ಪ್ರತಿ ಗ್ರಾಮಕ್ಕೂ ನೀರು ಪೂರೈಸಲು ಕ್ರಮ: ಬಸನಗೌಡ ತುರ್ವಿಹಾಳ

| Published : Jan 21 2024, 01:32 AM IST

ಪ್ರತಿ ಗ್ರಾಮಕ್ಕೂ ನೀರು ಪೂರೈಸಲು ಕ್ರಮ: ಬಸನಗೌಡ ತುರ್ವಿಹಾಳ
Share this Article
  • FB
  • TW
  • Linkdin
  • Email

ಸಾರಾಂಶ

ಮಸ್ಕಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಪ್ಪೂರು, ಹರಳಳ್ಳಿ, ಕೋಳಬಾಳ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿಗಳಿಗೆ ಶನಿವಾರ ಶಾಸಕರು ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಮಸ್ಕಿ

ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಕುಡಿಯುವ ನೀರನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ಮಸ್ಕಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಪ್ಪೂರು, ಹರಳಳ್ಳಿ, ಕೋಳಬಾಳ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿಗಳಿಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

ಕ್ಷೇತ್ರದ ಅಭಿವೃದ್ಧಿಗಾಗಿ ಸರ್ಕಾರದಿಂದ ಬರುವ ಅನುದಾನವನ್ನು ಸದುಪಯೋಗ ಪಡಿಸಿಕೊಂಡು ಜೆಜೆಎಂ ಕಾಮಗಾರಿ ನಡೆಸಲಾಗುತ್ತಿದೆ. ಗುತ್ತಿಗೆದಾರರು ನಿಗದಿತ ಅವದಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಕ್ಷೇತ್ರದ ಜನರಿಗೆ ಮನೆ-ಮನೆಗೆ ನೀರು ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಕಾಂಗ್ರೆಸ್ ಸರ್ಕಾರ ಇರುವುದೇ ಅಭಿವೃದ್ದಿ ಪರ ಆದ್ದರಿಂದ ಕ್ಷೇತ್ರದಲ್ಲಿ ಜನರಿಗೆ ಮುಖ್ಯವಾಗಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಹೆಚ್ಚಿನ ಒತ್ತನ್ನು ನೀಡಲಾಗುವುದು. ಜೆಜೆಎಂ ಯೋಜನೆಯಿಂದ ಪ್ರತಿಯೊಂದು ಮನೆಗೆ ನೀರು ದೊರೆಯುತ್ತದೆ ಇದರಿಂದ ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದರು.

ಗುತ್ತಿಗೆ ಪಡೆದ ಗುತ್ತಿಗೆದಾರರು ಸೂಕ್ತ ಗುಣಮಟ್ಟದಿಂದ ಕಾಮಗಾರಿಯನ್ನು ನಿಗದಿತ ಸಮಯದೊಳಗಡೆ ಮಾಡಬೇಕು ಇದರಿಂದ ಸರ್ಕಾರದ ಯೋಜನೆಗಳು ಜನರಿಗೆ ತಲುಪಲು ಸಾಧ್ಯವಾಗುತ್ತದೆ. ಅಲ್ಲದೇ ಅಧಿಕಾರಿಗಳು ಸಹ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಸಿದ್ದನಗೌಡ ಮಾಟೂರು, ಇಬ್ರಾಹಿಂ.ಎಚ್ ಮೆದಿಕಿನಾಳ ಹಾಗೂ ಚುನಾಯಿತ ಜನಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಇತರರು ಇದ್ದರು.