ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಬಿಡುಗಡೆ

| Published : Jun 04 2025, 12:50 AM IST / Updated: Jun 04 2025, 12:51 AM IST

ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಬಿಡುಗಡೆ
Share this Article
  • FB
  • TW
  • Linkdin
  • Email

ಸಾರಾಂಶ

ಹಾರಂಗಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರಿನ ಒಳಹರಿವು ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗಿದೆ.

ಕನ್ನಡಪ್ರಭ ವಾರ್ತೆ ಕುಶಾಲನಗರ

ಹಾರಂಗಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರಿನ ಒಳಹರಿವು ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗಿದೆ.

ಜಲಾಶಯಕ್ಕೆ ಒಳಹರಿವು 1541 ಕ್ಯುಸೆಕ್ಸ್ ಪ್ರಮಾಣದ ನೀರು ಹರಿದು ಬರುತ್ತಿದ್ದು ಅಣೆಕಟ್ಟಿನ ಎಸ್ಕೇಪ್ ಗೇಟ್ ಮೂಲಕ ಒಂದು ಸಾವಿರ ಕ್ಯುಸೆಕ್ಸ್ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ ಎಂದು ಅಣೆಕಟ್ಟು ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ ಎಂಟು ಗಂಟೆಗೆ ಜಲಾಶಯದ ನೀರಿನ ಮಟ್ಟ 2851.13 ಅಡಿಗಳಿಗೆ ತಲುಪಿದೆ.

ಅಣೆಕಟ್ಟಿನ ಗರಿಷ್ಠ ಸಂಗ್ರಹ ಮಟ್ಟ 2859 ಅಡಿಗಳಾಗಿದ್ದು ಅಣೆಕಟ್ಟು ಭದ್ರತೆ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗಿದೆ ಎಂದು ಅಣೆಕಟ್ಟು ಸಹಾಯಕ ಅಭಿಯಂತರರಾದ ಕಿರಣ್ ತಿಳಿಸಿದ್ದಾರೆ.

ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದ ನೀರಿನ ಸಂಗ್ರಹ ಮಟ್ಟ 2824.10 ಅಡಿಗಳಷ್ಟೇ ಇತ್ತು. ಈ ಸಾಲಿನಲ್ಲಿ 27 ಅಡಿಗಳಷ್ಟು ನೀರು ಹೆಚ್ಚು ಸಂಗ್ರಹ ಗೊಂಡಿದೆ.

ಈ ಬಾರಿ ಮೇ ತಿಂಗಳಲ್ಲಿ ಸುರಿದ ಭಾರಿ ಪ್ರಮಾಣದ ಮಳೆ ಹಿನ್ನೆಲೆಯಲ್ಲಿ ದಾಖಲೆ ಪ್ರಮಾಣದ ನೀರು ಜಲಾಶಯಕ್ಕೆ ಹರಿದು ಬಂದಿದೆ.