ಮಂಡ್ಯ ಜಿಲ್ಲೆಯ ಯುವ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ ಒದಗಿಸುವ ಉದ್ದೇಶದಿಂದ ಈ ಕ್ರೀಡಾಂಗಣವನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಗ್ರಾಮೀಣ ಭಾಗದ ಪ್ರತಿಭಾವಂತ ಆಟಗಾರರಿಗೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ಅಗತ್ಯ ಮೂಲ ಸೌಕರ್ಯ ಕಲ್ಪಿಸುವುದು ಸರ್ಕಾರದ ಆಶಯವಾಗಿದೆ.

ಮಂಡ್ಯ:

ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸುಮಾರು 3 ಕೋಟಿ ರು. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಬಾಸ್ಕೆಟ್‌ ಬಾಲ್ ಕ್ರೀಡಾಂಗಣ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಶಾಸಕ ಪಿ.ರವಿಕುಮಾರ್ ತಿಳಿಸಿದರು.

ಈ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕರು ಕ್ರೀಡಾಂಗಣದ ನೀಲಿ ನಕ್ಷೆ ಪರಿಶೀಲಿಸಿ, ಕ್ರೀಡಾಂಗಣದ ಮುಖ್ಯ ದ್ವಾರವನ್ನು ಬಾಸ್ಕೆಟ್‌ ಬಾಲ್ ಮಾದರಿಯಲ್ಲಿ ಆಕರ್ಷಕವಾಗಿ ವಿನ್ಯಾಸಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಬಾಸ್ಕೆಟ್‌ ಬಾಲ್ ಕೋರ್ಟ್, ಆಧುನಿಕ ಗ್ಯಾಲರಿ, ಆಟಗಾರರ ವಿಶ್ರಾಂತಿ ಕೊಠಡಿ, ಬೆಳಕು ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ವಿವಿಧ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದರು.

ಜಿಲ್ಲೆಯ ಯುವ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ ಒದಗಿಸುವ ಉದ್ದೇಶದಿಂದ ಈ ಕ್ರೀಡಾಂಗಣವನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಗ್ರಾಮೀಣ ಭಾಗದ ಪ್ರತಿಭಾವಂತ ಆಟಗಾರರಿಗೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ಅಗತ್ಯ ಮೂಲ ಸೌಕರ್ಯ ಕಲ್ಪಿಸುವುದು ಸರ್ಕಾರದ ಆಶಯವಾಗಿದೆ ಎಂದು ತಿಳಿಸಿದರು.

ಕ್ರೀಡಾಂಗಣ ನಿರ್ಮಾಣದಿಂದ ರಾಜ್ಯ, ರಾಷ್ಟ್ರಮಟ್ಟದ ಕ್ರೀಡೆಗಳ ಆಯೋಜನೆ, ಗ್ರಾಮೀಣ ಪ್ರತಿಭೆಗಳಿಗೆ ತರಬೇತಿ ಹಾಗೂ ಸ್ಪರ್ಧಾತ್ಮಕ ವೇದಿಕೆ, ಕ್ರೀಡಾ ಪ್ರವಾಸೋದ್ಯಮಕ್ಕೆ ಉತ್ತೇಜನ, ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ವೃದ್ಧಿಗೆ ನೆರವು, ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಹಾಗೂ ಕ್ರೀಡಾ ಚಟುವಟಿಕೆಗಳ ವಿಸ್ತರಣೆ ಹಾಗೂ ಜಿಲ್ಲೆಯನ್ನು ರಾಜ್ಯದ ಪ್ರಮುಖ ಕ್ರೀಡಾ ಕೇಂದ್ರವಾಗಿ ರೂಪಿಸಲು ಸಹಕಾರಿಯಾಗಲಿದೆ ಎಂದರು.

ಈ ವೇಳೆ ಕ್ರೀಡಾ ಇಲಾಖೆ ಅಧಿಕಾರಿಗಳು ಹಾಗೂ ಎಂಜಿನಿಯರ್‌ಗಳು ಉಪಸ್ಥಿತರಿದ್ದರು.

ಕಾರ್ಮಿಕರು ತುರ್ತಾಗಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಿಮಂಡ್ಯ: ಅಸಂಘಟಿತ ವಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ವಿವಿಧ ವರ್ಗದ ಅಸಂಘಟಿತ ಕಾರ್ಮಿಕರು ತುರ್ತಾಗಿ ಸ್ಮಾರ್ಟ್ ಕಾರ್ಡ್ ಗಳನ್ನು ಪಡೆದುಕೊಳ್ಳುವಂತೆ ಕಾರ್ಮಿಕ ನಿರೀಕ್ಷಕರು ತಿಳಿಸಿದ್ದಾರೆ.

ಅಸಂಘಟಿತ ಕಾರ್ಮಿಕರಾದ ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್‌ಗಳು, ಮೆಕ್ಯಾನಿಕ್, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು ಹಾಗೂ ಭಟ್ಟಿಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿಬದಿ ವ್ಯಾಪಾರಿಗಳು, ಹೋಟೇಲ್ ಕಾರ್ಮಿಕರು, ಫೋಟೋಗ್ರಾಫರ್‌ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾಭವನ/ಟೆಂಡ್/ಪೆಂಡಾಲ್‌ಗಳ ಕೆಲಸ ನಿರ್ವಹಿಸುವ ಕಾರ್ಮಿಕರು, ಬೀಡಿಕಾರ್ಮಿಕರು ಗಿಗ್ ವೃತ್ತಿ ನಿರ್ವಹಿಸುತ್ತಿರುವ ಡೆಲಿವರಿ ಕಾರ್ಮಿಕರು, ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು ಇತ್ಯಾದಿ ಎಲ್ಲಾ ವರ್ಗದ ಅಸಂಘಟಿತ ಕಾರ್ಮಿಕರು ಹಾಗೂ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಡಿ ನೋಂದಣಿಯಾಗಿರುವ ಕಾರ್ಮಿಕರಾದ ಚಾಲಕರು ಕಾರ್ಮಿಕ ಇಲಾಖೆಯಡಿ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ ಈಗಾಗಲೇ ನೊಂದಾಯಿಸಿಕೊಂಡಿರುವ ಕಾರ್ಮಿಕರು ತುರ್ತಾಗಿ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಗಳನ್ನು ಭೇಟಿ ಮಾಡಿ ಸ್ಮಾರ್ಟ್ ಕಾರ್ಡ್‌ಗಳನ್ನು ಪಡೆದುಕೊಳ್ಳುವಂತೆ ತಾಲೂಕಿನ 1 ಮತ್ತು 2 ನೇ ವೃತ್ತದ ಕಾರ್ಮಿಕ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.