ಸಾರಾಂಶ
ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯು ಅಸ್ಸಾಂನಲ್ಲಿ ಸಾಗುತ್ತಿರುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಅಡ್ಡಗಟ್ಟಿ ಅವರ ಮೇಲೆ ನಡೆಸಲೆತ್ನಿಸಿದ ದಾಳಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯನ್ನು ಉದ್ದೇಶಿಸಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಮಾತನಾಡಿದರು.
ಪಕ್ಷದ ನಾಯಕರಾದ ಎಂ.ಎ.ಗಪೂರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಪುತ್ರನ್, ಬಿ.ನರಸಿಂಹಮೂರ್ತಿ, ಭಾಸ್ಕರ ರಾವ್ ಕಿದಿಯೂರು, ಅಣ್ಣಯ್ಯ ಸೇರಿಗಾರ್, ದಿವಾಕರ್ ಕುಂದರ್, ಶಬೀರ್ ಅಹ್ಮದ್, ರಮೇಶ್ ಕಾಂಚನ್, ಯತೀಶ್ ಕರ್ಕೆರ, ವೆರೋನಿಕಾ ಕರ್ನಲಿಯೋ, ಗೀತಾ ವಾಗ್ಳೆ, ಡಾ. ಸುನಿತಾ ಶೆಟ್ಟಿ, ರೋಶನಿ ಒಲಿವರ, ಜ್ಯೋತಿ ಹಬ್ಬಾರ್, ಅಮೃತ್ ಶೆಣೈ, ಮಹಾಬಲ ಕುಂದರ್, ಪ್ರಖ್ಯಾತ್ ಶೆಟ್ಟಿ, ಹರೀಶ್ ಕಿಣಿ, ಕೀರ್ತಿ ಶೆಟ್ಟಿ, ಇಸ್ಮಾಯಿಲ್ ಅತ್ರಾಡಿ ಮುಂತಾದವರು ಭಾಗವಹಿಸಿದ್ದರು.