ಈಗಾಗಲೇ ಭಾರತ ಪೋಲಿಯೊ ಮುಕ್ತ ದೇಶವಾಗಿದೆ. ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಮಕ್ಕಳಿಗೆ ಲಸಿಕೆ ಹಾಕಿ ರೋಗ ಬರದಂತೆ ಆರೋಗ್ಯ ಇಲಾಖೆ ನೋಡಿಕೊಳ್ಳುತ್ತಿದೆ ಎಂದು ಚಿನ್ಮಯ ಸ್ಕೂಲಿನ ಮುಖ್ಯೋಪಾಧ್ಯಪಕಿ ಶಶಿಕಲಾ ಇಜೇರಿ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಈಗಾಗಲೇ ಭಾರತ ಪೋಲಿಯೊ ಮುಕ್ತ ದೇಶವಾಗಿದೆ. ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಮಕ್ಕಳಿಗೆ ಲಸಿಕೆ ಹಾಕಿ ರೋಗ ಬರದಂತೆ ಆರೋಗ್ಯ ಇಲಾಖೆ ನೋಡಿಕೊಳ್ಳುತ್ತಿದೆ ಎಂದು ಚಿನ್ಮಯ ಸ್ಕೂಲಿನ ಮುಖ್ಯೋಪಾಧ್ಯಪಕಿ ಶಶಿಕಲಾ ಇಜೇರಿ ಹೇಳಿದರು.ನಗರದ ಷಣ್ಮುಕಾರೂಢ ಮಠದಲ್ಲಿರುವ ಚಿನ್ಮಯ ಸ್ಕೂಲ್‌ನಲ್ಲಿ ನರ್ಸರಿ ಮಕ್ಕಳಿಗೆ ಪೋಲಿಯೊ ಹನಿ ಹಾಕಿ ಮಾತನಾಡಿದ ಅವರು, 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ತಪ್ಪದೇ ಹಾಕಿಸಬೇಕು ಎಂದು ಮನವಿ ಮಾಡಿದರು. ಪೋಲಿಯೊ ಲಸಿಕೆ ಹಾಕಿಸುವುದರಿಂದ ಯಾವುದೇ ಅಡ್ಡಪರಿಣಾಮಗಳಿಲ್ಲ. ಮಗುವಿಗೆ ಸಣ್ಣ ಪ್ರಮಾಣದ ಜ್ವರ, ಶೀತವಿದ್ದರೂ ಲಸಿಕೆ ಹಾಕಿಸಬಹುದಾಗಿದೆ. ನಿಮ್ಮ ಹತ್ತಿರದ ಅಂಗನವಾಡಿ, ಸರ್ಕಾರಿ ಶಾಲೆ ಅಥವಾ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕು. ಲಸಿಕಾ ಕೇಂದ್ರಗಳಲ್ಲದೇ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ಹಾಕುವರು ಎಂದು ತಿಳಿಸಿದರು.