ಭದ್ರಾ ಮೇಲ್ದಂಡೆ ಯೋಜನೆ ಅನುದಾನ ಬಿಡುಗಡೆಗೆ ಕ್ರಮ

| Published : Jun 13 2024, 12:51 AM IST

ಭದ್ರಾ ಮೇಲ್ದಂಡೆ ಯೋಜನೆ ಅನುದಾನ ಬಿಡುಗಡೆಗೆ ಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಸರ್ಕಾರದಿಂದ 5300 ಕೋಟಿ ರು. ಅನುದಾನ ಬಿಡುಗಡೆಗೊಳಿಸಿ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಪೂರ್ಣಗೊಳಿಸಿ ಬಯಲು ಸೀಮೆಗೆ ನೀರು ಹರಿಸುವುದೇ ನನ್ನ ಪ್ರಥಮ ಆದ್ಯತೆಯಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾಕೇಂದ್ರ ಸರ್ಕಾರದಿಂದ 5300 ಕೋಟಿ ರು. ಅನುದಾನ ಬಿಡುಗಡೆಗೊಳಿಸಿ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಪೂರ್ಣಗೊಳಿಸಿ ಬಯಲು ಸೀಮೆಗೆ ನೀರು ಹರಿಸುವುದೇ ನನ್ನ ಪ್ರಥಮ ಆದ್ಯತೆಯಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.ತಾಲೂಕಿನ ಪಟ್ಟನಾಯಕನಹಳ್ಳಿ ಐತಿಹಾಸಿಕ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಶಾಖ ಮಠ ಸ್ಪಟಿಕಪುರಿ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ ಶ್ರೀ ನಂಜಾವಧೂತ ಮಹಾ ಸ್ವಾಮೀಜಿಗಳ ಆರ್ಶೀವಾದ ಪಡೆದು ಬುಧವಾರ ಮಾತನಾಡಿದರು.

ಈ ಹಿಂದೆ ರಾಜ್ಯ ಸರ್ಕಾರದಲ್ಲಿ ನಾನು ನೀರಾವರಿ ಮಂತ್ರಿಯಾಗಿದ್ದಾಗ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯನ್ನು ರಾಷ್ಟ್ರೀಯ ನೀರಾವರಿ ಯೋಜನೆಯಲ್ಲಿ ಸೇರ್ಪಡೆ ಮಾಡಿ 5,300 ಕೋಟಿ ರು. ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೆ, ನಮ್ಮ ಮನವಿಗೆ ಸ್ಪಂದಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗೆ ಅನುದಾನ ಮೀಸಲಿಟ್ಟಿದ್ದಾರೆ. ಈ ಅನುದಾನ ಶೀಘ್ರ ಬಿಡುಗಡೆಗೊಳಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಚಿತ್ರದುರ್ಗ ಜಿಲ್ಲೆಯ ಮಹತ್ವಾಕಾಂಕ್ಷೆಯ ತುಮಕೂರು-ದಾವಣಗೆರೆ ರೈಲ್ವೆ ಮಾರ್ಗ ಶೀಘ್ರವಾಗಿ ಪ್ರಾರಂಭಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಚಿತ್ರದುರ್ಗ ಜಿಲ್ಲೆ ಬಯಲು ಸೀಮೆಯಾಗಿದ್ದು, ಈ ಜಿಲ್ಲೆಗೆ ಕೈಗಾರಿಕೆ ಮತ್ತು ಕೌಶಲ್ಯ ಅಭಿವೃದ್ಧಿಯ ಯೋಜನೆಗಳನ್ನು ಸ್ಥಾಪನೆ ಮಾಡುವ ಮೂಲಕ ಉದ್ಯೋಗ ಸೃಷ್ಟಿ ಮಾಡಿ ನಿರುದ್ಯೋಗಿ ಯುವಕರಿಗೆ, ಯುವತಿಯರಿಗೆ ಉದ್ಯೋಗ ನೀಡಲು ಹೆಚ್ಚು ಆದ್ಯತೆ ನೀಡುತ್ತೇನೆ ಎಂದರು.

ಕ್ಷೇತ್ರದ ಜನರ ವಿಶ್ವಾಸಕ್ಕೆ ಬದ್ಧನಾಗಿ ಅಭಿವೃದ್ಧಿ ಮಾಡುವ ಗುರಿಯೊಂದಿಗೆ ಮುನ್ನಡೆಯುತ್ತೇನೆ. ನನ್ನ ಮೇಲೆ ವಿಶ್ವಾಸವಿಟ್ಟು ಮತ ನೀಡಿ ಸಂಸದನನ್ನಾಗಿ ಆಯ್ಕೆ ಮಾಡಿದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತದಾರರಿಗೆ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ಮುಖಂಡರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಮಾತನಾಡಿ, ಮಧ್ಯ ಕರ್ನಾಟಕದ ಹಲವಾರು ಜಿಲ್ಲೆಗಳ ಪಾಲಿಗೆ ವರದಾನವಾಗಿರುವ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯನ್ನು ಹೆಚ್ಚು ಆಸಕ್ತಿ ವಹಿಸಿ ಪೂರ್ಣಗೊಳಿಸುವ ಮೂಲಕ ರೈತರಿಗೆ ನೀರು ಕೊಡುವಂತಹ ಕೆಲಸ ಮಾಡಬೇಕು. ಯಾವುದೇ ತಾರತಮ್ಯ ಮಾಡದೇ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ತಾಲೂಕುಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಎಲ್ಲಾ ಸಂಸದರಿಗೆ ಮಾದರಿಯಾಗಬೇಕೆಂದು ಸಲಹೆ ನೀಡಿದರು. ಕನಕಗಿರಿ ಮಾಜಿ ಶಾಸಕ ಬಸವರಾಜು ದಡೆಸಾಬೂರ , ಮುಖಂಡರು ಹಾಜರಿದ್ದರು.