ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಮೈಸೂರು ಜಿಲ್ಲೆಯವರಾಗಿದ್ದು, ಆದರ್ಶ ವ್ಯಕ್ತಿಯಾಗಿ ಮಾದರಿಯಾಗಿದ್ದರು. ಅವರ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಆ. 20ರಂದು ಬೆಳಗ್ಗೆ 10.30ಕ್ಕೆ ಕಲಾಮಂದಿರದಲ್ಲಿ ಜಯಂತಿ ಆಚರಿಸಲಾಗುವುದು ಎಂದರು.ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ, ಹಾಸ್ಟೆಲ್ ಗಳಲ್ಲಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಆಚರಣೆ ಮಾಡಬೇಕು. ಮಕ್ಕಳಿಗೆ ಚರ್ಚಾ ಸ್ಪರ್ಧೆ, ಆಶುಭಾಷಣ ಸ್ಪರ್ಧೆ, ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಬೇಕು. ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದವರಿಗೆ ಬಹುಮಾನ ವಿತರಿಸಲಾಗುವುದು ಎಂದು ಅವರು ತಿಳಿಸಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ,ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಟಿ.ಕೆ. ಹರೀಶ್, ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನಾ ಸಮಿತಿ ಗೌರವ ಅಧ್ಯಕ್ಷ ಎಂ. ಚಂದ್ರಶೇಖರ್, ಅಧ್ಯಕ್ಷ ಜಾಕೀರ್ ಹುಸೇನ್, ಪ್ರಧಾನ ಸಂಚಾಲಕ ಡೈರಿ ವೆಂಕಟೇಶ್, ಅಖಿಲ ಭಾರತ ವೀರಶೈವ ಮಹಾಸಭಾದ ಮೈಸೂರು ಜಿಲ್ಲಾ ನಿರ್ದೇಶಕ ಎಂ. ಷಡಕ್ಷರಿ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))