ಸಂಕ್ರಾಂತಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆಯಿಂದ ಹೆಚ್ಚುವರಿ ಬಸ್

| Published : Jan 13 2024, 01:36 AM IST / Updated: Jan 13 2024, 03:42 PM IST

ಸಾರಾಂಶ

ಮಕರ ಸಂಕ್ರಾಂತಿ ಹಬ್ಬದ ರಜೆಯ ಪ್ರಯುಕ್ತ ಜ. ೧೩, ೧೪ ಹಾಗೂ ೧೫ರಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಕ್ರಾಂತಿ ಮುಗಿದ ಬಳಿಕ ಮರಳಲು ಸಹ ಹೆಚ್ಚುವರಿ ಬಸ್ ಇರುತ್ತದೆ.

ಹಾವೇರಿ: ಮಕರ ಸಂಕ್ರಾಂತಿ ಹಬ್ಬದ ರಜೆಯ ಪ್ರಯುಕ್ತ ಜ. ೧೩, ೧೪ ಹಾಗೂ ೧೫ರಂದು ಬೆಂಗಳೂರು ಮತ್ತು ಇತರ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ಹಬ್ಬಕ್ಕಾಗಿ ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು ೯೦ ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಬ್ಬ ಮುಗಿದ ಮೇಲೆ ಜ. ೧೫ರಂದು ಮತ್ತು ನಂತರದ ದಿನಗಳಂದು ಪ್ರಮುಖ ಸ್ಥಳಗಳಿಂದ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ಸುಖಕರ ಹಾಗೂ ಸುರಕ್ಷಿತ ಪ್ರಯಾಣಿಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ಮತ್ತು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.