ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಜೆಡಿಎಸ್ ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಅವರನ್ನು ಒತ್ತಾಯಿಸಿದರು.ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲು ಆಗಮಿಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರನ್ನು ಶಾಸಕ ಎಚ್.ಟಿ.ಮಂಜು ನೇತೃತ್ವದಲ್ಲಿ ಸ್ವಾಗತಿಸಿ ನೂರಾರು ಮುಖಂಡರು, ಕಾರ್ಯಕರ್ತರು ಮನವಿ ಮಾಡಿದರು.
ಕ್ಷೇತ್ರಕ್ಕೆ ಒಳ್ಳೆಯ ಶಾಸಕರನ್ನು ಕೊಟ್ಟಿದ್ದೀರಿ. ಜಿಲ್ಲೆ ಅಭಿವೃದ್ಧಿಗಾಗಿ ನೀವು ಮಂಡ್ಯಕ್ಕೆ ಬನ್ನಿ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಿಂದಲೇ ಸ್ಪರ್ಧಿಸಿ ಎಂದು ಒತ್ತಾಯಿಸಿ, ಪಕ್ಷದ ಪರ ಜಯಘೋಷ ಕೂಗಿದರು. ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಮುಂದೆ ನೋಡೋಣ, ದೇವರಿದ್ದಾನೆ ಎಂದು ಚುಟುಕಾಗಿ ಉತ್ತರಿಸಿದರು.ರಾಜ್ಯ ಮಾರಾಟ ಮಹಾಮಂಡಳಿ ನಿರ್ದೇಶಕ ಎಸ್.ಎಲ್.ಮೋಹನ್, ಪುರಸಭಾ ಸದಸ್ಯ ಗಿರೀಶ್, ಇಂದ್ರಾಣಿ ವಿಶ್ವನಾಥ, ಮಾಜಿ ಸದಸ್ಯ ಕೆ.ಆರ್.ಹೇಮಂತ್ ಕುಮಾರ್, ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಮು, ಟಿಎಪಿಸಿಎಂಎಸ್ ನಿರ್ದೇಶಕರಾದ ಬಲದೇವ್, ದಿನೇಶ್, ಮಾಜಿ ನಿರ್ದೇಶಕ ಎಚ್.ಟಿ.ಲೋಕೇಶ್, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ನಾಗೇಶ್, ಜೆಡಿಎಸ್ ಮುಖಂಡ ಎ.ಆರ್.ರಘು, ಎಪಿಎಂಸಿ ಮಾಜಿ ಅಧ್ಯಕ್ಷ ಐನೋರಹಳ್ಳಿ ಮಲ್ಲೇಶ್, ನಾಗರಾಜೇಗೌಡ, ತಾಪಂ ಮಾಜಿ ಸದಸ್ಯೆ ಶಾರದಾ ಕೃಷ್ಣೇಗೌಡ, ಮೋಹನ್, ಕಿಕ್ಕೇರಿ ಹೋಬಳಿ ಜೆಡಿಎಸ್ ಅಧ್ಯಕ್ಷ ಕಾಯಿ ಮಂಜೇಗೌಡ, ತಾಲೂಕು ಎಚ್. ಡಿ. ದೇವೇಗೌಡ ಅಭಿಮಾನಿ ಬಳಗದ ಅಧ್ಯಕ್ಷ ಗೌರೀಶ್, ಹುಲ್ಲೇಗೌಡ, ಮಹದೇವೇಗೌಡ, ಜೈನಹಳ್ಳಿ ದಿನೇಶ್, ಬೇಲದಕೆರೆನಂಜಪ್ಪ, ಸೇರಿ ನೂರಾರು ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು.