ಕುಕ್ಕೆ ಸುಬ್ರಹ್ಮಣ್ಯಕ್ಕೆ ನಟ ಯಶ್‌ ದಂಪತಿ ಭೇಟಿ

| Published : Aug 07 2024, 01:05 AM IST

ಸಾರಾಂಶ

ನೆಚ್ಚಿನ ನಟ- ನಟಿಯೊಂದಿಗೆ ಸೆಲ್ಫೀ ಕ್ಲಿಕ್ಕಿಸಲು ಮುಗಿಬಿದ್ದ ದೃಶ್ಯ ಕಂಡುಬಂತು.

ಸುಬ್ರಹ್ಮಣ್ಯ: ರಾಕಿಂಗ್ ಸ್ಟಾರ್ ಯಶ್ ಕುಟುಂಬ ಸಮೇತ ಮಂಗಳವಾರ ಕುಕ್ಕೆಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಪತ್ನಿ ರಾಧಿಕಾ ಪಂಡಿತ್ ಹಾಗೂ ಮಕ್ಕಳೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಬಳಿಕ ನರಸಿಂಹ ದೇವರ ಹಾಗೂ ಕ್ಷೇತ್ರ ದೈವ ಹೊಸಳಿಗಮ್ಮ ದೈವದ ಗುಡಿಯಲ್ಲಿ ಪೂಜೆ ಸಲ್ಲಿಸಿದರು. ಶ್ರೀ ಕ್ಷೇತ್ರದಲ್ಲಿನ ಅನ್ನದಾನಕ್ಕೆ 1 ಲಕ್ಷ ರು. ದೇಣಿಗೆ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಸಂದರ್ಭ ಅಭಿಮಾನಿಗಳು ತಮ್ಮ

ನೆಚ್ಚಿನ ನಟ- ನಟಿಯೊಂದಿಗೆ ಸೆಲ್ಫೀ ಕ್ಲಿಕ್ಕಿಸಲು ಮುಗಿಬಿದ್ದ ದೃಶ್ಯ ಕಂಡುಬಂತು.