ಕಾರ್ಯಕರ್ತರೇ ಬಿಜೆಪಿಯಲ್ಲಿ ನಾಯಕರು: ಕೊಪ್ಪಳ ಸಂಸದ ಸಂಗಣ್ಣ ಕರಡಿ

| Published : Jan 16 2024, 01:49 AM IST

ಸಾರಾಂಶ

ಚುನಾವಣೆ ವೇಳೆ ಕಾರ್ಯಕರ್ತರನ್ನು ಬಳಸಿಕೊಂಡು ಗೆದ್ದ ಬಳಿಕ ಅವರನ್ನು ಕೈ ಬಿಡುವ ಚಾಳಿಯನ್ನು ಕಾಂಗ್ರೆಸ್ ರೂಢಿಸಿಕೊಂಡಿದೆ. ಕಾರ್ಯಕರ್ತರಿಗೆ ಉನ್ನತ ಹುದ್ದೆ, ನಿಗಮ, ಮಂಡಳಿ ನೀಡದೇ ಶಾಸಕರಿಗೆ ಪ್ರಾಶಸ್ತ್ಯ ನೀಡಲು ಮುಂದಾಗಿದೆ.

ಕೊಪ್ಪಳ: ಬಿಜೆಪಿ ಯುವಕರಿಗೆ ಮನ್ನಣೆ ನೀಡುವ ಏಕೈಕ ಪಕ್ಷ. ಕಾರ್ಯಕರ್ತರೇ ಪಕ್ಷದ ನಾಯಕರು ಎಂಬುದು ಜಿಲ್ಲಾಧ್ಯಕ್ಷರ ನೇಮಕದಲ್ಲಿ ಸಾಬೀತಾಗಿದೆ. ನೂತನ ಜಿಲ್ಲಾಧ್ಯಕ್ಷರಾಗಿ ನವೀನ್ ಗುಳಗಣ್ಣನವರ ನೇಮಕವಾಗಿರುವುದು ಸಂತಸ ತಂದಿದೆ ಎಂದು ಸಂಸದ ಸಂಗಣ್ಣ ಕರಡಿ ಹರ್ಷ ವ್ಯಕ್ತಪಡಿಸಿದರು.ತಾಲೂಕಿನ ಓಜನಹಳ್ಳಿ ಗ್ರಾಮದಲ್ಲಿ ಸೋಮವಾರ ಮೆಕ್ಕೆಜೋಳ ತೆನೆಯಲ್ಲಿ ನಿರ್ಮಿಸಿದ ರಾಮಮಂದಿರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್ ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷ ಸಂಘಟಿಸಿದ್ದಾರೆ. ಬಳಿಕ ಪದಾಧಿಕಾರಿ ಸ್ಥಾನ ದೊರೆಯಿತು. ಇದೀಗ ಅಧ್ಯಕ್ಷ ಸ್ಥಾನ ದೊರೆತಿದೆ. ಬಿಜೆಪಿ ಕಾರ್ಯಕರ್ತರು ಮುಂದೊಂದು ದಿನ ನಾಯಕರಾಗುತ್ತಾರೆ ಎನ್ನುವುದಕ್ಕೆ ಇದೇ ಸಾಕ್ಷಿ ಎಂದರು.ಜಿಲ್ಲಾಧ್ಯಕ್ಷರು ಎರಡು ದಶಕದಿಂದ ಪಕ್ಷ ಸಂಘಟನೆ ಕಾರ್ಯದಲ್ಲಿ ತೊಡಗಿದ್ದರು. ಅವರಿಗೆ ಉನ್ನತ ಸ್ಥಾನ ನೀಡಿ ಪಕ್ಷ ಗೌರವಿಸಿದೆ. ಜಿಲ್ಲೆಯ ಎಲ್ಲ ಹಿರಿಯ ನಾಯಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವಿಗೆ ಕಾರಣೀಕರ್ತರಾಗಬೇಕು ಎಂದು ಸಲಹೆ ನೀಡಿದರು.

ಚುನಾವಣೆ ವೇಳೆ ಕಾರ್ಯಕರ್ತರನ್ನು ಬಳಸಿಕೊಂಡು ಗೆದ್ದ ಬಳಿಕ ಅವರನ್ನು ಕೈ ಬಿಡುವ ಚಾಳಿಯನ್ನು ಕಾಂಗ್ರೆಸ್ ರೂಢಿಸಿಕೊಂಡಿದೆ. ಕಾರ್ಯಕರ್ತರಿಗೆ ಉನ್ನತ ಹುದ್ದೆ, ನಿಗಮ, ಮಂಡಳಿ ನೀಡದೇ ಶಾಸಕರಿಗೆ ಪ್ರಾಶಸ್ತ್ಯ ನೀಡಲು ಮುಂದಾಗಿದೆ. ಆದರೆ, ಬಿಜೆಪಿ ಹಾಗಲ್ಲ. ನಮಗೆ ಕಾರ್ಯಕರ್ತರೇ ಜೀವಾಳ. ಇದು ಕಾರ್ಯಕರ್ತರ ಪಕ್ಷ. ಪಕ್ಷಕ್ಕೆ ದುಡಿದ ಕಾರ್ಯಕರ್ತರಿಗೆ ಉನ್ನತ ಹುದ್ದೆ ನೀಡಿ ಗೌರವಿಸಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದರು.ಬಿಜೆಪಿ ನೂತನ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ ಹಾಗು ಪ್ರಮುಖರಿದ್ದರು.