ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆಜಿಲ್ಲಾ ಕಾಂಗ್ರೆಸ್ ಮುಖಂಡರು ಜಿಲ್ಲಾಡಳಿತ ಭವನ ಎದುರು ರಾಜ್ಯಪಾಲರ ಪ್ರತಿಕೃತಿ ದಹನ ಮಾಡುತ್ತಿದ್ದಾಗ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರಿಗೆ ಬೆಂಕಿ ತಗುಲಿದ್ದು, ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಗುಳೇದಗುಡ್ಡ ಸಮೀಪದ ನಾಗರಾಳ ಎಸ್ಪಿ ಗ್ರಾಮದ ದ್ಯಾವಪ್ಪ ಮಾಗಿ, ಬೀಳಗಿ ತಾಲೂಕಿನ ಗಿರಿಸಾಗರದ ಹನುಮಂತ ಗಾಯಾಳುಗಳು ಎಂದು ತಿಳಿದು ಬಂದಿದೆ.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾ ಕಾಂಗ್ರೆಸ್ ಮುಖಂಡರು ಜಿಲ್ಲಾಡಳಿತ ಭವನ ಎದುರು ರಾಜ್ಯಪಾಲರ ಪ್ರತಿಕೃತಿ ದಹನ ಮಾಡುತ್ತಿದ್ದಾಗ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರಿಗೆ ಬೆಂಕಿ ತಗುಲಿದ್ದು, ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಗುಳೇದಗುಡ್ಡ ಸಮೀಪದ ನಾಗರಾಳ ಎಸ್ಪಿ ಗ್ರಾಮದ ದ್ಯಾವಪ್ಪ ಮಾಗಿ, ಬೀಳಗಿ ತಾಲೂಕಿನ ಗಿರಿಸಾಗರದ ಹನುಮಂತ ಗಾಯಾಳುಗಳು ಎಂದು ತಿಳಿದು ಬಂದಿದೆ. ಸದ್ಯ ಅವರ ಆರೋಗ್ಯ ಚೇತರಿಸಿಕೊಂಡಿದ್ದು, ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಶಾಸಕ ಎಚ್.ವೈ.ಮೇಟಿ ಸೇರಿದಂತೆ ಪಕ್ಷದ ಮುಖಂಡರು, ನಾಯಕರು ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.