ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಮುಂಜಾಗ್ರತೆವಹಿಸಿ ಸಿದ್ಧತೆ ಕ್ಯೆಗೊಳ್ಳುವಂತೆ ತಿಳಿಸಿದರ ಲ್ಲದೆ, ನಗರಗಲ್ಲಿ ಪುಟ್ ಪಾತ್ ತೆರವುಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಸೂಚಿಸಿದರು. ಉದ್ಯಾವನಗಳಲ್ಲಿ ಹೆಚ್ಚಿನ ಗಿಡಮರಗಳನ್ನು ಬೆಳೆಸಲು ಕ್ರಮಹಿಸಬೇಕು ಹಾಗೂ ನಗರಗಳಲ್ಲಿ ಪಾಕಿಂಗ್ ಸ್ಥಳ ನಿಗದಿ ಪಡಿಸಿ ಪಾಕಿಂಗ್ ಗೆ ಅವಕಾಶ ಕಲ್ಪಿಸುವಂತೆ ಸೂಚಿಸಿದರು. ಜಿಲ್ಲೆಯಲ್ಲಿನ ಪ್ರವಾಸಿ ಸ್ಥಳಗಳಲ್ಲಿ ಹಿರಿಯ ನಾಗರೀಕರಿಗೆ, ಮಹಿಳೆಯರಿಗೆ, ಅಂಗವಿಕಲರಿಗೆ ಶೌಚಾಲಯ ನಿರ್ಮಾಣಬೇಕು ಎಲ್ಲಾ ರೀತಿಯ ಅನುಕೂಲವಿರು ವಂತೆ ಕ್ರಮವಹಿಸಲು ನಿರ್ದೇಶನ ನೀಡಿದರು.
ಕನ್ನಡಪ್ರಭ ವಾರ್ತೆ ಹಾಸನ
ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಸಿ ಕಸ ಮತ್ತು ಒಣ ಕಸವನ್ನು ಕಡ್ಡಾಯವಾಗಿ ಬೇರ್ಪಡಿಸಿ ತ್ಯಾಜ್ಯ ವಿಲೇವಾರಿ ವಾಹನಗಳಿಗೆ ನೀಡುವಂತೆ ಸಾರ್ವಜನಿಕರಿಗೆ ಹೆಚ್ಚಿನ ತಿಳಿವಳಿಕೆ ನೀಡಬೇಕೆಂದು ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ವಿವಿದ ವಿಷಯಗಳ ಕುರಿತು ಸಭೆ ನಡೆಸಿ ಮಾತನಾಡಿದ ಅವರು ತ್ಯಾಜ್ಯವನ್ನು ರಸ್ತೆಬದಿಯಲ್ಲಿ ಮತ್ತಿತ್ತರ ಸ್ಥಳಗಳಲ್ಲಿ ವಿಲೇವಾರಿ ಮಾಡುವವರನ್ನು ಗುರುತಿಸಿ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ತ್ಯಾಜ್ಯ ವಿಲೇವಾರಿ ವ್ಯವಸ್ಥಿತವಾಗಿ ಆಗಬೇಕು ಈ ನಿಟ್ಟಿನಲ್ಲಿ ಸಾರ್ವಜನಿಕರು ಎಲ್ಲೆಂದರೆ ಅಲ್ಲಿ ಎಸೆಯದಂತೆ ಅರಿವು ಮೂಡಿಸಲು ಹೆಚ್ಚಿನ ಐ.ಇ.ಸಿ ಚಟುವಟಿಕೆ ಏರ್ಪಡಿಸುವಂತೆ ತಿಳಿಸಿದರು.ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಮುಂಜಾಗ್ರತೆವಹಿಸಿ ಸಿದ್ಧತೆ ಕ್ಯೆಗೊಳ್ಳುವಂತೆ ತಿಳಿಸಿದರ ಲ್ಲದೆ, ನಗರಗಲ್ಲಿ ಪುಟ್ ಪಾತ್ ತೆರವುಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಸೂಚಿಸಿದರು. ಉದ್ಯಾವನಗಳಲ್ಲಿ ಹೆಚ್ಚಿನ ಗಿಡಮರಗಳನ್ನು ಬೆಳೆಸಲು ಕ್ರಮಹಿಸಬೇಕು ಹಾಗೂ ನಗರಗಳಲ್ಲಿ ಪಾಕಿಂಗ್ ಸ್ಥಳ ನಿಗದಿ ಪಡಿಸಿ ಪಾಕಿಂಗ್ ಗೆ ಅವಕಾಶ ಕಲ್ಪಿಸುವಂತೆ ಸೂಚಿಸಿದರು. ಜಿಲ್ಲೆಯಲ್ಲಿನ ಪ್ರವಾಸಿ ಸ್ಥಳಗಳಲ್ಲಿ ಹಿರಿಯ ನಾಗರೀಕರಿಗೆ, ಮಹಿಳೆಯರಿಗೆ, ಅಂಗವಿಕಲರಿಗೆ ಶೌಚಾಲಯ ನಿರ್ಮಾಣಬೇಕು ಎಲ್ಲಾ ರೀತಿಯ ಅನುಕೂಲವಿರು ವಂತೆ ಕ್ರಮವಹಿಸಲು ನಿರ್ದೇಶನ ನೀಡಿದರು.ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಶಾಲೆಗಳು ಇ-ಖಾತಾ ಮಾಡಿಸಬೇಕು. ಶಿಕ್ಷಣ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸಮನ್ವಯತೆ ಯಿಂದ ಕರ್ತವ್ಯ ನಿರ್ವಹಿಸುವ ಮೂಲಕ ಖಾತೆಗೆ ಬಾಕಿಯಿರುವುದನ್ನು ಪೂರ್ಣಗೊಳಿಸಲು ಸೂಚನೆ ನೀಡಿದರು.ಹಸಿರು ಹಾಸನ ಯೋಜನೆಯಡಿ ಸ್ವಯಂ ಸೇವಾ ಸಂಸ್ಥೆಗಳಿಗೂ ಸಹ ಅವಕಾಶ ಕಲ್ಪಿಸಿ ಶಾಲೆಗಳ ಆವರಣಗಳಲ್ಲಿ ಗಿಡಗಳ ನೆಟ್ಟು ಬೆಳೆಸಬೇಕು ಹಾಗೂ ಶಾಲೆಯ ಪ್ರತಿಯೊಂದು ಮಕ್ಕಳ ಹೆಸರನ್ನು ಒಂದೊಂದು ಗಿಡಕ್ಕಿಟ್ಟು ಪೋ?ಣೆಗೆ ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು. ಹಸಿರು ಹಾಸನದಡಿಯಲ್ಲಿ ಗಿಡ ನೆಟ್ಟು ಬೆಳೆಸಲು ಜೂನ್ ೫ ರಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾಂಕೇತಿಕವಾಗಿ ಚಾಲನೆ ನೀಡಲು ಕ್ರಮವಹಿಸಬೇಕು ಹಾಗೂ ಒಂದೊಂದು ಗಿಡಗಳಿಗೆ ಪೌರ ಕಾರ್ಮಿಕರ ಹೆಸರನ್ನಿಟ್ಟು ಪೋ?ಣೆ ಮಾಡಲು ಅಗತ್ಯ ಕ್ರಮವಹಿಸಿ ಎಂದು ತಿಳಿಸಿದರು.ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಲರಾಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅನಿಲ್ ಹಾಗೂ ಮತ್ತಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.