ ಬೋಧನೆಯನ್ನು ಮಾಡಬೇಕು. ಕರ್ತವ್ಯಲೋಪ ಮಾಡುವುದನ್ನು ಸಹಿಸುವುದಿಲ್ಲ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ಬುಧವಾರ ಪಟ್ಟಣದ ಶಿವಾಜಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೋಧನೆಗೆ ಎದುರಾಗುವ ಸಮಸ್ಯೆಗಳನ್ನು, ಬೇಕಾಗಿರುವ ಶೈಕ್ಷಣಿಕ ಸವಲತ್ತುಗಳನ್ನು ತಪ್ಪದೇ ನನ್ನ ಬಳಿ ಕೇಳಿ ಎಂದರು. ಕರ್ತವ್ಯಲೋಪವನ್ನು ಸಹಿಸುವುದಿಲ್ಲ. ಕಾಲೇಜಿನ ಫಲಿತಾಂಶವು ಉತ್ತಮವಾಗಬೇಕು. ಉತ್ತಮ ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳು, ಚಾರಿತ್ರ್ಯ ನಿರ್ಮಾಣಕ್ಕೆ ಆದ್ಯತೆಯನ್ನು ನೀಡಬೇಕು. ಇಡೀ ಕಾಲೇಜು ಕಟ್ಟಡ, ತರಗತಿ ಕೊಠಡಿಗಳು, ಪ್ರಾಂಗಣವು ಶುಚಿಯಾಗಿಡಲು ಕಾಳಜಿ ವಹಿಸಬೇಕೆಂದರು. ಮುಂದಿನ ದಿನಗಳಲ್ಲಿ ನಾನು ಕಾಲೇಜಿಗೆ ಆಕಸ್ಮಿಕ ಭೇಟಿ ನೀಡಲಿದ್ದು ತಪಾಸಣೆ ನಡೆಸಲಿದ್ದೇನೆ ಎಂದರು.ಸಭೆಯಲ್ಲಿ ಕಾಲೇಜಿನ ಮೂರು ಪ್ರಯೋಗಾಲಯಗಳ ದುರಸ್ತಿ, ಕಾಲೇಜಿಗೆ ನಾಮಫಲಕ ಅಳವಡಿಸುವುದು, ನೀರಿನ ಮೋಟಾರ ದುರಸ್ತಿ, ಧ್ವಜದ ಕಟ್ಟೆಯ ಸುತ್ತ ಇಂಟರ್ ಲಾಕ್ ಅಳವಡಿಸುವುದು, ಬೋಧಕೇತರ ಸಿಬ್ಬಂದಿ ಗೌರವಧನ ಪರಿಷ್ಕರಣೆಗೆ ದೇಶಪಾಂಡೆಯವರು ಮಂಜೂರಾತಿಯನ್ನು ನೀಡಿದರು.
ಸಭೆಯಲ್ಲಿ ತಹಸೀಲ್ದಾರ್ ಪ್ರವೀಣ ಹುಚ್ಚಣ್ಣನವರ, ಕಾಲೇಜು ಪ್ರಾಚಾರ್ಯ ರಮೇಶ ಕೆ.ಟಿ., ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸತ್ಯಜಿತ ಗಿರಿ ಹಾಗೂ ಸದಸ್ಯರು, ಕಾಲೇಜು ಉಪನ್ಯಾಸಕ ಸತೀಶ ಮಾನೆ, ಸಿಬ್ಬಂದಿ ಸೋಮಶೇಖರ, ಜಿಪಂ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿದ್ದರು.ಸಭೆಯ ಮುನ್ನ ನಡೆದ ಕಾರ್ಯಕ್ರಮದಲ್ಲಿ ಕುಸ್ತಿಯಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಸಾಧನೆಯನ್ನು ಮಾಡಿದ ಕುಸ್ತಿಪಟುವನ್ನು ದೆಹಲಿಯ ಪರೇಡ್‌ನಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಸಕರು ಸನ್ಮಾನಿಸಿದರು. 24ರಂದು ಭಟ್ಕಳದಲ್ಲಿ ವೈದ್ಯಕೀಯ ಶಿಬಿರ
ಭಟ್ಕಳ: ತಾಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಬಳಗ ನೇತೃತ್ವದಲ್ಲಿ ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ನ. 24ರಂದು ಬೆಳಗ್ಗೆ 9 ಗಂಟೆಯಿಂದ 12 ಗಂಟೆಯವರೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ ನಡೆಯಲಿದೆ.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೆ.ಎಸ್. ಹೆಗ್ಡೆ, ಆಸ್ಪತ್ರೆಯ ಮಾರ್ಕೆಟಿಂಗ್ ವಿಭಾಗದ ವ್ಯವಸ್ಥಾಪಕ ಜೈಸನ್ ಅವರು, ಶಿಬಿರದಲ್ಲಿ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಎಲುಬು ಮತ್ತು ಕೀಲು ತಜ್ಞ ಡಾ. ವಿಕ್ರಮ್ ಶೆಟ್ಟಿ, ಜನರಲ್ ಸರ್ಜನ್ ಡಾ. ಅಭಿಜಿತ್ ಎಸ್ ಶೆಟ್ಟಿ, ಎಲುಬು ಮತ್ತು ಕೀಲು ತಜ್ಞ ಡಾ. ಪೃಥ್ವಿ ಕೆ.ಪಿ., ಪ್ಲಾಸ್ಟಿಕ್ ಸರ್ಜನ್ ಡಾ. ಭರತ್ ಜೆ ನಾಯ್ಕ ಮುಂತಾದ ವೈದ್ಯರ ತಂಡ ವೈದ್ಯಕೀಯ ತಪಾಸಣೆ, ಅಗತ್ಯ ಸಲಹೆ ನೀಡಲಿದ್ದಾರೆ.ಕೆ.ಎಸ್. ಹೆಗ್ಡೆ ಆಸ್ಪತ್ರೆಯಿಂದ ಕ್ಷೇಮ ಹೆಲ್ತ್ ಕಾರ್ಡ್ ಎನ್ನುವ ವಿಮಾ ಯೋಜನೆಯೂ ಲಭ್ಯವಿದ್ದು, ಶಿಬಿರದಲ್ಲಿ ಆಸಕ್ತರು ವೈಯಕ್ತಿಕ ಮತ್ತು ಕುಟುಂಬ ಸದಸ್ಯರ ಆರೋಗ್ಯ ವಿಮಾ ಕೂಡ ಮಾಡಿಸಬಹುದು. ವಿಮಾ ಯೋಜನೆಗೆ ಆಧಾರ ಮತ್ತು ರೇಶನ್ ಕಾರ್ಡ್ ಝೆರಾಕ್ಸ್ ಪ್ರತಿ ಕಡ್ಡಾಯವಾಗಿದೆ ಎಂದರು.ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್ ಮಾತನಾಡಿದರು. ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಮನಮೋಹನ ನಾಯ್ಕ, ಕ್ರಿಯಾಶೀಲ ಗೆಳೆಯರ ಸಂಘದ ಅಧ್ಯಕ್ಷ ದೀಪಕ ನಾಯ್ಕ, ಪ್ರಧಾನ ಕಾರ್ಯದರ್ಶಿ ಪಾಂಡುರಂಗ ನಾಯ್ಕ ಮುಂತಾದವರಿದ್ದರು.