ಸಾರಾಂಶ
ಕನ್ನಡಪ್ರಭ ವಾರ್ತೆ ಚಡಚಣ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ವಿಠ್ಠಲ ಕಟಕದೋಂಡ ಹೇಳಿದರು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಫಂಗಸ್ ಚಿಕಿತ್ಸೆ ಹಾಗೂ ಡಯಾಲಿಸಿಸ್ ಘಟಕ ಉದ್ಗಾಟಿಸಿ ಅವರು ಮಾತನಾಡಿದರು. ಚಡಚಣ ಏತ ನೀರಾವರಿ ಯೋಜನೆಯಿಂದ ತಾಲೂಕಿನ ಸುಮಾರು 1722 ಹೆಕ್ಟೇರ್ ಪ್ರದೇಶ ನೀರಾವರಿಯಾಗಲಿದೆ.
ಕನ್ನಡಪ್ರಭ ವಾರ್ತೆ ಚಡಚಣ
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ವಿಠ್ಠಲ ಕಟಕದೋಂಡ ಹೇಳಿದರು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಫಂಗಸ್ ಚಿಕಿತ್ಸೆ ಹಾಗೂ ಡಯಾಲಿಸಿಸ್ ಘಟಕ ಉದ್ಗಾಟಿಸಿ ಅವರು ಮಾತನಾಡಿದರು. ಚಡಚಣ ಏತ ನಿರಾವರಿ ಯೋಜನೆಯಿಂದ ತಾಲೂಕಿನ ಸುಮಾರು 1722 ಹೆಕ್ಟೇರ್ ಪ್ರದೇಶ ನೀರಾವರಿಯಾಗಲಿದೆ. ಆದ್ದರಿಂದ ಈ ಯೋಜನೆ ಶೀಘ್ರದಲ್ಲಿಯೇ ಕಾರ್ಯಾರಂಭಗೊಳ್ಳಲಿದೆ. ಅದರ ಜೊತೆಯಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಸರ್ಕಾರ ಸುಮಾರು ₹ 8.5 ಕೋಟಿ ಈಗಾಗಲೇ ಬಿಡುಗಡೆ ಮಾಡಿದ್ದು, ಕೆಲವೇ ದಿನಗಳಲ್ಲಿ ಕಟ್ಟಡದ ನಿರ್ಮಾಣ ಕಾಮಗಾರಿ ಪ್ರಾರಂಭವಾಗಲಿದೆ. ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ. ಸಮಾಜದಲ್ಲಿ ವೈದ್ಯರನ್ನು ದೇವರಂತೆ ಕಾಣುವ ರೋಗಿಗಳಿಗೆ ದೇವರ ರೂಪದಲ್ಲಿ ಕಾಣುವ ಮೂಲಕ ದೇವರ ಸೇವೆ ಎಂದು ಭಾವಿಸಿ ಅವರನ್ನು ಪ್ರೀತಿ ವಾತ್ಸಲ್ಯದಿಂದ ಕಾಣಬೇಕು ಎಂದು ಹೇಳಿದರು.ಪ್ರಸ್ತಾವಿಕವಾಗಿ ಜಿಲ್ಲಾ ಅರೋಗ್ಯ ಕುಟುಂಬ ಇಲಾಖೆಯ ವೈಧ್ಯಾಧಿಕಾರಿ ಸಂಪತಕುಮಾರ ಮಾತನಾಡಿ, ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಫಂಗಸ್ ಚಿಕಿತ್ಸೆ ಹಾಗೂ ಡಯಾಲಿಸಿಸ್ ಘಟಕಕ್ಕೆ ಶಾಸಕರು ಚಾಲನೆ ನೀಡಿದ್ದು, ಫಲಾನುಭವಿಗಳು ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಅಪ್ಪಸಾಬ ಇನಾಮದಾರ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಜಾನ ಕಟವಟೆ, ಆಡಳಿತ ವೈದ್ಯಾಧಿಕಾರಿ ಲಕ್ಷ್ಮೀಕಾಂತ ಮೋರೆ, ತಾಲೂಕು ವೈದ್ಯಾಧಿಕಾರಿ ಅರ್ಚನಾ ಕುಲಕರ್ಣಿ, ಸಿಬ್ಬಂದಿ ಬಿ.ಎ.ಮೇತ್ರಿ, ಪ್ರಕಾಶ ಅಂಬಿಗೇರ, ಆರ್.ಬಿ.ಲಾಳಸಂಗಿ, ಎಂ.ಬಿ.ತೇಲಿ, ಎಂ.ಎಲ್.ಮುಲ್ಲಾ, ಪ್ರಶಾಂತ ಸಾಳುಂಖೆ ಸೇರಿದಂತೆ ಇತರರು ಇದ್ದರು.