ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಿ: ಮಾಜಿ ಶಾಸಕ ಪರಣ್ಣ ಮುನವಳ್ಳಿ

| Published : Feb 05 2024, 01:48 AM IST

ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಿ: ಮಾಜಿ ಶಾಸಕ ಪರಣ್ಣ ಮುನವಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಮ ಚಲೋ ಅಭಿಯಾನದ ಕುರಿತು ನೆರೆದಿದ್ದ ಕಾರ್ಯಕರ್ತರಿಗೆ ಮಾಹಿತಿ ನೀಡುತ್ತಾ ಪ್ರತಿಯೊಬ್ಬ ಪ್ರವಾಸಿ ಕಾರ್ಯಕರ್ತರು ಬೂತ್ ಸಂಚಾಲಕರ ಸಹಯೋಗದೊಂದಿಗೆ ಒಂದು ದಿನ ತಮಗೆ ಜವಾಬ್ದಾರಿ ನೀಡಿದ ಬೂತ್ ನಲ್ಲಿ ವಾಸ್ತವ್ಯ ಹೂಡಬೇಕು. ಅಲ್ಲಿ ಪಕ್ಷ ನೀಡಿದ ಚಟುವಟಿಕೆಗಳನ್ನು ಪೂರ್ತಿಗೊಳಿಸಬೇಕು.

ಗಂಗಾವತಿ: ಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಕಾರ್ಯಕರ್ತರು ಅಭ್ಯರ್ಥಿಯ ಗೆಲುವಿಗಾಗಿ ಸನ್ನದ್ಧರಾಗಿ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು.ನಗರದ ಅಮರಜ್ಯೋತಿ ಕಲ್ಯಾಣ ಮಂಟಪದಲ್ಲಿ ಗ್ರಾಮಚಲೋ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಈ ಬಾರಿ ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬರುವುದು ಖಚಿತ. ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ. ಇದರಲ್ಲಿ ಯಾವುದೇ ಸಂದೇಹ ಇಲ್ಲ ಎಂದರು.

ಪಕ್ಷದ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ್ ಮಾತನಾಡಿ, ಗ್ರಾಮ ಚಲೋ ಅಭಿಯಾನದ ಕುರಿತು ನೆರೆದಿದ್ದ ಕಾರ್ಯಕರ್ತರಿಗೆ ಮಾಹಿತಿ ನೀಡುತ್ತಾ ಪ್ರತಿಯೊಬ್ಬ ಪ್ರವಾಸಿ ಕಾರ್ಯಕರ್ತರು ಬೂತ್ ಸಂಚಾಲಕರ ಸಹಯೋಗದೊಂದಿಗೆ ಒಂದು ದಿನ ತಮಗೆ ಜವಾಬ್ದಾರಿ ನೀಡಿದ ಬೂತ್ ನಲ್ಲಿ ವಾಸ್ತವ್ಯ ಹೂಡಬೇಕು. ಅಲ್ಲಿ ಪಕ್ಷ ನೀಡಿದ ಚಟುವಟಿಕೆಗಳನ್ನು ಪೂರ್ತಿಗೊಳಿಸಬೇಕು. ಆ ಮೂಲಕ ಮತ್ತೊಮ್ಮೆ ಮೂರನೇ ಬಾರಿಗೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಲು ಎಲ್ಲರೂ ಅವಿರತ ಶ್ರಮಿಸಬೇಕೆಂದು ಮನವಿ ಮಾಡಿದರು.

ನಗರದ ಬೂತ್ ನಂ.210ರ ಬೂತ್ ಅಧ್ಯಕ್ಷ ಭೀಮೇಶ ಉಪ್ಪಾರ ಅವರ ಮನೆಗೆ ಭೇಟಿ ನೀಡಿ ಕುಟುಂಬದೊಡನೆ ಉಭಯ ಕುಶಲೋಪರಿ ನಡೆಸಿದರು. ಈ ಸಂದರ್ಭದಲ್ಲಿ ತಿಪ್ಪೇರುದ್ರಸ್ವಾಮಿ, ಗಿರೇಗೌಡ, ಸಿಂಗನಾಳ ವಿರೂಪಾಕ್ಷಪ್ಪ, ಕಾಶಿನಾಥ ಚಿತ್ರಗಾರ, ಚನ್ನಪ್ಪ ಮಳಗಿ, ಜಿಲ್ಲಾ ಒಬಿಸಿ ಮೋರ್ಚಾದ ಅಮರಜ್ಯೋತಿ ವೆಂಕಟೇಶ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಿವು ಅರಿಕೇರಿ ಸೇರಿದಂತೆ ಸದಸ್ಯರು ಭಾಗವಹಿಸಿದ್ದರು.