ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಅಹಿಂದ, ದಲಿತ ಮತ್ತಿತರೆ ಸಂಘಟನೆಗಳು ಡಿ.28 ರಂದು ಕರೆ ನೀಡಿದ್ದ ವಿಜಯಪುರ ಬಂದ್‌ನ್ನು 30ಕ್ಕೆ ಮುಂದೂಡಲಾಗಿದೆ ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಹೇಳಿದರು.ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಡಿ.30 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ, ಸಿದ್ದೇಶ್ವರ ದೇವಸ್ಥಾನ, ಗಣಪತಿ, ಗಾಂಧಿವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಡಿ.30ರ ಬಂದ್ ಗೆ ಸಾರ್ವಜನಿಕರು, ವ್ಯಾಪಾರಸ್ಥರು ಸೇರಿದಂತೆ ಎಲ್ಲ ಸಂಘಟನೆಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ಗೋಷ್ಠಿಯಲ್ಲಿ ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಫ್, ಸೋಮನಾಥ ಕಳ್ಳಿಮನಿ, ಮಲ್ಲಿಕಾರ್ಜುನ ಬಟಗಿ, ಸಂಜೂ ಕಂಬಾಗಿ, ಎಂ.ಸಿ.ಮುಲ್ಲಾ, ಚಂದ್ರಶೇಖರ ಕೊಡಬಾಗಿ, ಜಕ್ಕಪ್ಪ ಯಡವೆ, ಪ್ರಭುಗೌಡ ಪಾಟೀಲ, ಶ್ರೀನಾಥ ಪೂಜಾರಿ, ರವಿ ಕಿತ್ತೂರ, ರಾಜು ಕಗ್ಗೋಡ ಮತ್ತಿತರರಿದ್ದರು.ಅಂತಾರಾಷ್ಟ್ರೀಯ ಖ್ಯಾತಿಯ ಅರ್ಥಶಾಸ್ತ್ರಜ್ಞರು. ಜಗತ್ತು ಅರ್ಥಿಕ ಸಂಕಷ್ಟ ದಲ್ಲಿ ಸಿಲುಕಿದ್ದಾಗ, ಭಾರತವನ್ನು ಸಂಕಟದಿಂದ ಪಾರು ಮಾಡಿದ್ದರು. ಅಂತಹ ಮಹಾನ ನಾಯಕರ ಅಂತ್ಯಕ್ರಿಯೇ 28 ರಂದು ಇರುವುದರಿಂದ ವಿಜಯಪುರ ಬಂದ್ ಮುಂದೂಡಿ, ಡಿ.30ಕ್ಕೆ ಹಮ್ಮಿಕೊಳ್ಳಲಾಗಿದೆ. ವಿಜಯಪುರ ಬಂದ್ ಗೆ ವ್ಯಾಪಕ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಅದೂ ಸೂಕ್ತವಲ್ಲ. ಅವರ ದುಃಖದಲ್ಲಿ ಪಾಲ್ಗೊಳ್ಳಲು ನಿರ್ಧರಿಸಲಾಗಿದೆ.
-ಪ್ರೊ.ರಾಜು ಆಲಗೂರ, ಮಾಜಿ ಶಾಸಕರು.