ಸಾರಾಂಶ
ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಆಟೋಗಳಿಗೆ ನೂತನ ಎನ್‌ಪಿಕೆ ನಂಬರ್ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಠಾಣಾಧಿಕಾರಿ ಮಂಜುನಾಥ್ ಹೇಳಿದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಆಟೋಗಳಿಗೆ ನೂತನ ಎನ್ ಪಿ ಕೆ ನಂಬರ್ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಥಳೀಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಹೇಳಿದರು.ಇಲ್ಲಿಯ ಪೊಲೀಸ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ ಎಂ ಪಿ ಕೆ ವಿತರಣಾ ಕಾರ್ಯಕ್ರಮದಲ್ಲಿ ಆಟೋಗೆ ನೂತನ ಎಂ ಪಿ ಕೆ ಸ್ಟಿಕ್ಕರ್ ಅನ್ನು ಅಳವಡಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ಅವರು ಆಟೋ ಗಳಿಗೆ ಈ ಹಿಂದೆ ಎನ್ ಪಿಕೆ ನಂಬರ್ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದ್ದು ಅದು ದುರುಪಯೋಗ ವಾಗುತ್ತಿರುವುದನ್ನು ಮನಗಂಡು ನೂತನವಾಗಿ ಎನ್ ಪಿಕೆ ನಂಬರ್ ಅಳವಡಿಸಲಾಗುತ್ತಿದೆ. ಇದರಲ್ಲಿ ಕೊಡಗು ಜಿಲ್ಲಾ ಪೊಲೀಸ್ ಎಂದು ನಮೂದಿಸಲಾಗಿದ್ದು ಸಮಸ್ಯೆಗಳಾದಲ್ಲಿ ಪತ್ತೆಗೆ ನೆರವಾಗಲಿದೆ ಎಂದರು.ನಾಪೋಕ್ಲು ಪಟ್ಟಣದಲ್ಲಿ ರಸ್ತೆ ಕಿರಿದಾಗಿದ್ದು ಆಟೋ ನಿಲ್ದಾಣಕ್ಕೆ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆ ವತಿಯಿಂದ
ಶೀಘ್ರದಲ್ಲಿ ಸ್ಥಳಾವಕಾಶ ಕಲ್ಪಿಸಲಾಗುವುದು. ಪ್ರತಿದಿನ ಆಗುತ್ತಿರುವ ವಾಹನ ದಟ್ಟಣೆ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಂಗಡಿ ಮಾಲಿಕರು ತಮ್ಮ ಅಂಗಡಿಗಳ ಎದುರು ವಾಹನಗಳನ್ನು ನಿಲುಗಡೆ ಮಾಡುತ್ತಿದ್ದು ಸಮಸ್ಯೆ ಉಂಟಾಗುತ್ತಿದೆ. ಇದಕ್ಕೆ ಪರಿಹಾರ ಕೈಗೊಳ್ಳಲಾಗಿದೆ ಎಂದರು.ಮದ್ಯಪಾನ ಮಾಡಿ ಆಟೋ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕುಡಿದು ಹಣ ಪೋಲು ಮಾಡಬೇಡಿ. ಕುಟುಂಬ ನಿರ್ವಹಣೆ ಯತ್ತ ಗಮನ ಹರಿಸಿ ಎಂದು ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಸುಕುಮಾರ್, ಕಾರ್ಯದರ್ಶಿ ಸತೀಶ್, ಗೌರವ ಅಧ್ಯಕ್ಷ ರಜಾಕ್ ಎಂ ಇ ಹಾಗೂ ಸಂಘದ ಸದಸ್ಯರು, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.)
;Resize=(128,128))
;Resize=(128,128))
;Resize=(128,128))
;Resize=(128,128))