ಭಾರತೀಯ ಜನತಾ ಪಾರ್ಟಿ ಹಿರಿಯೂರು ಮಂಡಲದ ವತಿಯಿಂದ ಶನಿವಾರ ಪಕ್ಷದ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಮಂಡಲ ಅಧ್ಯಕ್ಷ ಅಭಿನಂದನ್ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಹಿರಿಯೂರು

ಭಾರತೀಯ ಜನತಾ ಪಾರ್ಟಿ ಹಿರಿಯೂರು ಮಂಡಲದ ವತಿಯಿಂದ ಶನಿವಾರ ಪದಾಧಿಕಾರಿಗಳ ಸಭೆ ನಡೆಯಿತು.

ಸಭೆಯನ್ನು ಉದ್ದೇಶಿಸಿ ಚಿತ್ರದುರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧುರಿ ಗಿರೀಶ್ ಮಾತನಾಡಿ, ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಮಾಹಿತಿ ನೀಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಪ್ರತಿಯೊಂದು ಬೂತ್ ಮಟ್ಟದಲ್ಲಿ ವೀಕ್ಷಿಸಿ ಅದರ ಮಾಹಿತಿಯನ್ನು ಸರಳ್ ಆ್ಯಪ್‌ನಲ್ಲಿ ಅಪ್ಲೋಡ್ ಮಾಡುವಂತೆ ಸೂಚಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಮಂಡಲ ಅಧ್ಯಕ್ಷ ಅಭಿನಂದನ್ ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತರು ತಮ್ಮ ಬೂತ್‌ಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಬೇಕು. ಜೂ.5ರಿಂದ ಆರಂಭವಾಗಲಿರುವ ಪ್ರಧಾನಿ ನರೇಂದ್ರ ಮೋದಿ ಅವರ 12 ವರ್ಷಗಳ ಆಡಳಿತದ ಸಾಧನೆಗಳ ಕುರಿತು ಎಲ್ಲರಿಗೂ ಮನವರಿಕೆ ಮಾಡಿಕೊಡಬೇಕು ಎಂದರು.

ಮುಖಂಡ ಎನ್.ಆರ್.ಲಕ್ಷ್ಮಿಕಾಂತ್ ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ವಿಶ್ವನಾಥ್, ಮಂಡಲದ ನಿಕಟಪೂರ್ವ ಅಧ್ಯಕ್ಷ ಎಂ.ವಿ.ಹರ್ಷ, ಹಿರಿಯ ಮುಖಂಡ ಎಂ.ಎಸ್. ರಾಘವೇಂದ್ರ, ರಾಜೇಶ್ವರಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಯೋಗೇಶ್ ಹಾಗೂ ನಿತಿನ್ ಗೌಡ ಸೇರಿದಂತೆ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.