ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವೆ: ಮಹದೇಶ್ವರ ಬೆಟ್ಟದ ಕಾರ್ಯದರ್ಶಿ ಸರಸ್ವತಿ ಹೇಳಿಕೆ

| Published : Jan 28 2024, 01:19 AM IST

ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವೆ: ಮಹದೇಶ್ವರ ಬೆಟ್ಟದ ಕಾರ್ಯದರ್ಶಿ ಸರಸ್ವತಿ ಹೇಳಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದ ವಾಣಿಜ್ಯ ಸಂಕೀರ್ಣದಲ್ಲಿ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ನೌಕರರ ಕುಂದು ಕೊರತೆ ಸಭೆಯಲ್ಲಿ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ, ಕಾರ್ಯದರ್ಶಿ ಸರಸ್ವತಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಕನ್ನಡಪ್ರಭ ವಾರ್ತೆ ಹನೂರುತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದ ವಾಣಿಜ್ಯ ಸಂಕೀರ್ಣದಲ್ಲಿ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ನೌಕರರ ಕುಂದು ಕೊರತೆ ಸಭೆಯಲ್ಲಿ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ, ಕಾರ್ಯದರ್ಶಿ ಸರಸ್ವತಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಸಭೆಯಲ್ಲಿ ನೌಕರರು ಮಾತನಾಡಿ ನಾವು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದೇವೆ. ಆದರೆ ನಮಗೆ ಯಾವುದೇ ಸರ್ಕಾರ ಸೌಲಭ್ಯಗಳು ಸಿಗುತ್ತಿಲ್ಲ, ಮುಖ್ಯವಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಮೃತಪಟ್ಟವರ ಕುಟುಂಬಗಳಿಗೆ ಅನುಕಂಪದ ಆಧಾರದ ಮೇಲೆ ಕುಟುಂಬದ ಒಬ್ಬರಿಗೆ ಕೆಲಸ ನೀಡಬೇಕು, ಇದಲ್ಲದೆ ಪ್ರವಾಸ ಭತ್ಯೆಗಳಿಕೆ ರಜೆ, ಟಿಎ,ಡಿಎ ಆರನೇ ವೇತನ ಆಯೋಗದಂತೆ ನೌಕರರಿಗೆ ವೇತನ ನೀಡಬೇಕು ವೇತನ ಶ್ರೇಣಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಯಾವುದೇ ಭದ್ರತೆ ಇಲ್ಲದೆ ಇರುವುದರಿಂದ ನಮಗೆ ತೊಂದರೆ ಆಗುತ್ತಿದೆ. ಆದ್ದರಿಂದ ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿದರು. ಪೌರಕಾರ್ಮಿಕರ ಸಂಘದ ಅಧ್ಯಕ್ಷ ಗೋಪಾಲ್ ಮಾತನಾಡಿ ಪೌರಕಾರ್ಮಿಕರ ಕಾಲೋನಿಯಲ್ಲಿ ನಿರ್ಮಾಣ ಮಾಡಿರುವ ಮನೆಗಳು ತೀವ್ರ ಶಿಥಿಲಗೊಂಡಿದೆ. ನಮಗೆ ನಿವೇಶನ ಕೊಟ್ಟು ಮನೆ ನಿರ್ಮಾಣ ಮಾಡಬೇಕು. ಇದರಿಂದ ನಮಗೆ ಅನುಕೂಲವಾಗುತ್ತದೆ ಎಂದು ಮನವಿ ಸಲ್ಲಿಸಿದರು. ಕೆಲವು ನೌಕರರು ಹಿರಿಯರ ಮಾರ್ಗದರ್ಶನದಲ್ಲಿ ವೃಂದಾ ಮತ್ತು ನೇಮಕಾತಿ ಆಧಾರದಲ್ಲಿ ನಮಗೂ ಸೌಲಭ್ಯ ನೀಡಬೇಕೆಂದು ಮನವಿ ಸಲ್ಲಿಸಲು ಚರ್ಚೆ ನಡೆಸಿದ್ದಾರೆ. ಆದರೆ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ಮನವಿಯನ್ನು ನೀಡದಂತೆ ತಡೆ ಹಿಡಿದಿದ್ದಾರೆ. ಕಾರಣ ವೃಂದ ಮತ್ತು ನೇಮಕಾತಿ ಆಧಾರದಲ್ಲಿ ನೌಕರರನ್ನು ತೆಗೆದುಕೊಂಡರೆ ಎಲ್ಲಿಗೆ ಬೇಕಾದರೂ ವರ್ಗಾವಣೆ ಮಾಡಬಹುದು ವರ್ಗಾವಣೆ ಮಾಡಿದರೆ ನಮಗೆ ಕೇವಲ 60 ವರ್ಷಗಳು ಮಾತ್ರ ಕರ್ತವ್ಯ ನಿರ್ವಹಿಸಬಹುದು. ಮುಜರಾಯಿ ಇಲಾಖೆ ನಿಯಮದಲ್ಲಿ 65 ವರ್ಷದವರೆಗೂ ಕರ್ತವ್ಯ ನಿರ್ವಹಿಸಬಹುದು.ವೃಂದ ಮತ್ತು ನೇಮಕಾತಿ ಆಧಾರದಲ್ಲಿ ನೌಕರರನ್ನು ನೇಮಕ ಮಾಡಿಕೊಳ್ಳದೆ ಇರುವುದರಿಂದ ಮಲೆ ಮಾದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಿ ಗ್ರೂಪ್ ಹಾಗೂ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಯಾವುದೇ ಬಡ್ತಿ ಸಿಗುತ್ತಿಲ್ಲ, ಇವರು ಇರುವವರೆಗೂ ಇದೇ ಹುದ್ದೆಯಲ್ಲಿ ನಿವೃತ್ತಿಯಾಗಬೇಕಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಈ ನಿಯಮ ಬದಲಾವಣೆ ಮಾಡಿದರೆ ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುವ ನೌಕರರಿಗೆ ಬಡ್ತಿ ಸಿಗಲಿದೆ ಆದ್ದರಿಂದ ಆದಷ್ಟು ಬೇಗ ನಮ್ಮ ಈ ಸಮಸ್ಯೆಯನ್ನು ಬಗೆಹರಿಸುವಂತೆ ಹಲವು ನೌಕರರು ಮನವಿ ಮಾಡಿಕೊಂಡರು.ಇನ್ನು 108 ಅಡಿ ಪ್ರತಿಮೆ ಕಾಮಗಾರಿಗೆ ಜಮೀನು ನೀಡಿರುವವರಿಗೆ ಇದುವರೆಗೂ ಜಮೀನು ನೀಡಿಲ್ಲ ಆದ್ದರಿಂದ ನಮಗೆ ಪ್ರಾಧಿಕಾರದಲ್ಲಿ ಕೆಲಸ ಕೊಡುವಂತೆ ಹಲವರು ಮನವಿ ಸಲ್ಲಿಸಿದ್ದಾರೆ. ಹಬ್ಬ ಹರಿದಿನಗಳಲ್ಲಿ ಹಾಗೂ ಜಾತ್ರಾ ಸಂದರ್ಭಗಳಲ್ಲಿ ತಾತ್ಕಾಲಿಕವಾಗಿ ಕರ್ತವ್ಯಕ್ಕೆ ತೆಗೆದುಕೊಳ್ಳುವ ಸಿಬ್ಬಂದಿಗೆ ಶಾಶ್ವತವಾಗಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಲು ಅನುಕೂಲ ಮಾಡಿಕೊಡುವಂತೆ ಮನವಿ ಸಲ್ಲಿಸಿದ್ದಾರೆ.