ಸಾರಾಂಶ
ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿರುವ ಪೋಸ್ಟ್ ನಂತೆ ಏನೂ ಆಗಿಲ್ಲ. ಶಾಸಕರು ಆತ್ಮಸ್ಥೈರ್ಯ ಕಳೆದುಕೊಳ್ಳದೇ ಅಭಿವೃದ್ಧಿ ಕೆಲಸ ಮಾಡುತ್ತಾರೆ, ಪಕ್ಷದ ಕಾರ್ಯಕರ್ತರು ಅಪಪ್ರಚಾರಗಳಿಗೆ ಕಿವಿಗೊಡಬಾರದು ಹಾಗೂ ಧೃತಿಗೆಡಬಾರದು ಎಂದು ಕೆಪಿಸಿಸಿ ಸದಸ್ಯ ಎಚ್.ಎಂ. ನಟರಾಜ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ಕೊಪ್ಪ
ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿರುವ ಪೋಸ್ಟ್ ನಂತೆ ಏನೂ ಆಗಿಲ್ಲ. ಶಾಸಕರು ಆತ್ಮಸ್ಥೈರ್ಯ ಕಳೆದುಕೊಳ್ಳದೇ ಅಭಿವೃದ್ಧಿ ಕೆಲಸ ಮಾಡುತ್ತಾರೆ, ಪಕ್ಷದ ಕಾರ್ಯಕರ್ತರು ಅಪಪ್ರಚಾರಗಳಿಗೆ ಕಿವಿಗೊಡಬಾರದು ಹಾಗೂ ಧೃತಿಗೆಡಬಾರದು ಎಂದು ಕೆಪಿಸಿಸಿ ಸದಸ್ಯ ಎಚ್.ಎಂ. ನಟರಾಜ್ ತಿಳಿಸಿದರು. ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು, ಮಾಜಿ ಶಾಸಕ ಡಿ.ಎನ್. ಜೀವರಾಜ್ ಅವರು ಚುನಾವಣೆ ಕುರಿತು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆಯೇ ಹೊರತು, ಚುನಾವಣೆ ಕುರಿತು ತೀರ್ಪು ನೀಡಿಲ್ಲ. ಆದರೂ ಶಾಸಕ ರಾಜೇಗೌಡ ಅವರ ಗೆಲುವನ್ನು ಅಸಿಂಧುಗೊಳಿಸುವಂತೆ ಜೀವರಾಜ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ ಎಂದರು.ಅರ್ಜಿ ವಜಾಗೊಳಿಸುವಂತೆ ಸುಪ್ರೀಂ ಕೋರ್ಟ್ಗೆ ರಾಜೇಗೌಡ ಅವರು ಮನವಿ ಮಾಡಿದ್ದರು. ಆದರೆ, ಹೈಕೋರ್ಟ್ನಲ್ಲಿ ವಿಚಾರಣೆ ಮುಂದುವರಿಸಲು ಸುಪ್ರೀಂ ಸೂಚಿಸಿದೆ. ಇದರಿಂದ ಕಾರ್ಯಕರ್ತರು ದೃತಿಗೆಡುವ ಅಗತ್ಯವಿಲ್ಲ ಎಂದು ತಿಳಿಸಿದರು.ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎಂ.ಸತೀಶ್ ಮಾತನಾಡಿ, 2005ರಿಂದ ಸುಮಾರು 14 ವರ್ಷಗಳ ಕಾಲ ಬಿಜೆಪಿಯ ''''''''ಜೀವರಾಜ್‌ರವರು ಶಾಸಕರಾಗಿ, ಸಚಿವರಾಗಿ ಅಧಿಕಾರ ನಡೆಸಿದ ಸಂದರ್ಭದಲ್ಲಿ ಕಾಂಗ್ರೆಸ್ ಅವರ ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಪಡಿಸಿಲ್ಲ. 2018ರ ತನ್ನ ಸೋಲಿನ ನಂತರ ಜೀವರಾಜ್‌ರವರು ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಒಂದಲ್ಲ ಒಂದು ರೀತಿಯಿಂದ ಮಾನಸಿಕವಾಗಿ ಕುಗ್ಗಿಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, 2022ರ ವಿಧಾನಸಭಾ ಚುನಾವಣೆಯ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲ್ಪ ಮತಗಳ ಅಂತರದಿಂದ ಗೆಲುವು ಸಾಧಿಸಿದೆ. ಕಾಂಗ್ರೆಸ್‌ನ ಅಭ್ಯರ್ಥಿಯಾಗಿದ್ದ ರಾಜೇಗೌಡ ಅವರು ನ್ಯಾಯಯುತವಾಗಿ ಗೆಲುವು ಸಾಧಿಸಿದ್ದಾರೆ. ಆದರೆ, ನ್ಯಾಯಯುತವಾಗಿರುವ ಮತ ಎಣಿಕೆಯನ್ನೂ ಪ್ರಶ್ನಿಸಿ ಜೀವರಾಜ್‌ರವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ವಜಾಗೊಳಿಸುವಂತೆ ರಾಜೇಗೌಡ ಅವರು ಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ ವಿಚಾರಣೆ ಮುಂದುವರಿಸಲು ಸೂಚಿಸಿದೆ. ಕಾಂಗ್ರೆಸ್ ಗೆ ನ್ಯಾಯಾಲಯದ ಮೇಲೆ ಗೌರವವಿದೆ ಎಂದರು. ಭೂ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಜಿ. ಶೋಭಿಂತ್, ಸದಸ್ಯೆ ಅನ್ನಪೂರ್ಣ ನರೇಶ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಚ್.ಎಸ್. ಇನೇಶ್, ಕೆ.ಡಿ.ಪಿ ನಾಮ ನಿರ್ದೇಶಿತ ಸದಸ್ಯರಾದ ಚಿಂತನ್ ಬೆಳಗೊಳ, ನಾರ್ವೆ ಸಾಧಿಕ್, ಮುಖಂಡರಾದ ಬರ್ಕತ್ ಆಲಿ, ವಿಜಯಕುಮಾರ್ ಇದ್ದರು.