ಮಡಿವಾಳರನ್ನು ಎಸ್‌ಸಿಗೆ ಸೇರಿಸಿ, ಬೇಡಿಕೆಗಳ ಈಡೇರಿಸಿ

| Published : Apr 23 2024, 12:52 AM IST

ಮಡಿವಾಳರನ್ನು ಎಸ್‌ಸಿಗೆ ಸೇರಿಸಿ, ಬೇಡಿಕೆಗಳ ಈಡೇರಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿನ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವುದು, ರಾಜ್ಯದ ಎಲ್ಲ ತಾಲೂಕಿನಲ್ಲಿ ಮಡಿಕಟ್ಟೆಗಳನ್ನು ನಿರ್ಮಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದಲ್ಲಿ ದಾವಣಗೆರೆ ಜಿಲ್ಲಾ ಮಡಿವಾಳ ಮಾಚಿದೇವ ಸಂಘ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಅವರಿಗೆ ಮಡಿವಾಳ ಸಮುದಾಯದವರು ಮನವಿ ಸಲ್ಲಿಸಿದರು. ಅಲ್ಲದೇ, ಸಮುದಾಯವು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸುವುದಾಗಿ ಘೋಷಣೆ ಮಾಡಿತು.

- ಜಿಲ್ಲಾ ಮಡಿವಾಳ ಮಾಚಿದೇವ ಸಂಘ ನೇತೃತ್ವದಲ್ಲಿ ಮಲ್ಲಿಕಾರ್ಜುನ್‌, ಡಾ.ಪ್ರಭಾಗೆ ಮನವಿ - - - ಕನ್ನಡಪ್ರಭ ವಾರ್ತೆ, ದಾವಣಗೆರೆ

ರಾಜ್ಯದಲ್ಲಿನ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವುದು, ರಾಜ್ಯದ ಎಲ್ಲ ತಾಲೂಕಿನಲ್ಲಿ ಮಡಿಕಟ್ಟೆಗಳನ್ನು ನಿರ್ಮಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದಲ್ಲಿ ದಾವಣಗೆರೆ ಜಿಲ್ಲಾ ಮಡಿವಾಳ ಮಾಚಿದೇವ ಸಂಘ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಅವರಿಗೆ ಮಡಿವಾಳ ಸಮುದಾಯದವರು ಮನವಿ ಸಲ್ಲಿಸಿದರು. ಅಲ್ಲದೇ, ಸಮುದಾಯವು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸುವುದಾಗಿ ಘೋಷಣೆ ಮಾಡಿತು.

ಡಾ.ಪ್ರಭಾ ಮನವಿ ಸ್ವೀಕರಿಸಿ, ಸಮುದಾಯದ ಬೇಡಿಕೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಸಾಧ್ಯವಾದ ಎಲ್ಲವುಗಳನ್ನು ಈಡೇರಿಸಲು ಪ್ರಯತ್ನ ಮಾಡಲಾಗುವುದು. ಸ್ವಸಹಾಯ ಗುಂಪುಗಳಿಗೆ ಸಹಾಯಧನ, ಎಲ್ಲ ತಾಲೂಕುಗಳಲ್ಲಿ ಮಡಿಕಟ್ಟೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ಸರ್ಕಾರದ ಜತೆ ಮಾತುಕತೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಕಾಂಗ್ರೆಸ್‌ ಅರ್ಭಥಿಯಾಗಿ ಸ್ಪರ್ಧಿಸಿದ್ದು, ಕೇವಲ ಬಹುಮತ ನೀಡುವ ಬದಲು ಒನ್ ವೇ ಮತದಾನ ಆಗುವ ನಿಟ್ಟಿನಲ್ಲಿ ಮಡಿವಾಳ ಸಮುದಾಯವು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಮತದಾನ ಮಾಡಬೇಕು. ಪ್ರಚಂಡ ಬಹುಮತದಿಂದ ಆರಿಸಿ ಸಂಸತ್ತಿಗೆ ಕಳುಹಿಸಿಕೊಡಬೇಕೆಂದು ಮನವಿ ಮಾಡಿದರು.

ಮಡಿವಾಳ ಸಮಾಜದ ಕಾರ್ಯಾಧ್ಯಕ್ಷ ಎಚ್.ಜಿ.ಉಮೇಶ್ ಮಾತನಾಡಿ, ಈ ಹಿಂದೆ ಕಾಂಗ್ರೆಸ್ ಆಡಳಿತ ಇದ್ದಾಗ ವಿದ್ಯಾರ್ಥಿ ನಿಲಯಕ್ಕೆ ನಿವೇಶನ ನೀಡಿ, 2013ರಲ್ಲಿ ₹50 ಲಕ್ಷ ಅನುದಾನವನ್ನು ವಿದ್ಯಾರ್ಥಿಗಳ ನಿಲಯಕ್ಕೆ ನೀಡಿತ್ತು. ಅಲ್ಲದೇ, ಮತ್ತೊಂದು ನಿವೇಶನವನ್ನು ಮಹಿಳಾ ವಿದ್ಯಾರ್ಥಿ ನಿಲಯಕ್ಕೆ ನೀಡುವ ಮೂಲಕ ಸಮುದಾಯದ ಏಳಿಗೆಗೆ ಮುಂದಾಗಿತ್ತು ಎಂದು ಮಾಹಿತಿ ನೀಡಿದರು.

ಸಮುದಾಯದ ಪ್ರಮುಖ ಬೇಡಿಕೆಯಾದ ರಾಜ್ಯದ ಎಲ್ಲ ತಾಲೂಕುಗಳಲ್ಲಿ ದೋಭಿಘಾಟ್ ನಿರ್ಮಾಣಕ್ಕೆ ನಿವೇಶನ, ಬಟ್ಟೆ ತೊಳೆಯುವ ಅತ್ಯಾಧುನಿಕ ಯಂತ್ರಗಳನ್ನು ಅಳವಡಿಸಿಕೆ, ತಾಲೂಕುಮಟ್ಟದಲ್ಲಿ ನಿರಾಶ್ರಿತರ ಗುರುತಿಸಿ ನಿವೇಶನ ಮಂಜೂರು, ಸರ್ಕಾರದ ವಸತಿ ಯೋಜನೆ ಅಡಿಯಲ್ಲಿ ಮನೆಗಳನ್ನು ನಿರ್ಮಾಣ, ಅಂತಹ ಬಡಾವಣೆಗಳಿಗೆ ಶ್ರೀ ಬಸವ ಮಾಚಿದೇವ ಬಡಾವಣೆಯೆಂದು ನಾಮಕರಣ ಮಾಡಬೇಕೆಂದು ಮನವಿ ಮಾಡಿದರು.

ಜಿಲ್ಲಾಧ್ಯಕ್ಷ ಎಂ.ನಾಗೇಂದ್ರಪ್ಪ, ಧನಂಜಯ, ಸುರೇಶ್ ಕೋಗುಂಡೆ, ವಿಜಯಕುಮಾರ್, ಜಗಳೂರು ರಮೇಶ್, ಕಂಚಿಕೆರೆ ಕೆಂಚಪ್ಪ, ಹೊನ್ನಾಳಿ ಮಹಾಂತೇಶ್, ತೌಡೂರು ಭೀಮಣ್ಣ, ಅಂಜಿನಪ್ಪ ಪೂಜಾರ್, ಶಕುಂತಲಮ್ಮ, ನಾಗಮ್ಮ, ರುದ್ರೇಶ್, ದುಗ್ಗಪ್ಪ, ಅಣ್ಣಪ್ಪ ಇತರರು ಇದ್ದರು.

- - - -22ಕೆಡಿವಿಜಿ 37, 38ಃ:

ದಾವಣಗೆರೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಜಿಲ್ಲಾ ಮಡಿವಾಳ ಮಾಚಿದೇವ ಸಂಘದ ನೇತೃತ್ವದಲ್ಲಿ ಮಡಿವಾಳ ಸಮುದಾಯದವರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಅವರಿಗೆ ಮನವಿ ಸಲ್ಲಿಸಿದರು.