ಆನಂದ ಮಹಲ ಅಭಿವೃದ್ಧಿಗೆ ಕ್ರಮ: ಸಚಿವ ಕೃಷ್ಣಬೈರೇಗೌಡ

| Published : Apr 14 2025, 01:22 AM IST

ಆನಂದ ಮಹಲ ಅಭಿವೃದ್ಧಿಗೆ ಕ್ರಮ: ಸಚಿವ ಕೃಷ್ಣಬೈರೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನಗರದ ಆನಂದ ಮಹಲ್‌ಗೆ ಭೇಟಿ ನೀಡಿ, ಕಟ್ಟಡವನ್ನು ವೀಕ್ಷಣೆ ಮಾಡಿದರು. ಆನಂದ ಮಹಲ್ ಕಂದಾಯ ಇಲಾಖೆಗೆ ಒಳಪಟ್ಟಿರುವುದರಿಂದ ಈ ಐತಿಹಾಸಿಕ ಕಟ್ಟಡವನ್ನು ಸಾರ್ವಜನಿಕ ಉಪಯೋಗಕ್ಕಾಗಿ ಬಳಸಿಕೊಂಡು, ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾದ ಚಟುವಟಿಕೆಗಳು ಸೇರಿದಂತೆ ಕೈಗೊಳ್ಳಬಹುದಾದ ಅಭಿವೃದ್ಧಿ ಕಾರ್ಯ ಕೈಗೊಂಡು ಉಪಯೋಗ ಮಾಡಿಕೊಳ್ಳಬೇಕು ಎಂದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನಗರದ ಆನಂದ ಮಹಲ್‌ಗೆ ಭೇಟಿ ನೀಡಿ, ಕಟ್ಟಡವನ್ನು ವೀಕ್ಷಣೆ ಮಾಡಿದರು. ಆನಂದ ಮಹಲ್ ಕಂದಾಯ ಇಲಾಖೆಗೆ ಒಳಪಟ್ಟಿರುವುದರಿಂದ ಈ ಐತಿಹಾಸಿಕ ಕಟ್ಟಡವನ್ನು ಸಾರ್ವಜನಿಕ ಉಪಯೋಗಕ್ಕಾಗಿ ಬಳಸಿಕೊಂಡು, ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾದ ಚಟುವಟಿಕೆಗಳು ಸೇರಿದಂತೆ ಕೈಗೊಳ್ಳಬಹುದಾದ ಅಭಿವೃದ್ಧಿ ಕಾರ್ಯ ಕೈಗೊಂಡು ಉಪಯೋಗ ಮಾಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ತಹಸೀಲ್ದಾರ್‌ ಪ್ರಶಾಂತ ಚನಗೊಂಡ, ಅಮೀನ ಹುಲ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.