ಸಾರಾಂಶ
ಕನ್ನಡಪ್ರಭ ವಾರ್ತೆ ಗೋಕಾಕ
ವೈಯಕ್ತಿಕ ಓರೆಕೋರೆಗಳನ್ನು ತಿದ್ದಿಕೊಂಡು ಹೊಂದಾಣಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ. ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಈ ಮೂಲಕ ಧೈರ್ಯ ಮತ್ತು ಸಾಹಸ ಗುಣಗಳನ್ನು ವೃದ್ಧಿಸುತ್ತದೆ ಎಂದು ಶಹರ ಪೊಲೀಸ್ ಠಾಣೆಯ ಪಿಎಸೈ ಕೆ.ವಾಲಿಕರ ಹೇಳಿದರು.ನಗರದಲ್ಲಿ ಸೋಮವಾರ ನಡೆದ ಗೋಕಾಕ ಶಿಕ್ಷಣ ಸಂಸ್ಥೆಯ ಜಿಇಎಸ್ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಜೆಇಎಸ್ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕ್ರೀಡಾಕ್ಷೇತ್ರವು ಇಚ್ಛಾಶಕ್ತಿ, ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ. ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಸೋಲು ಕೊನೆಯಲ್ಲ. ಸೋಲೇ ಗೆಲುವಿನ ಸೋಪಾನ. ಕ್ರೀಡೆಯಲ್ಲಿ ಪರಿಣಿತರಾದವರಿಗೆ ಶ್ಯೆಕ್ಷಣಿಕ ಕ್ಷೇತ್ರದಲ್ಲೂ ಹಲವಾರು ಅವಕಾಶಗಳಿವೆ. ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಉಜ್ವಲ ಭವಿಷ್ಯವಿದೆ. ಕ್ರೀಡೆಯ ಮುಂದಿನ ಹಂತದ ಸ್ಪರ್ಧೆಗಳಿಗೆ ತಯಾರಿಯನ್ನು ಮಾಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಶ್ವನಾಥ್ ಕಡಕೋಳ ಅಧ್ಯಕ್ಷೆತೆ ವಹಿಸಿ ಮಾತನಾಡಿ, ಕ್ರೀಡೆಯು ಶಿಸ್ತು, ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ. ಕ್ರೀಡೆಯಲ್ಲಿ ಗೆಲ್ಲಲು ಉತ್ತಮ ತರಬೇತಿ ಅಗತ್ಯ. ಪರಿಣತಿಯನ್ನು ಗಳಿಸಲು ಸತತ ಸಾಧನೆ ಮಾಡಬೇಕು ಎಂದರು.ಇದೇ ಸಂದರ್ಭದಲ್ಲಿ ಎಲ್‌ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಕವಾಯತ ನಡೆಸಿದರು. ವೇದಿಕೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಆರ್.ಎಂ.ವಾಲಿ, ಮುಖ್ಯೋಪಾಧ್ಯಾಯ ಎಸ್.ಕೆ.ಮಠದ, ಎಸ್.ಎಸ್.ಇಜೇರಿ, ಎ.ಎಂ.ಶೆಟ್ಟೆನ್ನವರ, ವೈ.ಎ.ಹನಗಂಡಿ, ಕೆ.ಎಚ್.ಮೇಟಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎನ್.ಎ.ಕಬ್ಬೂರ ನಿರೂಪಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))