ತುಂಗಭದ್ರ ಎಡದಂಡೆ ಉಪ ಕಾಲುವೆಗಳಿಗೆ ಸಮರ್ಪಕ ನೀರು ಹರಿಸಿ: ರೈಸಂಘ ಆಗ್ರಹ

| Published : Oct 20 2024, 01:49 AM IST

ತುಂಗಭದ್ರ ಎಡದಂಡೆ ಉಪ ಕಾಲುವೆಗಳಿಗೆ ಸಮರ್ಪಕ ನೀರು ಹರಿಸಿ: ರೈಸಂಘ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಮಾನ್ವಿ ಪಟ್ಟಣದ ತಹಸೀಲ್ದಾರ್ ಕಚೇರಿಗೆ ಆಗಮಿಸಿದ ರೈತ ಸಂಘದ ಮುಖಂಡರು ತುಂಗಭದ್ರ ಎಡದಂಡೆ ಉಪ ಕಾಲುವೆಗಳಿಗೆ ಸಮರ್ಪಕ ನೀರು ಹರಿಸಿಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಮಾನ್ವಿ

ತುಂಗಭದ್ರ ಎಡದಂಡೆ ಕಾಲುವೆ (ಟಿಎಲ್ಬಿಸಿ) ಕೆಳಭಾಗದ 76,82,85,89 ರ ಉಪ ಕಾಲುವೆಗಳ ವ್ಯಾಪ್ತಿಗೆ ಬರುವ ರೈತರ ಜಮೀನುಗಳಿಗೆ ಸಮರ್ಪಕ ನೀರು ಹರಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಆಗ್ರಹಿಸಿದ್ದು, ಈ ಕುರಿತು ಪಟ್ಟಣದ ತಹಸೀಲ್ದಾರ್ ಮುಖಾಂತರ ಸಿಎಂಗೆ ಮನವಿ ಸಲ್ಲಿಸಿದ್ದಾರೆ.

ಅಚ್ಚುಕಟ್ಟು ಪ್ರದೇಶಕ್ಕೆ ನಿಗದಿತ ಪ್ರಮಾಣದಲ್ಲಿ ನೀರು ಹರಿಸದ ಕಾರಣಕ್ಕೆ ರೈತರು ಸಾಲ ಮಾಡಿ ಬೆಳೆಯುತ್ತಿರುವ ನಾನಾ ಬೆಳೆಗಳು ಇಳುವರಿ ಕಡಿಮೆಯಾಗುತ್ತಿದ್ದು, ಇದರಿಂದಾಗಿ ನಷ್ಟ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಳಭಾಗಕ್ಕೆ ಸಮರ್ಪಕ ನೀರು ಹರಿಸಬೇಕು, ತಾಲೂಕಿನಲ್ಲಿ ಜೋಳ,ಭತ್ತ, ತೊಗರಿ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು, ಹತ್ತಿ ಮಾರಾಟದಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು, ಕೃಷಿ ಪಂಪ್ ಸೆಟ್ಗಳಿಗೆ ಏಳು ತಾಸು ಕರೆಂಟ್ ಸರಬರಾಜು ಮಾಡಬೇಕು, ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿಗೆ ಮುಂದಾಗಬೇಕು ಹಾಗೂ ಬರ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸಂಘದ ರಾಜ್ಯ ಕಾರ್ಯದರ್ಶಿ ಸೂಗುರಯ್ಯ ಆರ್.ಎಸ್.ಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗಾರೆಡ್ಡಿ ಪಾಟೀಲ್, ಮುಖಂಡರಾದ ಬಸವರಾಜ ಮಲ್ಲಿಗೆಮಡುವು, ಚಾಮರಸ ಜಾನೇಕಲ್, ವೀರೇಶ ಗವಿಗಟ್ ಸೇರಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ರೈತರು ಇದ್ದರು.