ಕನ್ನಡಪ್ರಭ ವಾರ್ತೆ ಬಾಗಲಕೋಟೆಜಿಲ್ಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ವಿಗ್ರಹಗಳ ತಯಾರಿಕೆ, ಮಾರಾಟ ಹಾಗೂ ವಿಸರ್ಜನೆ ಮಾಡುತ್ತಿರುವುದು ಕಂಡುಬಂದಲ್ಲಿ ನಿದರ್ಾಕ್ಷಣ್ಯವಾಗಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜಿಲ್ಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ವಿಗ್ರಹಗಳ ತಯಾರಿಕೆ, ಮಾರಾಟ ಹಾಗೂ ವಿಸರ್ಜನೆ ಮಾಡುತ್ತಿರುವುದು ಕಂಡುಬಂದಲ್ಲಿ ನಿದರ್ಾಕ್ಷಣ್ಯವಾಗಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಜರುಗಿದ ರಾಜ್ಯಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಜಾಗೃತಿಯ ಪೋಸ್ಟರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಪ್ರತಿ ವರ್ಷದಂತೆ ಈ ಬಾರಿಯು ಗಣೇಶ ಹಬ್ಬವು ಸಮೀಪಿಸುತ್ತಿದ್ದು, ಗಣೇಶೋತ್ಸವ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಾರ್ವಜನಿಕರು ಮಣ್ಣನಿಂದ ತಯಾರಿಸಿದ ಹಾಗೂ ಪರಿಸರ ಸ್ನೇಹಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟಕ್ಕೆ ಅವಕಾಶ ನೀಡಬಾರದು. ಜಿಲ್ಲೆಯಲ್ಲಿ ಪಿಒಪಿ ಗಣೇಶ ವಿಗ್ರಹಗಳ ಮಾರಟ ನಡೆಯದಂತೆ ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸಬೇಕು. ನಿಯಮ ಉಲ್ಲಂಘಿಸಿ ಪಿಒಪಿ ವಿಗ್ರಹಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವುದು, ಸ್ವಚ್ಚತೆಗೆ ಆದ್ಯತೆ ನೀಡುವುದು ಹಾಗೂ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗಣೇಶೋತ್ಸವವನ್ನು ಪರಿಸರ ಸ್ನೇಹಿಯಾಗಿ ಹಾಗೂ ಸೌಹಾರ್ದಯುತವಾಗಿ ಆಚರಿಸಬೇಕು. ಗಣೇಶೋತ್ಸವ ಮಂಡಳಿಗಳು ವಿವಿಧ ಇಲಾಖೆ ಹಾಗೂ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಖಾ.ಎಂ, ಜಿಪಂ ಯೋಜನಾ ನಿಏರ್ಶಕ ಸಿದ್ದರಾಮೇಶ್ವರ ಉಕ್ಕಲಿ, ಪ್ರವಾಸೋದ್ಯಮ ಇಲಾಖೆಯ ಉಪನಿದೇಶಕ ಜಿ.ಎಸ್.ಹಿತ್ತಲಮನಿ, ಜಿಲ್ಲಾ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾಧಿಕಾರಿ ಲೋಕೇಶ ಎಚ್.ಕೆ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ, ಜಿ.ಪಂ ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ ಸೇರಿದಂತೆ ಇತರರು ಇದ್ದರು.

ಗಣೇಶ ವಿಗ್ರಹಗಳ ವಿಸರ್ಜನೆ ಸಂದರ್ಭದಲ್ಲಿ ನದಿ, ಕೆರೆ ಸೇರಿದಂತೆ ಜಲಮೂಲಗಳು ಕಲುಷಿತವಾಗದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದು. ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಪ್ರತಿವರ್ಷ ಬಾಗಲಕೋಟೆ ನಗರದ ಆಯ್ದ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ಸಂಚಾರಿ ತೊಟ್ಟಿ ವ್ಯವಸ್ಥೆ ಮಾಡಲು ತಿಳಿಸಿದ ಅವರು ಗಣೇಶೋತ್ಸವ ಮಂಡಳಿಗಳು ಸಂಬಂಧಿಸಿದ ಇಲಾಖೆಯಿಂದ ಅಗತ್ಯ ಅನುಮತಿ ಪಡೆದು ಹಬ್ಬ ಆಚರಿಸಬೇಕು.

ಸಂಗಪ್ಪ, ಜಿಲ್ಲಾಧಿಕಾರಿ