ಸಾರಾಂಶ
ರಕ್ಷಿತ್ ಶೆಟ್ಟಿ ಅವರೊಂದಿಗೆ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿ ಸಂಭ್ರಮಿಸಿದರು.
ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕಿರಿಕ್ ಪಾರ್ಟಿ ಖ್ಯಾತಿಯ ನಟ ರಕ್ಷಿತ್ ಶೆಟ್ಟಿ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಕ್ಷೇತ್ರದ ಅರ್ಚಕ ನರಸಿಂಹ ಭಟ್ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ನಟನಿಗೆ ಪ್ರಸಾದ ನೀಡಿದರು. ಈ ಸಂದರ್ಭ ದೇವಸ್ಥಾನದ ಅನುವಂಶಿಕ ಮೊಕೇಸರ ದುಗ್ಗಣ್ಣ ಸಾವಂತರು, ಆಡಳಿತ ಮೊಕ್ತಸರ ಎನ್.ಎಸ್. ಮನೋಹರ ಶೆಟ್ಟಿ, ಅಕೌಂಟೆಂಟ್ ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು. ರಕ್ಷಿತ್ ಶೆಟ್ಟಿ ಅವರೊಂದಿಗೆ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿ ಸಂಭ್ರಮಿಸಿದರು.