ಕ್ಷೇತ್ರದ ಸಮಸ್ಯೆ ಬಗೆಹರಿಸುವೆ: ಪ್ರಭಾ ಮಲ್ಲಿಕಾರ್ಜುನ್‌

| Published : Mar 31 2024, 02:01 AM IST

ಸಾರಾಂಶ

ದಾವಣಗೆರೆಯಲ್ಲಿ ಎಸ್.ಎಸ್. ಪ್ರತಿಷ್ಠಾಪನೆ ಸ್ಥಾಪಿಸಿ ಆರೋಗ್ಯ ಮೇಳ ಮತ್ತಿತರ ಮೇಳಗಳನ್ನು ಆಗಾಗ ಏರ್ಪಡಿಸುವ ಮೂಲಕ ಸಾರ್ವಜನಿಕರ ಆರೋಗ್ಯಕ್ಕೆ ಸೇವೆ ಸಲ್ಲಿಸುತ್ತಾ ಬಂದಿರುವೆ.

ಕೊಟ್ಟೂರು: ಲೋಕಸಭೆಯಲ್ಲಿ ರೈತರು ಮತ್ತು ಸಾಮಾನ್ಯ ಜನರ ಶ್ರೇಯೋಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಹಮ್ಮಿಕೊಂಡು ಜಾರಿಗೊಳಿಸಲು ಮುಂದಾಗುವಂತೆ ಸರ್ಕಾರವನ್ನು ಒತ್ತಾಯಿಸುವೆ. ಕ್ಷೇತ್ರದ ಸಮಸ್ಯೆ ಬಗೆಹರಿಸುವೆ ಎಂದು ದಾವಣಗೇರಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್‌ ಹೇಳಿದರು.ಶನಿವಾರ ಬೆಳಿಗ್ಗೆ ತಾಲೂಕಿನ ಉಜ್ಜಯಿನಿ ಸದ್ಧರ್ಮ ಪೀಠಕ್ಕೆ ಬೆಂಬಲಿಗರೊಂದಿಗೆ ಆಗಮಿಸಿದ ಅವರು ಶ್ರೀ ಮರುಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದು ನಂತರ ಜಗದ್ಗುರು ಸಿದ್ದಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಪಡೆದು ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕನ್ನಡ, ಇಂಗ್ಲೀಷ್‌ ಮತ್ತು ಹಿಂದಿಯಲ್ಲಿ ನಿರರ್ಗಳವಾಗಿ ಮಾತನಾಡಲು ಕಲಿತಿದ್ದು, ಎಲ್ಲ ಬಗೆಯ ಸಮಸ್ಯೆಗಳನ್ನು ನಿವಾರಣೆ ಮಾಡಲು ಸರ್ಕಾರದ ಮೇಲೆ ಒತ್ತಡ ತರುವೆ ಎಂದರು.

ದಾವಣಗೆರೆಯಲ್ಲಿ ಎಸ್.ಎಸ್. ಪ್ರತಿಷ್ಠಾಪನೆ ಸ್ಥಾಪಿಸಿ ಆರೋಗ್ಯ ಮೇಳ ಮತ್ತಿತರ ಮೇಳಗಳನ್ನು ಆಗಾಗ ಏರ್ಪಡಿಸುವ ಮೂಲಕ ಸಾರ್ವಜನಿಕರ ಆರೋಗ್ಯಕ್ಕೆ ಸೇವೆ ಸಲ್ಲಿಸುತ್ತಾ ಬಂದಿರುವೆ. ಟ್ರಸ್ಟ್‌ ವತಿಯಿಂದ ಹಲವು ಬಗೆಯ ಜನೋಪಯೋಗಿ ಕೆಲಸಗಳನ್ನು ಮಾಡುವ ಮೂಲಕ ಜನರಲ್ಲಿ ಗುರುತಿಸಿಕೊಂಡಿರುವೆ. ಸದಾ ಬಡ ಜನರ ಮಧ್ಯೆ ಇದ್ದು ಅವರ ಕಷ್ಟ ಕಾರ್ಪಣ್ಯಗಳಲ್ಲಿ ತೊಡಗಿಸಿಕೊಂಡಿರುವೆ ಎಂದರು.

ಸಾರ್ವಜನಿಕ ಸಂಪರ್ಕದಿಂದಾಗಿ ಕಾಂಗ್ರೆಸ್‌ ವರಿಷ್ಠರು ಈ ಬಾರಿಗೆ ಲೋಕಸಭೆ ಚುನಾವಣೆಗೆ ದಾವಣಗೆರೆಯಿಂದ ಸ್ಪರ್ಧಿಸಲು ತಮಗೆ ಅವಕಾಶ ನೀಡಿದೆ. ಈ ಅವಕಾಶ ಬಳಸಿಕೊಂಡು ಚುನಾವಣೆಯಲ್ಲಿ ವಿಜಯ ಸಾಧಿಸುವ ವಿಶ್ವಾಸ ಹೊಂದಿರುವೆ ಎಂದು ಅವರು ಹೇಳಿದರು.

ಕಾಂಗ್ರೆಸ್‌ ಶಾಸಕರು ಮತ್ತು ಪಕ್ಷ ತಳಮಟ್ಟದ ಕಾರ್ಯಕರ್ತರೊಂದಿಗೆ ಸದಾ ಸಮ್ಮಿಳಿತ ಸ್ನೇಹ ಭಾವ ಹೊಂದಿರುವ ಕಾರಣಕ್ಕಾಗಿ ಪಕ್ಷದ ಪ್ರತಿಯೊಬ್ಬರು ತಮ್ಮನ್ನು ಬೆಂಬಲಿಸಿ ಚುನಾವಣೆಯಲ್ಲಿ ನನ್ನ ಗೆಲುವಿಗೆ ಶ್ರಮಿಸುತ್ತಿದ್ದಾರೆ ಎಂದು ಅವರು ಹೇಳಿದರು.

ರಾಜ್ಯ ಬೀಜ ನಿಗಮದ ನಿರ್ದೇಶಕ ಸಾವಜ್ಜಿ ರಾಜೇಂದ್ರ ಪ್ರಸಾದ, ಜಗಳೂರು ಎಪಿಎಂಸಿ ಮಾಜಿ ಅಧ್ಯಕ್ಷ ಯು.ಜಿ. ಶಿವಕುಮಾರ್, ಅರಸಿಕೇರಿ ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ಬಿ.ಮಂಜುನಾಥ, ಉಜ್ಜಿನಿ ಕೊಡದಪ್ಪ, ಮಂಜಣ್ಣ ಮತ್ತಿತರರು ಇದ್ದರು.

ರಾಜ್ಯ ಬೀಜ ನಿಗಮದ ನಿರ್ದೇಶಕ ಸಾವಜ್ಜಿ ರಾಜೇಂದ್ರ ಪ್ರಸಾದ, ಜಗಳೂರು ಎಪಿಎಂಸಿ ಮಾಜಿ ಅಧ್ಯಕ್ಷ ಯು.ಜಿ. ಶಿವಕುಮಾರ್, ಅರಸಿಕೇರಿ ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ಬಿ.ಮಂಜುನಾಥ, ಉಜ್ಜಿನಿ ಕೊಡದಪ್ಪ, ಮಂಜಣ್ಣ ಇದ್ದರು.