ಸಾರಾಂಶ
ಸಂಪೂರ್ಣ ಜೀರ್ಣೋದ್ಧಾರಗೊಂಡಿರುವ ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕನ್ನಡ ಚಿತ್ರ ನಟಿ ರಾಗಿಣಿ ದ್ವಿವೇದಿ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದರ್ಶನ ಪಡೆದು ಅಮ್ಮನ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಅವರು ದೇವಳದ ಮರದ ಕೆತ್ತನೆಯ ಕಲಾಕುಸುರಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ಕಾಪುಸಂಪೂರ್ಣ ಜೀರ್ಣೋದ್ಧಾರಗೊಂಡಿರುವ ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕನ್ನಡ ಚಿತ್ರ ನಟಿ ರಾಗಿಣಿ ದ್ವಿವೇದಿ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದರ್ಶನ ಪಡೆದು ಅಮ್ಮನ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಅವರು ದೇವಳದ ಮರದ ಕೆತ್ತನೆಯ ಕಲಾಕುಸುರಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ದೇವಳದ ಪ್ರಧಾನ ತಂತ್ರಿ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ, ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಪೂಜೆ ಪ್ರಾರ್ಥನೆ ಸಲ್ಲಿಸಿ ನಟಿಗೆ ಪ್ರಸಾದ ನೀಡಿದರು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಮತ್ತು ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ.ಶೆಟ್ಟಿ, ವ್ಯವಸ್ಥಾಪನ ಸಮಿತಿ ಸದಸ್ಯ ಶೇಖರ ಸಾಲ್ಯಾನ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.