ಸಾರಾಂಶ
ಬೆಂಗಳೂರು-ಹುಬ್ಬಳ್ಳಿ ವಂದೇ ಭಾರತ್ ರೈಲನ್ನು ಬೆಳಗಾವಿಗೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಂಗಳೂರು-ಹುಬ್ಬಳ್ಳಿ ವಂದೇ ಭಾರತ್ ರೈಲನ್ನು ಬೆಳಗಾವಿಗೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು-ಹುಬ್ಬಳ್ಳಿ ವಂದೇ ಭಾರತ್ ರೈಲು ಬೆಳಗಾವಿವರೆಗೆ ವಿಸ್ತರಣೆಗೆ ತಾಂತ್ರಿಕ ಸಮಸ್ಯೆಯ ಕಾರಣವನ್ನು ಅಧಿಕಾರಿಗಳು ಹೇಳುತ್ತಾರೆ. ಈ ಭಾಗದ ಜನತೆಯ ಬೇಡಿಕೆ ಹಿನ್ನೆಲೆಯಲ್ಲಿ ಈ ರೈಲು ಸೇವೆಯನ್ನು ಬೆಳಗಾವಿವರೆಗೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು. ಸಂಸದ ಜಗದೀಶ ಶೆಟ್ಟರ ಜೊತೆಗೆ ಚರ್ಚಿಸಿ ಶೀಘ್ರದಲ್ಲೇ ರೈಲು ವಿಸ್ತರಿಸಲಾಗುವುದು ಎಂದು ಹೇಳಿದರು.ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಗಲಾಟೆ ನಡೆದಿರುವ ಕೃತ್ಯ ಪೂರ್ವನಿಯೋಜಿತ ಕೃತ್ಯದಂತೆ ಕಾಣುತ್ತದೆ ಎಂದವರು ಪ್ರತಿಕ್ರಿಯಿಸಿದರು.