ಸಾರಾಂಶ
ಈ ವರ್ಷದ ಬಿಸಿಲಿಗೆ ಮಂಡ್ಯ ಜಿಲ್ಲೆಯ ಜನತೆಯು ಕೂಡ ತತ್ತರಿಸಿ ಹೋಗಿದ್ದಾರೆ. ಅದಕ್ಕೆ ಕಾರಣ ಮರ ಗಿಡಗಳ ಸಂಖ್ಯೆ ಕಡಿಮೆ ಆಗುತ್ತಿವೆ. ಆದ್ದರಿಂದ ಗಿಡಗಳನ್ನು ನೆಟ್ಟಿ ಬೆಳೆಸಬೇಕು. ಆದಷ್ಟು ಪ್ಲಾಸ್ಟಿಕ್ ಕವರ್ ಬಳಕೆ ನಿಲ್ಲಿಸಿ ಬಟ್ಟೆ ಬ್ಯಾಗ್‌ಗಳನ್ನು ಬಳಸಿ ಇದರಿಂದ ಪರಿಸರದ ಮಾಲಿನ್ಯವನ್ನು ಕೂಡ ಕಡಿಮೆ ಮಾಡಬಹುದು.
ಕನ್ನಡಪ್ರಭ ವಾರ್ತೆ ಮಂಡ್ಯ
ವಿಶ್ವ ಪರಿಸರ ದಿನದ ಅಂಗವಾಗಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜ್ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು (ಕಲ್ಲು ಕಟ್ಟಡ) ಆವರಣದಲ್ಲಿ ಸೈಕಲ್ ಜಾಥಾಗೆ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು, ಜನರಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ವಿಶ್ವ ಪರಿಸರದ ದಿನದ ಅಂಗವಾಗಿ ಎಲ್ಲಾ ಕಡೆಯಲ್ಲೂ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಯುವ ಜನತೆಗೆ ಪರಿಸರ ಸಂರಕ್ಷಣೆ ಬಗ್ಗೆ ಪ್ರೇರಣೆ ನೀಡುವ ಸಲುವಾಗಿ ಎಲ್ಲಾ ಕಡೆಯಲ್ಲಿಯೂ ಗಿಡ ನೆಡಬೇಕು. ಸೈಕಲ್ ಜಾಥಾ ಮುಖಾಂತರ ಕಾರ್ಯಕ್ರಮ ಯಶಸ್ವಿಯಾಗಿ ನಡೆಸುತ್ತಿದ್ದೇವೆ ಎಂದರು.ಈ ವರ್ಷದ ಬಿಸಿಲಿಗೆ ಮಂಡ್ಯ ಜಿಲ್ಲೆಯ ಜನತೆಯು ಕೂಡ ತತ್ತರಿಸಿ ಹೋಗಿದ್ದಾರೆ. ಅದಕ್ಕೆ ಕಾರಣ ಮರ ಗಿಡಗಳ ಸಂಖ್ಯೆ ಕಡಿಮೆ ಆಗುತ್ತಿವೆ. ಆದ್ದರಿಂದ ಗಿಡಗಳನ್ನು ನೆಟ್ಟಿ ಬೆಳೆಸಬೇಕು. ಆದಷ್ಟು ಪ್ಲಾಸ್ಟಿಕ್ ಕವರ್ ಬಳಕೆ ನಿಲ್ಲಿಸಿ ಬಟ್ಟೆ ಬ್ಯಾಗ್‌ಗಳನ್ನು ಬಳಸಿ ಇದರಿಂದ ಪರಿಸರದ ಮಾಲಿನ್ಯವನ್ನು ಕೂಡ ಕಡಿಮೆ ಮಾಡಬಹುದು ಎಂದರು.
ಜಾಥಾ ಕಾರ್ಯಕ್ರಮದಲ್ಲಿ ವಿಜ್ಞಾನ ಸಂವಹನಕಾರರಾದ ಎಸ್ ಲೋಕೇಶ್, ಉಪ ಪರಿಸರ ಅಧಿಕಾರಿಗಳಾದ ಭವ್ಯ, ಅಶ್ವಿನಿ, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರಾದ ಮಂಗಲ ಯೋಗೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.ವಿಶ್ವ ಪರಿಸರ ದಿನಾಚರಣೆಮಂಡ್ಯ:
ತಾಲೂಕಿನ ಎ.ಹುಲ್ಲುಕೆರೆ ಗ್ರಾಮದ ಸರ್ಕಾರಿ ಸಂಯುಕ್ತ ಪ್ರೌಢ ಶಾಲೆಯ ’ರಾಷ್ಟ್ರೀಯ ಹಸಿರುಪಡೆ ಇಕೋ ಕ್ಲಬ್’ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮ ನಡೆಸಲಾಯಿತು. ಪ್ಲಾಸ್ಟಿಕ್ ವಿರೋಧಿ ಪರಿಸರ ಮಿತ್ರ ಜಯಶಂಕರ್ ಭಾಗವಹಿಸಿ ಗಿಡ ನೆಟ್ಟು ಮಕ್ಕಳಿಗೆ ಮತ್ತು ಶಿಕ್ಷಕರಿಗೆ ಪರಿಸರ ಮತ್ತು ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳ ನಿಷೇಧದ ಬಗ್ಗೆ ಅರಿವು ಮೂಡಿಸಿದರು. ವಿದ್ಯಾರ್ಥಿಗಳಿಂದ ಪರಿಸರ ಉಳಿಸುವ ಬಗ್ಗೆ ರೂಪಕಗಳನ್ನು ಏರ್ಪಡಿಸಲಾಗಿತ್ತು.ಕೆಆರ್ ಐಡಿಎಲ್‌ನಲ್ಲಿ ಗಿಡ ನೆಟ್ಟ ಡೀಸಿಮಂಡ್ಯ:ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ಕೆಆರ್ ಐಡಿಎಲ್ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಈ ವೇಳೆ ಜಿಲ್ಲಾ ಎಸ್ಪಿ ಎನ್.ಯತೀಶ್, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್.ನಾಗರಾಜು ಉಪಸ್ಥಿತರಿದ್ದರು.