ಆತ್ಮ ಯೋಜನೆ ಸಮರ್ಪಕ ಅನುಷ್ಠಾನ ಮಾಡಿ

| Published : Aug 31 2024, 01:44 AM IST

ಸಾರಾಂಶ

ಕೃಷಿ ಚಟುವಟಿಕೆಗಳಲ್ಲಿ ಹೆಚ್ಚು ಇಳುವರಿ ತೆಗೆಯುವ ನಿಟ್ಟಿನಲ್ಲಿ ರೈತರಿಗೆ ವಿವಿಧ ರೀತಿಯ ತರಬೇತಿ ನೀಡಲು ಕೇಂದ್ರ ಸರ್ಕಾರವೇ ಸೂಚಿಸಿದೆ. ಇದನ್ನು ಕಾರ್ಯಗತಗೊಳಿಸುವ ಜವಾಬ್ದಾರಿ ಅಧಿಕಾರಿಗಳದು. ಗ್ರಾಮಗಳಿಗೆ ತೆರಳಿ ರೈತರನ್ನು ಸಂಪರ್ಕಿಸಿ ಅವರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹರಿಸಬೇಕು

ಕನ್ನಡಪ್ರಭ ವಾರ್ತೆ ಕೋಲಾರ "ಕೇಂದ್ರ ಸರ್ಕಾರದ ಆತ್ಮ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಿ " ಎಂದು ಎಡಿಸಿ ಮಂಗಳಾ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆತ್ಮ ಯೋಜನೆ ಸಮಿತಿ ಸಭೆಯಲ್ಲಿ ಮಾತನಾಡಿ, ’ರೈತರಿಗೆ ನೂತನ ಕೃಷಿ ತಂತ್ರಜ್ಞಾನ ಕುರಿತು ಅರಿವು ಮೂಡಿಸಲು ಹಾಗೂ ಕೃಷಿ ಅಭಿವೃದ್ಧಿಗೆ ಪೂರಕವಾಗಿ ತರಬೇತಿ ಕಾರ್ಯಾಗಾರ ನಡೆಸಬೇಕು ಎಂದು ಹೇಳಿದರು. ರೈತರಿಗೆ ವಿವಿಧ ತರಬೇತಿ

ಕೃಷಿ ಚಟುವಟಿಕೆಗಳಲ್ಲಿ ಹೆಚ್ಚು ಇಳುವರಿ ತೆಗೆಯುವ ನಿಟ್ಟಿನಲ್ಲಿ ರೈತರಿಗೆ ವಿವಿಧ ರೀತಿಯ ತರಬೇತಿ ನೀಡಲು ಕೇಂದ್ರ ಸರ್ಕಾರವೇ ಸೂಚಿಸಿದೆ. ಇದನ್ನು ಕಾರ್ಯಗತಗೊಳಿಸುವ ಜವಾಬ್ದಾರಿ ಅಧಿಕಾರಿಗಳದು. ಗ್ರಾಮಗಳಿಗೆ ತೆರಳಿ ರೈತರನ್ನು ಸಂಪರ್ಕಿಸಿ ಅವರ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು. ಜತೆಗೆ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು’ ಎಂದು ಸಲಹೆ ನೀಡಿದರು.₹೧.೪೮ ಕೋಟಿ ಅನುದಾನ

’ಯೋಜನೆಗೆ ರೂ.೧.೪೮ ಕೋಟಿ ಅನುದಾನ ಮೀಸಲಿಟ್ಟಿದ್ದು, ಈ ಪೈಕಿ ಈವರೆಗೆ ರೂ.೦.೩೨ಕೋಟಿ ಬಿಡುಗಡೆಯಾಗಿದ್ದು, ರೂ.೨೮ಲಕ್ಷ ವೆಚ್ಚವಾಗಿದೆ’ ಎಂದು ಜಂಟಿ ಕೃಷಿ ನಿರ್ದೇಶಕಿ ಎಂ. ಆರ್. ಸುಮ ಮಾಹಿತಿ ನೀಡಿದರು.ಕೃಷಿ ಅಭಿವೃದ್ಧಿಗೆ ಪೂರಕ

’ಯೋಜನೆಯಡಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ರೈತರಿಗೆ ತಲುಪಿಸಲು ಹೋಬಳಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ಸಿಬ್ಬಂದಿ ಇರುತ್ತಾರೆ. ಇವರು ನೇರವಾಗಿ ರೈತರನ್ನು ಸಂಪರ್ಕಿಸಿ ಚರ್ಚೆ ನಡೆಸುತ್ತಾರೆ. ಕೃಷಿ ಅಭಿವೃದ್ಧಿಗೆ ಪೂರಕವಾದ ತರಬೇತಿ, ಗುಂಪು ರಚನೆ, ಬೀಜ ಧನ ಹೀಗೆ ಅನೇಕ ಕಾರ್ಯಕ್ರಮ ನಡೆಸಲಾಗುವುದು. ಪ್ರತಿ ಗ್ರಾಮದಲ್ಲೂ ರೈತರ ಗುಂಪು ರಚಿಸಿ ಸೌರ್ಕಯ ಕಲ್ಪಿಸಲಾಗುವುದು’ ಎಂದರು. ಕೃಷಿ ಇಲಾಖೆ ಉಪ ನಿರ್ದೇಶಕರಾದ ಭವ್ಯರಾಣಿ, ರೇ? ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್, ಪಶುಸಂಗೋಪನ ಉಪನಿರ್ದೇಶಕ ತುಲಸಿ ರಾಮಯ್ಯ ಇದ್ದರು.