ಸಾರಾಂಶ
ಪೌರ ಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ನಿವೇಶನ ಒದಗಿಸಲು ಕ್ರಮ ಕೈಗೊಂಡಿದ್ದು, ತಾಂತ್ರಿಕ ಸಮಸ್ಯೆ ಪರಿಹರಿಸಿ ನಿವೇಶನ ವಿತರಿಸಲಾಗುವುದು ಎಂದು ಕೆ. ದುರುಗಣ್ಣ ಭರವಸೆ ನೀಡಿದರು.
ಕಂಪ್ಲಿ: ಗಾಳಿ, ಮಳೆ, ಬಿಸಿಲು, ಚಳಿ ಎನ್ನದೆ, ದಿನನಿತ್ಯ ನಸುಕಿನ ಜಾವದಿಂದ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಪೌರ ಕಾರ್ಮಿಕರು ನೈಜ ಕಾಯಕ ಯೋಗಿಗಳು, ಸ್ವಚ್ಛತಾ ರೂವಾರಿಗಳು ಎಂದು ಪುರಸಭೆ ಮುಖ್ಯಾಧಿಕಾರಿ ಕೆ. ದುರುಗಣ್ಣ ಹೇಳಿದರು.
ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಪೌರ ಕಾರ್ಮಿಕ ದಿನಾಚರಣೆ ಮತ್ತು ಪೌರ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರುಪೌರ ಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ನಿವೇಶನ ಒದಗಿಸಲು ಕ್ರಮ ಕೈಗೊಂಡಿದ್ದು, ತಾಂತ್ರಿಕ ಸಮಸ್ಯೆ ಪರಿಹರಿಸಿ ನಿವೇಶನ ವಿತರಿಸಲಾಗುವುದು ಎಂದು ಭರವಸೆ ನೀಡಿದರು.
ಬಳ್ಳಾರಿಯ ಯೋಜನಾ ನಿರ್ದೇಶಕ ರಾಘವೇಂದ್ರ ಗುರು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪೌರ ಕಾರ್ಮಿಕರು ಅಗತ್ಯ ಸುರಕ್ಷತಾ ಪರಿಕರಗಳನ್ನು ಧರಿಸಿ ಕಾರ್ಯನಿರ್ವಹಿಸಬೇಕು. ಅಲ್ಲದೇ ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸುವ ಜೊತೆಗೆ ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಮೂಲಕ ಅವರ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ತಿಳಿಸಿದರು.ಪ್ರತಿಯೊಬ್ಬರು ಪೌರ ಕಾರ್ಮಿಕರನ್ನು ಗೌರವದಿಂದ ಕಾಣಬೇಕು. ಪೌರ ಕಾರ್ಮಿಕರಿಗೆ ನಿವೇಶನ ವಿತರಿಸುವಲ್ಲಿ ಅಧಿಕಾರಿಗಳು ಮುಂದಾಗುವಂತೆ ಮೇಸ್ತ್ರಿ ವೆಂಕಟೇಶ, ಪೌರ ಕಾರ್ಮಿಕ ಗಣೇಶ ಒತ್ತಾಯಿಸಿದರು.
ಪೌರ ಕಾರ್ಮಿಕರಿಗೆ ಸುರಕ್ಷಾ ಪರಿಕರಗಳನ್ನು ವಿತರಿಸಲಾಯಿತು. ಆಟೋಟಗಳಲ್ಲಿ ವಿಜೇತ ಪೌರ ಕಾರ್ಮಿಕರಿಗೆ ಬಹುಮಾನ ವಿತರಿಸಲಾಯಿತು.ಈ ಸಂದರ್ಭದಲ್ಲಿ ಪುರಸಭೆ ಸಿಬ್ಬಂದಿ ಸೇರಿದಂತೆ ಪೌರ ಕಾರ್ಮಿಕರಿದ್ದರು.