ಪರಿಶಿಷ್ಟ ಜಾತಿಗೆ ಸವಿತಾ ಸಮಾಜ ಸೇರಿಸಿ: ವೆಂಕಟಾಚಲಪತಿ

| Published : Nov 05 2025, 01:30 AM IST

ಸಾರಾಂಶ

ಇಂದಿಗೂ ಅಸ್ಪೃಶ್ಯತೆ ಮತ್ತು ಸಾಮಾಜಿಕ ಅನ್ಯಾಯಕ್ಕೆ ತುತ್ತಾಗುತ್ತಿರುವ ಸವಿತಾ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡುವಂತೆ ಸವಿತಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪಿ.ಬಿ.ವೆಂಕಟಾಚಲಪತಿ ಸರ್ಕಾರಕ್ಕೆ ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಇಂದಿಗೂ ಅಸ್ಪೃಶ್ಯತೆ ಮತ್ತು ಸಾಮಾಜಿಕ ಅನ್ಯಾಯಕ್ಕೆ ತುತ್ತಾಗುತ್ತಿರುವ ಸವಿತಾ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡುವಂತೆ ಸವಿತಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪಿ.ಬಿ.ವೆಂಕಟಾಚಲಪತಿ ಸರ್ಕಾರಕ್ಕೆ ಒತ್ತಾಯಿಸಿದರು.

ನಗರದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಸವಿತಾ ಸಮಾಜದ ವಿರುದ್ಧ ನಿಷೇಧಿತ, ಅವಮಾನಕಾರಿ ಪದಗಳನ್ನು ಬಳಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ರಾಜ್ಯ, ಪರ ರಾಜ್ಯಗಳಿಂದ ಬಂದ ಕ್ಷೌರಿಕರು ಹಾಗೂ ಬಹುರಾಷ್ಟ್ರೀಯ ಕಂನಿಗಳು ಸ್ಥಳೀಯ ಸಾಂಪ್ರಾದಾಯಿಕ ಕ್ಷೌರಿಕರ ಜೀವನೋಪಾಯಕ್ಕೆ ಧಕ್ಕೆ ತರುತ್ತಿದ್ದಾರೆ. ಇಂತಹವರ ನಿಯಂತ್ರಣಕ್ಕೆ ಸೂಕ್ತ ಕಾನೂನು ಜಾರಿಗೊಳಿಸಿ, ಸ್ಥಳೀಯ, ಸಾಂಪ್ರದಾಯಿಕ ಕ್ಷೌರಿಕ ವೃತ್ತಿ ಬಾಂಧವರ ಬದುಕಿಗೆ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಸವಿತಾ ಸಮಾಜ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡುವ ಮೂಲಕ ಸಮಾಜ ಬಾಂಧವರ ಜೀವನ ಭದ್ರತೆಗೆ ಕ್ರಮ ಕೈಗೊಳ್ಳಬೇಕು. ಎಲ್ಲಾ ರಾಜಕೀಯ ಪಕ್ಷಗಳೂ ರಾಜಕೀಯ ಹುದ್ದೆಗಳಲ್ಲಿ ಪ್ರಾತಿನಿಧ್ಯ, ಸ್ಥಳೀಯ ಸಂಸ್ಥೆಯಿಂದ ಲೋಕಸಭೆ, ರಾಜ್ಯಸಭೆವರೆಗೂ ಸವಿತಾ ಸಮಾಜ ಬಾಂಧವರಿಗೆ ಸೂಕ್ತ ಸ್ಥಾನಮಾನ, ಅವಕಾಶ ನೀಡುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.

ನ.9ಕ್ಕೆ ಸವಿತಾ ಸಮಾಜದ ಪ್ರತಿಭಾ ಪುರಸ್ಕಾರ:

ಸವಿತಾ ಕ್ಷೇಮಾಭಿವೃದ್ಧಿ ಸಂಘದಿಂದ ಸಮಾಜದ ವಿದ್ಯಾರ್ಥಿಗಳಿಗೆ 12ನೇ ವರ್ಷದ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ಉದ್ಯೋಗಿಗಳಿಗೆ ಸನ್ಮಾನ ಸಮಾರಂಭವನ್ನು ನ.8ರಂದು ಬೆಳಗ್ಗೆ 10ಕ್ಕೆ ನಗರದ ರೋಟರಿ ಬಾಲಭವನದ ಸಿ.ಕೇಶವಮೂರ್ತಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪಿ.ಬಿ.ವೆಂಕಟಾಚಲಪತಿ

ತಿಳಿಸಿದರು.

ಸಂಘದ ಅಧ್ಯಕ್ಷ ಪಿ.ಬಿ.ವೆಂಕಟಾಚಲಪತಿ ಅಧ್ಯಕ್ಷತೆಯಲ್ಲಿ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್.

ಮುತ್ತುರಾಜ, ಹೊಸಪೇಟೆ ನಗರಸಭೆ ಅಧ್ಯಕ್ಷ ರೂಪೇಶಕುಮಾರ, ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಭೀಮಸೇನ್, ಹೊಳಲ್ಕೆರೆ ಉದ್ಯಮಿ ಆರ್.ರಾಜಪ್ಪ ಇತರರು ಭಾಗವಹಿಸುವರು ಎಂದರು.

ಸಂಘದ ಪದಾಧಿಕಾರಿಗಳಾದ ನಾರಾಯಣ ರಾಂಪುರ, ರಾಜು ಬಸ್ತಿಪಾಡು, ಯರ್ರಿಸ್ವಾಮಿ, ಮಂಜುನಾಥ ಪೋಲ್ಕಲ್ಲು, ರಾಮಣ್ಣ ಅರಕೆರೆ, ಶ್ರೀನಿವಾಸ ಇತರರು ಇದ್ದರು.