ಮಹನೀಯರ ಜಯಂತಿ ಆಚರಣೆಗೆ ಸಿದ್ಧತೆಗೆ ಎಡಿಸಿ ಸೂಚನೆ

| Published : Aug 05 2025, 12:30 AM IST

ಸಾರಾಂಶ

ರಾಮನಗರ: ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆ.9ರಂದು ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಆ.16ರಂದು ಶ್ರೀ ಕೃಷ್ಣ ಜಯಂತಿ ಆಚರಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಸೂಚಿಸಿದರು.

ರಾಮನಗರ: ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆ.9ರಂದು ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಆ.16ರಂದು ಶ್ರೀ ಕೃಷ್ಣ ಜಯಂತಿ ಆಚರಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಮಾತನಾಡಿದ ಅವರು, ಶ್ರೀ ನುಲಿಯ ಚಂದಯ್ಯ ಅವರು ಜಯಂತಿ ಕಾರ್ಯಕ್ರಮವನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಬೇಕು ಹಾಗೂ ಶ್ರೀ ಕೃಷ್ಣ ಜಯಂತಿಯನ್ನು ಹಳೆ ಬಸ್ ನಿಲ್ದಾಣದ ಆವರಣದಲ್ಲಿ ಹಮ್ಮಿಕೊಳ್ಳಲು ಸಭೆಯಲ್ಲಿ ಚರ್ಚಿಸಲಾಗಿದೆ. ಅದರಂತೆ ಆಯಾ ಸ್ಥಳಗಳಲ್ಲಿ ಜಯಂತಿಯನ್ನು ಆಚರಿಸುವಂತೆ ತಿಳಿಸಿದರು.

ಈ ಎರಡೂ ಜಯಂತಿ ಕಾರ್ಯಕ್ರಮದಲ್ಲಿ ಮಹನೀಯರ ಕುರಿತು ಉಪನ್ಯಾಸ ನೀಡಲು ನುರಿತ ಉಪನ್ಯಾಸಕರನ್ನು ನಿಯೋಜಿಸಬೇಕು. ಅವರ ಭಾವಚಿತ್ರಕ್ಕೆ ಪುಷ್ಟಗಳಿಂದ ಅಲಂಕರಿಸಬೇಕು. ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಲಘು ಉಪಹಾರದ ವ್ಯವಸ್ಥೆ ಮಾಡಬೇಕು ಎಂದರು.

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಬೇಕು. ಜಯಂತಿ ದಿನಗಳಂದು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಾಗಬೇಕು. ಒಟ್ಟಾರೆ ಎರಡೂ ಜಯಂತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಚಂದ್ರಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸತೀಶ್, ಮುಖಂಡರಾದ ಗುಡ್ಡೆ ವೆಂಕಟೇಶ್, ಚಲುವರಾಜು, ಶಿವಶಂಕರ್, ಗಿರೀಶ್, ರಕ್ಷಣಾ ವೇದಿಕೆ ರಾಜು, ಅಧಿಕಾರಿಗಳು ಉಪಸ್ಥಿತರಿದ್ದರು.

(ಮಗ್‌ಶಾಟ್‌ ಫೋಟೋ ಮಾತ್ರ ಸಾಕು)