ಸಾರಾಂಶ
ಮಳವಳ್ಳಿ:
ಸರ್ಕಾರದ ಯೋಜನೆಗಳು ಹಾಗೂ ಸವಲತ್ತುಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಲು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ತಾಲೂಕು ಪಂಚಾಯ್ತಿ ಇಒ ಎಚ್.ಜಿ.ಶ್ರೀನಿವಾಸ್ ಸೂಚಿಸಿದರು.ತಾಲೂಕಿನ ತಳಗವಾದಿ ಗ್ರಾಮ ಪಂಚಾಯ್ತಿ ಆವರಣದಲ್ಲಿ ಶುಕ್ರವಾರ ನಡೆದ ಕುಂದು ಕೊರತೆ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳ ಸೂಚನೆಯಂತೆ ಗ್ರಾಮದಲ್ಲಿ ಕುಂದು ಕೊರತೆ ಸಭೆ ನಡೆಸಿ, ಸಲ್ಲಿಕೆಯಾಗಿರುವ ಹಾಗೂ ಕೇಳಿ ಬಂದಿರುವ ದೂರುಗಳ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು. ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕಿದೆ. ಸರ್ಕಾರದ ಹಲವು ಯೋಜನೆಗಳನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಬೇಕು ಎಂದು ಹೇಳಿದರು.
ಇ-ಸ್ವತ್ತು, ಕುಡಿಯುವ ನೀರು, ಸ್ವಚ್ಛತೆ, ಮೂಲ ಸೌಲಭ್ಯಗಳ ಕೊರತೆ, ಗ್ರಾಮಠಾಣ ವ್ಯಾಪ್ತಿಯಲ್ಲಿ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆ ಹೀಗೆ ಅನೇಕ ಸಮಸ್ಯೆಗಳನ್ನು ಆಲಿಸಿದ ತಾಪಂ ಇಒ ಎಚ್.ಜಿ ಶ್ರೀನಿವಾಸ್ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇಯೇ ಪರಿಹಾರ ಸೂಚಿಸಿದರು. ಇದೇ ವೇಳೆ ಪರಿಶಿಷ್ಟರ ಕಾಲೋನಿ ಸಮಸ್ಯೆಗಳು, ಹಕ್ಕು ಪತ್ರ, ಅಂಬೇಡ್ಕರ್ ಭವನಕ್ಕೆ ಹೆಚ್ಚುವರಿ ಅನುದಾನ ನೀಡಲು ಹಲವರು ಮನವಿ ಪತ್ರ ಸಲ್ಲಿಸಿದರು.ಗ್ರಾಪಂ ಅಧ್ಯಕ್ಷೆ ಸುಮಿತ್ರಾ, ಉಪಾಧ್ಯಕ್ಷ ಕುಮಾರ್, ಸಹಾಯಕ ನಿರ್ದೇಶಕ ಪಾರ್ಥಸಾರಥಿ, ಅಭಿವೃದ್ಧಿ ಅಧಿಕಾರಿ ರೇಣುಕಾ, ಎಸ್.ಡಿ.ಎ, ತಾಲೂಕು ಐಇಸಿ ಸಂಯೋಜಕ ಎಚ್.ಸುನೀಲ್ ಕುಮಾರ್ ಉಪಸ್ಥಿತರಿದ್ದರು.
ಇಂದು ಡಾ.ಡಿ.ಶ್ರೀನಿವಾಸ್‌ಗೆ ಅಭಿನಂದನಾ ಸಮಾರಂಭಮಂಡ್ಯ: ಡಾ.ಡಿ.ಶ್ರೀನಿವಾಸ್ ಅಭಿನಂದನಾ ಸಮಿತಿ ವತಿಯಿಂದ ಕರ್ನಾಟಕ ಸಂಘದ ಸಹಕಾರದೊಂದಿಗೆ ಪಿಇಎಸ್ ವಿಜ್ಞಾನ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಡಿ.ಶ್ರೀನಿವಾಸ್- ೮೫ ಸ್ನೇಹಶೀಲ ಅಭಿನಂದನಾ ಗ್ರಂಥ ಬಿಡುಗಡೆ ಹಾಗೂ ಅಭಿನಂದನಾ ಸಮಾರಂಭವನ್ನು ಜುಲೈ ೨೦ರ ಬೆಳಗ್ಗೆ ೧೧ ಗಂಟೆಗೆ ನಗರದ ಸ್ವಾಮಿ ವಿವೇಕಾನಂದ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಡಾ.ಬಿ.ಜಯಪ್ರಕಾಶ ಗೌಡ ತಿಳಿಸಿದರು. ಡಾ.ಡಿ.ಶ್ರೀನಿವಾಸ್ ಅವರಿಗೆ ೮೫ ವರ್ಷಗಳು ತುಂಬಲಿದ್ದು, ಅವರು ಜಿಲ್ಲೆಗೆ ಪ್ರಥಮ ಡಾಕ್ಟರೇಟ್ ಪದವಿ ಪಡೆದವರಾಗಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಡಾ.ಡಿ.ಶ್ರೀನಿವಾಸ್ ದಂಪತಿಯನ್ನು ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಭಿನಂದಿಸಲಿದ್ದು, ಮಾಜಿ ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು, ನಿವೃತ್ತ ಕುಲಪತಿ ಡಾ.ಕೆ.ಎಸ್.ರಂಗಪ್ಪ ಗ್ರಂಥ ಬಿಡುಗಡೆ ಮಾಡುವರು, ಕರ್ನಾಟಕ ಸಂಘದ ಅಧ್ಯಕ್ಷ ಡಾ.ಜಯಪ್ರಕಾಶ ಗೌಡ ಅಭಿನಂದನಾ ನುಡಿಗಳನ್ನಾಡಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಜಾನಪದ ಪರಿಷತ್ ಮಾಜಿ ಅಧ್ಯಕ್ಷ ಟಿ.ತಿಮ್ಮೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಎಂ.ನಾಗರಾಜು ಉಪಸ್ಥಿತರಿರುವರು ಎಂದು ವಿವರಿಸಿದರು. ಗೋಷ್ಠಿಯಲ್ಲಿ ಹಿರಿಯ ಸಾಹಿತಿ ಜಿ.ಟಿ.ವೀರಪ್ಪ, ಸಮಿತಿಯ ಅಧ್ಯಕ್ಷ ಜಿ.ವಿ.ನಾಗರಾಜು, ಉಪಾಧ್ಯಕ್ಷರಾದ ಎಂ.ಬಾಲಕೃಷ್ಣ, ಕೆ.ಎಸ್.ಬಸವರಾಜು, ಕಾರ್ಯದರ್ಶಿ ಕೆ.ಬಿ.ಬಾಲಕೃಷ್ಣ ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))