ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಕ್ರಮ

| Published : Feb 14 2024, 02:20 AM IST

ಸಾರಾಂಶ

ಹೊಸಕೋಟೆ: ನಗರವನ್ನು ಖಾಸಗಿ ಬಡಾವಣೆಗಳಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಹೊಸಕೋಟೆ: ನಗರವನ್ನು ಖಾಸಗಿ ಬಡಾವಣೆಗಳಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ನಗರದ ನಗರಸಭೆ ವ್ಯಾಪ್ತಿಗೆ ಸೇರಿದ 16, 17, 18 ಹಾಗೂ 19ನೇ ವಾರ್ಡ್ ಗಳಲ್ಲಿ ಸುಮಾರು 4 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿ ಯೋಜನೆ ಅಡಿಯಲ್ಲಿ ನಾಲ್ಕು ಕೋಟಿ ಅನುದಾನವನ್ನ ಪ್ರಥಮವಾಗಿ ಒದಗಿಸಿ ಅಗತ್ಯವಾದ ಚರಂಡಿ, ಸಿಸಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಗುತ್ತಿಗೆದಾರರು ಖಾಸಗಿ ಬಡಾವಣೆಗಳಲ್ಲಿ ನಿರ್ಮಾಣ ಮಾಡುವಂತೆ ಚರಂಡಿಗಳ ಮೇಲೆ ಸ್ಲಾಬ್ ಹೊದಿಕೆ ಮಾಡಿ ಸಿಸಿ ರಸ್ತೆಯನ್ನು ಗುಣಮಟ್ಟದಿಂದ ಮಾಡಬೇಕು ಎಂದರು.

ಕಾಂಗ್ರೆಸ್ ಮುಖಂಡ ಫರ್ವೇಜ್‌, ಉದ್ಯಮಿ ಬಿ.ವಿ.ಬೈರೇಗೌಡ, ಮಾತಂಗ ಫೌಂಡೇಶನ್ ಉಪಾಧ್ಯಕ್ಷ ಡಾ.ಎಚ್ ಎಂ. ಸುಬ್ಬರಾಜು, ನಗರಸಭೆ ಸದಸ್ಯರಾದ ಕೇಶವಮೂರ್ತಿ, ಗೌತಮ್, ಜಮುನಾ ಹರೀಶ್, ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ವಿಜಯಕುಮಾರ್, ಕಾಂಗ್ರೆಸ್ ಮುಖಂಡರಾದ ಅಜು, ಅಂಜು, ಫರ್ವೀಜ್, ಖಲೀಲ್, ಸಮೀರ್, ಇಮ್ರಾನ್, ಇಂತಿಯಾಜ್ ಪಾಷ, ಖದೀರ್ ಅಹಮದ್ ಇತರರು ಹಾಜರಿದ್ದರು.ಫೋಟೋ : 13 ಹೆಚ್‌ಎಸ್‌ಕೆ 1 ಮತ್ತು 2

ಹೊಸಕೋಟೆ ನಗರದ ಎಆರ್ ಬಡಾವಣೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಭೂಮಿ ಪೂಜೆ ನೆರವೇರಿಸಿದರು.