ಸಾರಾಂಶ
ಸಾಗರ ಪಟ್ಟಣದ ಜೋಸೆಫ್ ನಗರದಲ್ಲಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಶನಿವಾರ ಚಿತ್ರನಟ, ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜಕುಮಾರ್ ಭೇಟಿ ನೀಡಿ ಉಭಯಕುಶಲೋಪರಿ ನಡೆಸಿದರು.
ಸಾಗರ: ಪಟ್ಟಣದ ಜೋಸೆಫ್ ನಗರದಲ್ಲಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಶನಿವಾರ ಚಿತ್ರನಟ, ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜಕುಮಾರ್ ಭೇಟಿ ನೀಡಿ ಉಭಯಕುಶಲೋಪರಿ ನಡೆಸಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಗೀತಾ ಶಿವರಾಜಕುಮಾರ್ ಸ್ಪರ್ಧಿಸುತ್ತಾರೆ ಎನ್ನುವ ಕಾರಣಕ್ಕೆಈ ಭೇಟಿ ಮಹತ್ವ ಪಡೆದಿದ್ದು, ಶಿವರಾಜಕುಮಾರ್ ದಂಪತಿ ಹಿರಿಯರಾದ ಕಾಗೋಡು ತಿಮ್ಮಪ್ಪ ಅವರ ಕಾಲಿಗೆರಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಜರಿದ್ದರು.