ಸಾರಾಂಶ
ಮದ್ದೂರು: ಪವರ್ ಸ್ಟಾರ್ ದಿ.ಪುನೀತ್ ರಾಜಕುಮಾರ್ ಅವರ 50ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ದಾನಿಗಳಿಂದ ಒಟ್ಟು 195 ಯೂನಿಟ್ ರಕ್ತ ಸಂಗ್ರಹ ಮಾಡಿ ಮಿಮ್ಸ್ ಆಸ್ಪತ್ರೆಗೆ ಹಸ್ತಾಂತರಿಸಲಾಯಿತು.
ಮದ್ದೂರು: ಪವರ್ ಸ್ಟಾರ್ ದಿ.ಪುನೀತ್ ರಾಜಕುಮಾರ್ ಅವರ 50ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ದಾನಿಗಳಿಂದ ಒಟ್ಟು 195 ಯೂನಿಟ್ ರಕ್ತ ಸಂಗ್ರಹ ಮಾಡಿ ಮಿಮ್ಸ್ ಆಸ್ಪತ್ರೆಗೆ ಹಸ್ತಾಂತರಿಸಲಾಯಿತು.
ಮದ್ದೂರಿನ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಮದ್ದೂರು ರೋಟರಿ ಸಂಸ್ಥೆ, ಮಂಡ್ಯ ಮಿಮ್ಸ್ ಆಸ್ಪತ್ರೆ, ಹೊಸಕೆರೆ ಗ್ರಾಮ ಅಭಿವೃದ್ಧಿ ಸಂಘ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಡೆದ ಶಿಬಿರವನ್ನು ತಾಲೂಕಿನ ಗೆಜ್ಜಲಗೆರೆಯ ಶಾಹಿ ಗಾರ್ಮೆಂಟ್ಸ್ ನ ಮಾನವ ಸಂಪನ್ಮೂಲ ಪ್ರಧಾನ ವ್ಯವಸ್ಥಾಪಕ ರಮೇಶ್ ಬಂಡಿ ಉದ್ಘಾಟಿಸಿ ಮಾತನಾಡಿ, ನಗುಮುಖದ ಸರದಾರ ಪುನೀತ್ ರಾಜಕುಮಾರ್ ಅವರ ಆದರ್ಶಗಳು ಎಲ್ಲರಿಗೂ ಸರ್ವಕಾಲಿಕ. ಪುನೀತ್ ಇಂದು ನಮ್ಮೊಂದಿಗೆ ಇಲ್ಲದಿದ್ದರೂ ಅವರು ನಟಿಸಿದ ಚಲನಚಿತ್ರಗಳು ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿವೆ ಎಂದು ಬಣ್ಣಿಸಿದರು.ಪುನೀತ್ ಭಾವಚಿತ್ರಕ್ಕೆ ರೋಟರಿ ಸಂಸ್ಥೆ ಅಧ್ಯಕ್ಷ ಚನ್ನಂಕೇಗೌಡ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಮಹಿಳಾ ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಪ್ರೊ, ಕೆ. ಬಿ. ನಾರಾಯಣ, ರೋಟರಿ ಸಂಸ್ಥೆ ಕಾರ್ಯದರ್ಶಿ ಎ.ಲೋಕೇಶ್, ಸದಸ್ಯರಾದ ತಿಪ್ಪೂರು ರಾಜೇಶ್, ಎಂ.ಸಿ.ಶಶಿಗೌಡ, ಪ್ರಕಾಶ್, ಎಚ್.ಸಿ.ಕುಮಾರ್, ಶ್ರೀನಿವಾಸ್, ಹೊನ್ನೇಗೌಡ, ಮಹೇಶ್, ಕೆ. ಪ್ರವೀಣ್, ಬಸವರಾಜು, ಡಾ.ಕೃಷ್ಣ, ಕಾಲೇಜಿನ ಎನ್ಎಸ್ಎಸ್ ಘಟಕದ ಅಧಿಕಾರಿಗಳಾದ ಪ್ರೊ.ಲತಾ, ಪ್ರೊ.ವೆಂಕಟೇಶ್, ತಾಲೂಕು ಛಾಯಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಂ.ಆರ್.ರಾಜೇಶ್ ಭಾಗವಹಿಸಿದ್ದರು.