ಸಾರಾಂಶ
ಫೇಮಸ್ ಯೂತ್ ಕ್ಲಬ್‌ಗೆ ರೋಟರಿ ಕ್ಲಬ್ ಬೈಕಂಪಾಡಿ ವತಿಯಿಂದ ನೂತನ ಇನ್ವರ್ಟರ್‌ನ್ನು ರೋಟರಿ ಕ್ಲಬ್ ಬೈಕಂಪಾಡಿಯ ಅಧ್ಯಕ್ಷ ಹರೀಶ್ ಬಿ. ಶೆಟ್ಟಿ ಹಸ್ತಾಂತರಿಸಿದರು.
ಮೂಲ್ಕಿ: ಆಧಾರ್ ತಿದ್ದುಪಡಿ ಮತ್ತು ನೋಂದಣಿಯನ್ನು ಗ್ರಾಮೀಣ ಭಾಗದ ಜನತೆಯ ಬಳಿ ತಲುಪಿಸುವ ಯುವ ಸಂಘಟನೆಗಳ ಸೇವೆ ಶ್ಲಾಘನೀಯ ಎಂದು ರೋಟರಿ ಕ್ಲಬ್ ವಲಯ ಸೇನಾನಿ ಗಣೇಶ ಎಂ. ಹೇಳಿದರು.
ರೋಟರಿ ಕ್ಲಬ್ ಬೈಕಂಪಾಡಿ, ಪಡುಪಣಂಬೂರು ಗ್ರಾಮ ಪಂಚಾಯಿತಿಯ ಜಂಟಿ ಆಶ್ರಯದಲ್ಲಿ ಆಧಾರ್ ಸೇವಾ ಕೇಂದ್ರ ಮಂಗಳೂರಿನ ಸಹಯೋಗದಲ್ಲಿ, ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲ10ನೇ ತೋಕೂರು ನ ಪ್ರಾಯೋಜಕತ್ವದಲ್ಲಿ ತೋಕೂರು ಫೇಮಸ್ ಯೂತ್ ಕ್ಲಬ್ ಕಾರ್ಯಾಲಯದಲ್ಲಿ ನಡೆದ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫೇಮಸ್ ಯೂತ್ ಕ್ಲಬ್‌ನ ಅಧ್ಯಕ್ಷ ಭಾಸ್ಕರ್ ಅಮೀನ್ ತೋಕೂರು ವಹಿಸಿದ್ದರು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಬೈಕಂಪಾಡಿ ಅಧ್ಯಕ್ಷ ಹರೀಶ್ ಬಿ. ಶೆಟ್ಟಿ, ಫೇಮಸ್ ಯೂತ್ ಕ್ಲಬ್‌ನ ಮಹಿಳಾ ಮಂಡಲದ ಅಧ್ಯಕ್ಷೆ ಪ್ರೇಮಲತಾ ಯೋಗೀಶ್, ಆಧಾರ್ ಸೇವಾ ಕೇಂದ್ರ ಮಂಗಳೂರಿನ ರಂಜನಿ, ಅನ್ವಿತಾ ಮತ್ತು ಪ್ರವೀಣ್ ಉಪಸ್ಥಿತರಿದ್ದರು.
ಫೇಮಸ್ ಯೂತ್ ಕ್ಲಬ್‌ಗೆ ರೋಟರಿ ಕ್ಲಬ್ ಬೈಕಂಪಾಡಿ ವತಿಯಿಂದ ನೂತನ ಇನ್ವರ್ಟರ್‌ನ್ನು ರೋಟರಿ ಕ್ಲಬ್ ಬೈಕಂಪಾಡಿಯ ಅಧ್ಯಕ್ಷ ಹರೀಶ್ ಬಿ. ಶೆಟ್ಟಿ ಹಸ್ತಾಂತರಿಸಿದರು. ಫೇಮಸ್ ಯೂತ್ ಕ್ಲಬ್‌ನ ಕಾರ್ಯದರ್ಶಿ ಹಿಮಕರ್ ಕೋಟ್ಯಾನ್ ಸ್ವಾಗತಿಸಿದರು. ಮಹಮ್ಮದ್ ಶರೀಫ್ ನಿರೂಪಿಸಿದರು.