ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪದಾರ್ಥಗಳ ತೂಕದಲ್ಲಿ ವ್ಯತ್ಯಾಸ ಮಾಡುವುದು, ಇಕೈವೈಸಿ ಮಾಡಲು ಹಣ ಪಡೆಯುತ್ತಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿ ಬರುತ್ತಿದ್ದು ಈ ನಿಟ್ಟಿನಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತ್ಯದ ಅಧ್ಯಕ್ಷರಾದ ರಮೇಶ್ ರಾಜು ಅವರು ಮಾತನಾಡಿ, ೬೦೦ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ೪೦೦೦ ತಾಲ್ಲೂಕುಗಳಲ್ಲಿ ಹಾಗೂ ೧ ಲಕ್ಷಕ್ಕೂ ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ರೈತರ ಏಳಿಗೆಗಾಗಿ ಭಾರತೀಯ ಕಿಸಾನ್ ಸಂಘವು ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಸ್ಮಶಾನ, ಸರ್ಕಾರಿ ಶಾಲಾ ಕಾಲೇಜುಗಳ ಜಾಗ, ಮುಜರಾಯಿ ದೇವಾಲಯಗಳ ಜಾಗ, ಕೆರೆ ಕಟ್ಟೆಗಳ ಒತ್ತುವರಿ ತೆರವಿಗೆ ಕ್ರಮ ವಹಿಸಲು ಸಹಕಾರಿ ಆಗುವಂತೆ ಒತ್ತುವರಿ ಆಗಿರುವ ಬಗ್ಗೆ ನಿರ್ದಿಷ್ಟವಾದ ಮಾಹಿತಿಯನ್ನು ನೀಡುವಂತೆ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತ್ಯದ ಮನವಿ ಮೇರೆಗೆ ಜಿಲ್ಲೆಯ ರೈತರ ಸಮಸ್ಯೆಗಳನ್ನು ಕುರಿತು ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ೪೪,೯೯೯ ಪೌತಿಖಾತೆ ಮಾಡಲಾಗಿದೆ. ೩೭.೫೧೫ ಪೌತಿಖಾತೆಗೆ ಬಾಕಿ ಇದೆ. ಇವುಗಳಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು, ಕೋರ್ಟ್ ಪ್ರಕರಣಗಳಿವೆ. ಪೌತಿಖಾತೆ ಮಾಡಲು ೧೫ ದಿನ ಕಾಲಾವಕಾಶ ನೀಡಿ, ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದಿದ್ದಲ್ಲಿ ೧೫ ದಿನಗಳಲ್ಲಿ ಪೌತಿಖಾತೆ ಮಾಡಲಾಗುವುದು ಎಂದರು.

ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪದಾರ್ಥಗಳ ತೂಕದಲ್ಲಿ ವ್ಯತ್ಯಾಸ ಮಾಡುವುದು, ಇಕೈವೈಸಿ ಮಾಡಲು ಹಣ ಪಡೆಯುತ್ತಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿ ಬರುತ್ತಿದ್ದು ಈ ನಿಟ್ಟಿನಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತ್ಯದ ಅಧ್ಯಕ್ಷರಾದ ರಮೇಶ್ ರಾಜು ಅವರು ಮಾತನಾಡಿ, ೬೦೦ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ೪೦೦೦ ತಾಲ್ಲೂಕುಗಳಲ್ಲಿ ಹಾಗೂ ೧ ಲಕ್ಷಕ್ಕೂ ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ರೈತರ ಏಳಿಗೆಗಾಗಿ ಭಾರತೀಯ ಕಿಸಾನ್ ಸಂಘವು ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಪೌತಿಖಾತೆ, ಅಕ್ರಮ ಸಕ್ರಮ, ಪೋಡಿ, ದುರಸ್ತಿ , ಒತ್ತುವರಿ ತೆರವು, ಕಾಲು ದಾರಿ-ಬಂಡಿ ದಾರಿ ಬಿಡಿಸಿ ಕೊಡುವುದು, ಗ್ರಾಮ ಲೆಕ್ಕಾಧಿಕಾರಿ, ರೆವಿನ್ಯೂ ಇನ್ಸ್ಪೆಕ್ಟರ್ ಕೇಂದ್ರ ಸ್ಥಾನದಲ್ಲಿ ಇರುವಂತೆ, ಸ್ಮಶಾನ ಒತ್ತುವರಿ ಶಾಲಾ ಒತ್ತುವರಿ, ಮುಜರಾಯಿ ದೇವಾಲಯಗಳ ಒತ್ತುವರಿ ತೆರವು, ಕೃಷಿ ಉತ್ಪನ್ನ ಮಾರುಕಟ್ಟೆ ಒತ್ತುವರಿ ತೆರವು, ಸಂತೆಗೆ ಮೂಲಭೂತ ಸೌಕರ್ಯ ಕಲ್ಪಿಸುವುದು, ದನಗಳ ಜಾತ್ರೆ ನಡೆಸುವುದು, ಏತನೀರಾವರಿ ಯೋಜನೆ, ಕಾಲುವೆಗಳ ನೀರು ಹರಿಸುವುದು, ಜಲಜೀವನ್ ಮೀಷನ್ ಮೂಲಕ ಸರಬರಾಜು ಮಾಡುತ್ತಿರುವ ಕುಡಿಯುವ ನೀರಿನ ಸೌಲಭ್ಯ, ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನವಾಗಿರುವ ರೈತರಿಗೆ ಪರಿಹಾರ ಕಲ್ಪಿಸಲು, ಜಿಲ್ಲೆಯಲ್ಲಿ ಮಳೆ ಕೊರೆತೆಯಿಂದ ಬರಪರಿಸ್ಥಿತಿ ಉಂಟಾಗಿರುವುದರಿಂದ ರೈತರಿಗೆ ಎಕರೆಗೆ₹ ೫೦ ಸಾವಿರ ಪರಿಹಾರ, ರೈತರ ಸಾಲ ಮನ್ನಾ ಮಾಡುವಂತೆ ಮನವಿ, ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಂಬಲ ಬೆಲೆ ನೀಡುವಂತೆ ಮನವಿ, ಕಬ್ಬು ಬೆಳೆಗಾರಿಗೆ ಕಟಾವು ಮತ್ತು ಸಾಗಾಣಿಕೆ ವೆಚ್ಚ ಭರಿಸುವುದು, ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಮನವಿ ಮಾಡಿದರು.

ಜಂಟಿ ಕೃಷಿ ನಿರ್ದೇಶಕರಾದ ರಮೇಶ್ ಕುಮಾರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಯೋಗೀಶ್, ಪಶುಪಾಲನಾ ಇಲಾಖೆ ಉಪನಿರ್ದೇಶಕ ಹನುಮೇಗೌಡ, ಭಾರತೀಯ ಕಿಸಾನ್ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ್ಯದ ಹಾಸನ ಜಿಲ್ಲಾ ಅಧ್ಯಕ್ಷರಾದ ಮಲ್ಲಪ್ಪ, ಉಪಾಧ್ಯಕ್ಷರಾದ ಸಣ್ಣೇಗೌಡ ಹಾಗೂ ಸದಸ್ಯರು ಉಪಸ್ಥಿತರಿದ್ದರು.