ಸಾರಾಂಶ
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಪದ ಬಳಸಿ ಮಾತನಾಡಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾ ದಳದ ಮುಖ್ಯಸ್ಥ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ನಗರದಲ್ಲಿ ಜಿಲ್ಲಾ ಜೆಡಿಎಸ್ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
- ಉಪವಿಭಾಗಾಧಿಕಾರಿ ಮುಖಾಂತರ ರಾಜ್ಯಪಾಲರಿಗೆ ಮನವಿ- - - ಕನ್ನಡಪ್ರಭ ವಾರ್ತೆ ದಾವಣಗೆರೆ
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಪದ ಬಳಸಿ ಮಾತನಾಡಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾ ದಳದ ಮುಖ್ಯಸ್ಥ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ನಗರದಲ್ಲಿ ಜಿಲ್ಲಾ ಜೆಡಿಎಸ್ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.ನಗರದ ಪಿ.ಬಿ. ರಸ್ತೆಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಿಂದ ಗುರುವಾರ ಮೆರವಣಿಗೆ ಮೂಲಕ ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿ, ಉಪವಿಭಾಗಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಹರಿಹರ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಮಾತನಾಡಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಕೆಳಹಂತದ ಅಧಿಕಾರಿಗಳಿಗೆ ಪತ್ರ ಬರೆದಿರುವ ಎಡಿಜಿಪಿ ಎಂ.ಚಂದ್ರಶೇಖರ ಅಧಿಕಾರಿಯಾಗಿ ಕೆಲಸ ಮಾಡಲು ಅನರ್ಹರು. ಎಡಿಜಿಪಿ ಚಂದ್ರಶೇಖರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುವುದು ಬಿಟ್ಟು ಕುಮ್ಮಕ್ಕು ನೀಡುತ್ತಿದೆ ಎಂದರು.ಹಿಮಾಚಲ ಪ್ರದೇಶ ಮೂಲದ ಎಡಿಜಿಪಿ ಚಂದ್ರಶೇಖರ್ ಭ್ರಷ್ಟ ಅಧಿಕಾರಿ ಎಂದು ಕೂಡ ಸಾಬೀತಾಗಿದೆ. ರಾಜ್ಯಪಾಲರು ಕೂಡಲೇ ಅವರನ್ನು ವಜಾಗೊಳಿಸಿ ಹಿಮಾಚಲ ಪ್ರದೇಶಕ್ಕೆ ವಾಪಸ್ ಕಳಿಸಬೇಕು ಎಂದು ಆಗ್ರಹಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಚಿದಾನಂದಪ್ಪ, ಕಾರ್ಯಾಧ್ಯಕ್ಷ ಗಣೇಶ ದಾಸಕರಿಯಪ್ಪ, ಮುಖಂಡರಾದ ಅಮಾನುಲ್ಲಾ ಖಾನ್, ಬಾತಿ ಶಂಕರ್, ಎಸ್.ಓಂಕಾರಪ್ಪ, ಪ್ರೇಮ ಕುಮಾರ, ತಿಮ್ಮಣ್ಣ, ಎಸ್.ಎಚ್. ದುಗ್ಗೇಶ, ಸಿದ್ದೇಶ ಜಗಳೂರು, ಇತರ ಮುಖಂಡರು, ಕಾರ್ಯಕರ್ತರು ಇದ್ದರು.- - - -3ಕೆಡಿವಿಜಿ37ಃ: