ಚಂದೂರ ಗ್ರಾಮದ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

| Published : Apr 25 2024, 01:09 AM IST

ಸಾರಾಂಶ

ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಬಿಜೆಪಿಯ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಸಂಸದ, ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ಕನ್ನಡಪ್ರಭ ವಾರ್ತೆ ಚಿಕ್ಕೋಡಿ

ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಬಿಜೆಪಿಯ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಸಂಸದ, ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ತಾಲೂಕಿನ ಚಂದೂರ ಗ್ರಾಮದ ಸುಮಾರು 25ಕ್ಕೂ ಹೆಚ್ಚಿನ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ಬಿಜೆಪಿ ಪಕ್ಷದ ಸಿದ್ಧಾಂತಗಳು ಹಾಗೂ ದೇಶದಲ್ಲಿ ಮೋದಿಯವರು ಮಾಡಿದ ಜನಪರ ಯೋಜನೆಗಳನ್ನು ಮನೆ ಬಾಗಿಲಿಗೆ ಮುಟ್ಟಿಸುವ ಕಾರ್ಯ ಮಾಡುವುದಾಗಿ ತಿಳಿಸಿದರು.

ಬಿಜೆಪಿಯ ಸಿದ್ಧಾಂತವಾದ ಸೇವೆಯೇ ಸಂಘಟನೆ ಮತ್ತು ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಸಿದ್ಧಾಂತದಲ್ಲಿ ನಂಬಿಕೆ ಹಾಗೂ ನಾನು ಕ್ಷೇತ್ರದಲ್ಲಿ ಸುಮಾರು ₹8,800 ಕೋಟಿಗಳಿಗೂ ಮೀರಿ ಅನುದಾನ ತಂದು ಅಭಿವೃದ್ಧಿ ಮಾಡಿರುವುದನ್ನು ತಾವುಗ ಮೆಚ್ಚಿ ಬಂದಿರುವುದು ಶ್ಲಾಘನೀಯ ಎಂದರು.

ಚಿಕ್ಕೋಡಿ ಮತಕ್ಷೇತ್ರದ ಚಂದೂರ ಗ್ರಾಮದ ಬಾಳು ಪಾಟೀಲ, ಅಶಿತೋಷ ಪಾಟೀಲ, ಕಿಸನ ಬೋಳೆ, ಮಹೇಶ ಚೌಗಲೆ, ಆಕಾಶ ಪಾಟೀಲ, ಕೃಷ್ಣಾತ ಕಣಿರೆ, ರವಿ ಘಾಟಗೆ, ಶಿವಾನಂದ ಪಾಟೀಲ, ಅಶೋಕ ಪಾಟೀಲ, ಗೊಂದಾ ಪಾಟೀಲ, ದಾದಾ ಮಧಬಾವೆ, ಅಶೋಕ ಸಮಾಜೆ, ಅನಿಲ ಮಾನೆ ಹಾಗೂ ಅವರ ತಂಡದ ಸದಸ್ಯರು ಅವರ ತಂಡದ ಸದಸ್ಯರು ಕಾಂಗ್ರೆಸ್ ಪಕ್ಷ ತೊರೆದು ನಮ್ಮ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಅವರನ್ನು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಪಕ್ಷದ ಶಾಲು ಹೊದಿಸಿ ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡರು.