ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೂಕ್ತ ಸೌಲಭ್ಯ: ಶಾಸಕ ಶಿವಲಿಂಗೇಗೌಡ

| Published : Feb 11 2024, 01:47 AM IST

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೂಕ್ತ ಸೌಲಭ್ಯ: ಶಾಸಕ ಶಿವಲಿಂಗೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಬಾಣಾವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಎಲ್ಲ ರೀತಿಯ ಸೌಲಭ್ಯ ಒದಗಿಸಲಾಗುವುದು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಭರವಸೆ ನೀಡಿದರು. ಬಾಣಾವರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೂತನ ಇಸಿಜಿ ಯಂತ್ರವನ್ನು ಉದ್ಘಾಟಿಸಿ ಮಾತನಾಡಿದರು.

ಬಾಣಾವರದ ಆಸ್ಪತ್ರೆಯಲ್ಲಿ ನೂತನ ಇಸಿಜಿ ಯಂತ್ರ ಉದ್ಘಾಟನೆ ಕನ್ನಡಪ್ರಭ ವಾರ್ತೆ ಅರಸೀಕೆರೆ

ಬಾಣಾವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಎಲ್ಲ ರೀತಿಯ ಸೌಲಭ್ಯ ಒದಗಿಸಲಾಗುವುದು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಭರವಸೆ ನೀಡಿದರು.

ತಾಲೂಕಿನ ಬಾಣಾವರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೂತನ ಇಸಿಜಿ ಯಂತ್ರವನ್ನು ಉದ್ಘಾಟಿಸಿ ಮಾತನಾಡಿದರು. ವೈದ್ಯರ ಅವಸ್ಥೆಯನ್ನು ಕಲ್ಪಿಸುವಂತೆ ಸ್ಥಳದಲ್ಲೇ ಜಿಲ್ಲಾ ಆರೋಗ್ಯ ಅಧಿಕಾರಿ ಅವರೊಡನೆ ದೂರವಾಣಿ ಮೂಲಕ ಮಾತನಾಡಿ ತಕ್ಷಣದಲ್ಲಿ ಬಾಣಾವರ ಸರ್ಕಾರಿ ಆಸ್ಪತ್ರೆಗೆ ಉತ್ತಮವಾದ ವೈದ್ಯರ ಅವಸ್ಥೆಯನ್ನು ಕಲ್ಪಿಸುವಂತೆ ಸೂಚಿಸಿದರು.

ಬಾಣವರ ನಗರದಲ್ಲಿ ಇರುವಂತಹ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಾರ್ವಜನಿಕರ ಅನುಕೂಲತೆಯ ದೃಷ್ಟಿಯಿಂದ ಸಾರ್ವಜನಿಕರಿಗೆ ಅನುಕೂಲಕರವಾಗುವಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿ ಕೊಡುವುದಾಗಿ ಹೇಳಿದರು.

ಬಾಣಾವರ ನಗರವು ದಿನೇ ದಿನೇ ವೇಗವಾಗಿ ಬೆಳೆಯುತ್ತಿದ್ದು ನಗರದ ಒಳಭಾಗದಲ್ಲಿ ರಸ್ತೆಗಳಲ್ಲಿ ವಿಭಜಕಗಳನ್ನು ಹಾಕಿಸುವುದರ ಮೂಲಕ ಅಪಘಾತಗಳನ್ನು ತಪ್ಪಿಸುವ ಪ್ರಯತ್ನ ಮಾಡಲಾಗುವುದು. ನಗರದಲ್ಲಿ ಬೇಕಾಗಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಈಡೇರಿಸುವ ಭರವಸೆಯನ್ನು ನೀಡಿದರು.

ಶಾಸಕರು ಕೇವಲ ಬಾಣಾವರ ಮಾತ್ರವಲ್ಲದೆ ರಾಜ್ಯದ ಎಲ್ಲೆಡೆಯಲ್ಲಿಯೂ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಕಾರ್ಯನಿರ್ವಹಿಸುವಂತೆ ಮುಂಬರುವ ದಿನಗಳಲ್ಲಿ ಸರ್ಕಾರದೊಡನೆ ಚರ್ಚಿಸಿ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವ ಪ್ರಮಾಣಿಕ ಪ್ರಯತ್ನವನ್ನು ಮಾಡುವುದಾಗಿ ತಿಳಿಸಿದರು

ಸಭಾ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಸಿ ಶ್ರೀನಿವಾಸ, ಬಾಣಾವರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಹಾಗೂ ಮೂಲಭೂತ ಸಮಸ್ಯೆಗಳ ಕೊರತೆ ಹೆಚ್ಚಾಗಿ ಕಾಡುತ್ತಿದೆ. ಅಲ್ಲದೆ ಬಾಣಾವರ ಸರ್ಕಾರಿ ಆಸ್ಪತ್ರೆಗೆ ಹೊಂದಿಕೊಂಡಂತೆ ಸುಮಾರು 35 ರಿಂದ 40 ಗ್ರಾಮದ ಸುಮಾರು 40,000 ಜನರು ಬಾಣಾವರ ಸರ್ಕಾರಿ ಆಸ್ಪತ್ರೆ ಅವಲಂಭಿಸಿದ್ದು ಈ ಸರ್ಕಾರಿ ಆಸ್ಪತ್ರೆಗೆ ಶಾಶ್ವತ ವೈದ್ಯರ ವ್ಯವಸ್ಥೆಯನ್ನು ಕಲ್ಪಿಸಿ ಕೊಡಬೇಕು. ಆಸ್ಪತ್ರೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಶಾಸಕರಲ್ಲಿ ಮನವಿ ಮಾಡಿದರು

ಈ ಸಂದರ್ಭದಲ್ಲಿ ಬಾಣಾವರ ಗ್ರಾಮ ಪಂಚಾಯತ್ ಅಧ್ಯಕ್ಷ ವೀಣಾ ಸುರೇಶ್, ಬಾಣಾವರದಲ್ಲಿ ಉಪ ನೋಂದಣಿ ಅಧಿಕಾರಿಗಳ ಕಚೇರಿ, ಸರ್ಕಾರಿ ಆಸ್ಪತ್ರೆ ಕೃಷಿ ಇಲಾಖೆ, ರೈತ ಸಂಪರ್ಕ ಕೇಂದ್ರ ಶಾಲೆಗಳು ಹೆಚ್ಚಾಗಿರುವುದರಿಂದ ಈ ಭಾಗದಲ್ಲಿ ಒಂದು ಸಮುದಾಯ ಶೌಚಾಲಯ ಕೇಂದ್ರವನ್ನು ನಿರ್ಮಿಸುವಂತೆ ಶಾಸಕರಲ್ಲಿ ಮನವಿ ಮಾಡಿದರು.

ಮಾಜಿ ತಾಲೂಕು ಪಂ.ಉಪಾಧ್ಯಕ್ಷ ಶಾನೆಗೆರೆ ಲಿಂಗರಾಜು, ಮಾಜಿ ಸದಸ್ಯ ಬಿ ರವಿಶಂಕರ್, ಬಗರ್ ಹುಕುಂ ಕಮಿಟಿಯ ನಿರ್ದೇಶಕ ಬಿ.ಎಂ. ಜಯಣ್ಣ ಗ್ರಾಮ ಪಂಚಾಯತಿ ಸದಸ್ಯರಾದ ಬಿ.ಆರ್.ಸುರೇಶ್, ಸೈಯದ್ ಆಸಿಫ್ ಮೋಮಿನ್ ಹಾಗೂ ಶಾನೆಗೆರೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಿರಿಯಪ್ಪ, ಕಾಚಿಘಟ್ಟ ಗ್ರಾಮ ಪಂಚಾಯತ್ ಸದಸ್ಯ ಮಹೇಶ್ ಕ್ರುವಾಂಕ, ಗ್ರಾಮ ಪಂಚಾಯತ್ ಅಧ್ಯಕ್ಷ ನವೀನ್, ಮುಸ್ಲಿಂ ಸಮಾಜದ ಅಧ್ಯಕ್ಷ ರಹಿಮ್ ಸಾಬ್, ಶಾನೆಗೆರೆ ಗ್ರಾಮ ಪಂಚಾಯತ್ ಸದಸ್ಯ ವಿಜಿ ಕುಮಾರ್ ಹಾಗೂ ತಾಲೂಕು ವೈದ್ಯಾಧಿಕಾರಿಗಳು ಭಾಗವಹಿಸಿದ್ದರು.ಬಾಣಾವರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೂತನ ಇಸಿಜಿ ಯಂತ್ರವನ್ನು ಶಾಸಕ ಕೆ.ಎಂ.ಶಿವಲಿಂಗೇಗೌಡ ಉದ್ಘಾಟಿಸಿದರು.