ಪ್ರಯಾಣಿಕರ ಅನುಕೂಲಕ್ಕೆ ಹೆಚ್ಚುವರಿ ಬಸ್: ಶಾಸಕ ಪಿ.ಎಂ. ನರೇಂದ್ರಸ್ವಾಮಿ

| Published : Oct 28 2024, 01:01 AM IST

ಪ್ರಯಾಣಿಕರ ಅನುಕೂಲಕ್ಕೆ ಹೆಚ್ಚುವರಿ ಬಸ್: ಶಾಸಕ ಪಿ.ಎಂ. ನರೇಂದ್ರಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ಬಳಿಕ ಪ್ರಯಾಣಿಕರ ಬೇಡಿಕೆಗಳಿಗೆ ತಕ್ಕಂತೆ ಹೊಸ ಬಸ್‌ಗಳನ್ನು ಸಂಚಾರಕ್ಕೆ ಬಿಡಲಾಗಿದೆ. ಗ್ರಾಮೀಣ ಭಾಗದ ಜನರಿಗೆ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು ೧೮ ಹೊಸ ಮಾರ್ಗಗಳನ್ನು ಸೃಷ್ಟಿಸಿ ಬಸ್ ಸೌಲಭ್ಯ ಒದಗಿಸಲಾಗಿದೆ.

ಕನ್ನಡ ಪ್ರಭ ವಾರ್ತೆ ಮಳವಳ್ಳಿ

ಸಂಚಾರ ದಟ್ಟಣೆಯ ಸಮಯದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬೆಂಗಳೂರು, ಮೈಸೂರು ಹಾಗೂ ಮಂಡ್ಯಕ್ಕೆ ತೆರಳಲು ಸಮಸ್ಯೆಯಾಗದಂತೆ ಹೆಚ್ಚಿನ ಬಸ್‌ಗಳು ಮಳವಳ್ಳಿಯಿಂದ ಸಂಚರಿಸುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಪಟ್ಟಣದ ಬಸ್ ನಿಲ್ದಾಣದ ಬಳಿ ಮೂರು ಹೊಸ ಆಶ್ವಮೇಧ ಬಸ್‌ಗಳಿಗೆ ಚಾಲನೆ ನೀಡಿ ಮಾತನಾಡಿ, ಕಳೆದ ಆರು ತಿಂಗಳಿಂದ ಮಳವಳ್ಳಿಯಿಂದ ವಿವಿಧ ಮಾರ್ಗಗಳಲ್ಲಿ ೨೪ ಹೊಸ ಬಸ್‌ಗಳು ಸಂಚರಿಸುತ್ತಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಬಸ್‌ಗಳು ಸಾರ್ವಜನಿಕರ ಸೇವೆ ಲಭ್ಯವಾಗಲಿವೆ ಎಂದರು.

ವಿಶೇಷ ಜಾತ್ರಾ ಮಹೋತ್ಸವ ಸಂದರ್ಭದಲ್ಲೂ ಸಹ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಹೆಚ್ಚುವರಿ ಬಸ್‌ಗಳು ಸಂಚರಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಗ್ರಾಮೀಣ ಸಂಚಾರ ವ್ಯವಸ್ಥೆಯನ್ನು ಸದೃಢಗೊಳಿಸಲು ಈಗಾಗಲೇ ಸಾರಿಗೆ ಇಲಾಖೆ ಮನವಿ ಮಾಡಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಗ್ರಾಮಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು ಕ್ರಮ ವಹಿಸುವ ಭರವಸೆ ನೀಡಿದರು.

ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ಬಳಿಕ ಪ್ರಯಾಣಿಕರ ಬೇಡಿಕೆಗಳಿಗೆ ತಕ್ಕಂತೆ ಹೊಸ ಬಸ್‌ಗಳನ್ನು ಸಂಚಾರಕ್ಕೆ ಬಿಡಲಾಗಿದೆ. ಗ್ರಾಮೀಣ ಭಾಗದ ಜನರಿಗೆ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು ೧೮ ಹೊಸ ಮಾರ್ಗಗಳನ್ನು ಸೃಷ್ಟಿಸಿ ಬಸ್ ಸೌಲಭ್ಯ ಒದಗಿಸಲಾಗಿದೆ ಎಂದು ನುಡಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಚಿಕ್ಕಲಿಂಗಯ್ಯ, ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು, ಮಳವಳ್ಳಿ ಘಟಕದ ವ್ಯವಸ್ಥಾಪಕ ಮಧುಸೂದನ್, ಪುರಸಭೆ ಸದಸ್ಯ ಎಂ.ಎನ್.ಶಿವಸ್ವಾಮಿ, ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ನಿರ್ದೇಶಕ ಬಿ.ಪುಟ್ಟಬಸವಯ್ಯ, ಮುಖಂಡರಾದ ಆರ್.ಎನ್.ವಿಶ್ವಾಸ್, ಕೆ.ಜೆ.ದೇವರಾಜು, ಸಿ.ಮಾಧು, ಬಾಲಕೃಷ್ಣ, ಗಂಗರಾಜೇ ಅರಸು, ರೋಹಿತ್‌ಗೌಡ, ಬಸವರಾಜು, ನಂಜುಂಡಸ್ವಾಮಿ, ಕಿರಣ್ ಶಂಕರ್, ವೆಂಕಟೇಶ್, ಚೇತನ್ ನಾಯಕ್ ಇದ್ದರು.