ಬ್ಯಾರಿಕೇಡ್, ವಾಹನ ನಿಲುಗಡೆ, ತಾತ್ಕಾಲಿಕ ಶೌಚಾಲಯ, ಸಾಂಸ್ಕೃತಿಕ ಕಾರ್ಯಕ್ರಮ, ಪ್ರಸಾದ ವಿತರಣೆ, ಜನದಟ್ಟಣೆ ನಿರ್ವಹಣೆ, ವಿಕಲಚೇತನರಿಗೆ ವ್ಹೀಲ್ ಚೇರ್, ಬರುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸೈನ್ ಬೋರ್ಡ್ ಅಳವಡಿಕೆ ಮಾಡಬೇಕು ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಶ್ರೀ ಹಾಸನಾಂಬಾ ಜಾತ್ರಾ ಮಹೋತ್ಸವವನ್ನು ಅತ್ಯಂತ ಅಚ್ಚುಕಟ್ಟಾಗಿ ನೆರವೇರಿಸಲು ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಶ್ರೀ ಹಾಸನಾಂಬಾ ಮತ್ತು ಶ್ರೀ ಸಿದ್ಧೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಸಂಬಂಧ ಸಭೆ ನಡೆಸಿ ಮಾತನಾಡಿದ ಅವರು, ದೇವಿ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ ಸುಗಮವಾಗಿ ದೇವಿ ದರ್ಶನ ಮಾಡಿಸುವುದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಾಗಿ ಟೆಂಡರ್ ಗಳನ್ನು ಕರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬರುವಂತಹ ಭಕ್ತಾದಿಗಳಿಗೆ ಹಾಗೂ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನಿಗಾವಹಿಸಬೇಕು ಉದಾಸೀನ ಮಾಡಬಾರದು ಎಂದು ತಿಳಿಸಿದರು.

ಬ್ಯಾರಿಕೇಡ್, ವಾಹನ ನಿಲುಗಡೆ, ತಾತ್ಕಾಲಿಕ ಶೌಚಾಲಯ, ಸಾಂಸ್ಕೃತಿಕ ಕಾರ್ಯಕ್ರಮ, ಪ್ರಸಾದ ವಿತರಣೆ, ಜನದಟ್ಟಣೆ ನಿರ್ವಹಣೆ, ವಿಕಲಚೇತನರಿಗೆ ವ್ಹೀಲ್ ಚೇರ್, ಬರುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸೈನ್ ಬೋರ್ಡ್ ಅಳವಡಿಕೆ ಮಾಡಬೇಕು ಎಂದು ತಿಳಿಸಿದರು.

ನಗರದ ಸ್ವಚ್ಛತೆ ಹಾಗೂ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಖಾಸಗಿ ಅವರು ಬ್ಯಾನರ್ ಗಳನ್ನು ಹಾಕುವ ಮುನ್ನ ಮಹಾನಗರ ಪಾಲಿಕೆಯಿಂದ ಪೂರ್ವಾನುಮತಿ ಪಡೆಯಬೇಕು ಎಂದು ತಿಳಿಸಿದರಲ್ಲದೆ, ಅನುಮತಿ ನೀಡುವಾಗ ಪತ್ರದಲ್ಲಿ ಯಾವ ದಿನಾಂಕ ತೆರವುಗೊಳಿಸಬೇಕು ಎಂಬುದನ್ನು ನಮೂದಿಸಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸೆ.೦೫ ರಂದು ತಾಲೂಕು ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ: ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಂ.ಶಿವಲಿಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಸೆ.೦೫ ರಂದು ಬೆಳಗ್ಗೆ ೧೦ ಗಂಟೆಗೆ ತಾಲೂಕು ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆಯು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆಯಲಿದ್ದು, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸದರಿ ಸಭೆಯಲ್ಲಿ ಭಾಗವಹಿಸುವಂತೆ ಸೂಚಿಸಿದರು. ಸಾರ್ವಜನಿಕರ ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಿದ್ಧರಿದ್ದು, ಎಲ್ಲರೂ ಒಂದು ತಂಡವಾಗಿ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ ಹಾಗೂ ವಿವಿಧ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.