ಬಾಗಲಕೋಟೆ: ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಸಾರ್ವಜನಿಕ ವಿತರಣಾ ಪದ್ಧತಿಯಡಿ ಅರ್ಹ ಫಲಾನುಭವಿಗಳಿಗೆ ಎನ್.ಎಫ್.ಎಸ್.ಎ ಮತ್ತು ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಪಡಿತರ ವಿತರಿಸಲಾಗುತ್ತಿದೆ.

ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರುತ್ತಿರುವುದು ಕಂಡುಬಂದಲ್ಲಿ ಅಂತಹವರ ಪಡಿತರ ಚೀಟಿಯನ್ನು 6 ತಿಂಗಳ ಅವಧಿಗೆ ಅಮಾನತ್ತುಪಡಿಸುವುದು ಮತ್ತು ಸದರ ಆಹಾರಧಾನ್ಯಕ್ಕೆ ಎದುರಾಗಿ ಮುಕ್ತ ಮಾರುಕಟ್ಟೆಯ ದರದಂತೆ ದಂಡ ವಿಧಿಸಲು ಸರ್ಕಾರದಿಂದ ಆದೇಶಿಸಲಾಗಿದೆ.