ಸಾರಾಂಶ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅಭೂತಪೂರ್ವ ಜಯ ಸಾಧಿಸಿದ ಹಿನ್ನೆಲೆಯಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಗುರು ತಾರನಾಳ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅಭೂತಪೂರ್ವ ಜಯ ಸಾಧಿಸಿದ ಹಿನ್ನೆಲೆಯಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಗುರು ತಾರನಾಳ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರಿಗೆ ಜೈಕಾರ ಕೂಗಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ಗುರು ತಾರನಾಳ, ಮುಖಂಡರಾದ ಸಿ.ಬಿ.ಅಸ್ಕಿ, ವೈ.ಎಚ್.ವಿಜಯಕರ ಮಾತನಾಡಿ, ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಿಡಿದ ಕನ್ನಡಿ. ಕಾಂಗ್ರೆಸ್ ಕಾರ್ಯಕರ್ತರಿಗೆ ಗೆಲುವಿನ ನಿರೀಕ್ಷೆ ಇತ್ತು. ಆದರೆ, ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ತಲೆಕೆಳಗಾಗಿದೆ ಎಂದರು.ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಚುನಾವಣೆಯಲ್ಲಿ ಸೋತಿದ್ದಾರೆ ಎಂದರೆ ಮುಖ್ಯಮಂತ್ರಿ ಸಿದ್ರಾಮಯ್ಯನವರ ನೇತೃತ್ವದ ಸರ್ಕಾರದ ಪಂಚ ಗ್ಯಾರಂಟಿಗಳು ಮತ್ತು ಬಿಜೆಪಿಯವರ ನಡೆಯನ್ನು ರಾಜ್ಯದ ಜನರು ವಿರೋಧಿಸುತ್ತಿದ್ದಾರೆ. ಇದು ರಾಜ್ಯದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬಿಜೆಪಿ ಮೈತ್ರಿಕೂಟದ ಬಗೆಗಿರುವ ಅಪನಂಬಿಕೆಗೆ ಸಾಕ್ಷಿಯಾಗಿದೆ. ಇನ್ನಾದರೂ ಬಿಜೆಪಿ ಜಾತಿ, ಧರ್ಮಗಳ ನಡುವೆ ಕೋಮುಧ್ವೇಷ ಬಿತ್ತುವ ಕೆಲಸ ಬಿಟ್ಟು, ಅಭಿವೃದ್ಧಿ ಬಗ್ಗೆ ಯೋಚಿಸಬೇಕು ಎಂದು ಹೇಳಿದರು.ಈ ವೇಳೆ ಎನ್ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ, ಪುರಸಭೆ ಅಧ್ಯಕ್ಷ ಮೆಹಬೂಬ್ ಗೊಳಸಂಗಿ, ಸಾಗರ್, ಅಲ್ತಾಫ್ ಮುಲ್ಲಾ, ಸಿ.ಜಿ.ವಿಜಯಕರ್, ಚಪರಬಂದ ಸಂಗಣ್ಣ ಮೇಲಿನಮನಿ, ಮನ್ಸು ನಾಯಕ, ರಂಜಾನ್ ನದಾಫ್, ಸಂಗನಗೌಡ ಪಾಟೀಲ್, ರಾಮಣ್ಣ ರಾಜನಾಳ, ಅಪ್ಪು ದೇಗಿನಾಳ ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಇತರ ಮುಖಂಡರು ಉಪಸ್ಥಿತರಿದ್ದರು.