ಕನ್ನಡಪ್ರಭ ವಾರ್ತೆ ಮದ್ದೂರು
ಕೀರ್ತಿ ಶೇಷರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ 94ನೇ ಜನ್ಮದಿನೋತ್ಸವ ಅಂಗವಾಗಿ ಮೇ 27ರಂದು ಕೃಷ್ಣರ ಹೆಸರಿನಲ್ಲಿ ಆಡಳಿತ ಸೇವಾ ರತ್ನ ಪ್ರಶಸ್ತಿ ಪ್ರದಾನ ಮತ್ತು ತಾಲೂಕಿನ ಜನಪ್ರತಿನಿಧಿಗಳು ಹಾಗೂ ಶಿಕ್ಷಣ ಮುನ್ನೋಟ ಎಂಬ ಗ್ರಂಥ ಬಿಡುಗಡೆ ಸಮಾರಂಭ ನಡೆಯಲಿದೆ ಎಂದು ಚುಂಚಶ್ರೀ ಗೆಳೆಯರ ಬಳಗ ಅಧ್ಯಕ್ಷ ಡಾ.ಬಿ.ಕೃಷ್ಣ, ಶ್ರೀನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ವಿ.ಟಿ.ರವಿಕುಮಾರ್ ತಿಳಿಸಿದರು.ಪಟ್ಟಣದ ಟೌನ್ ಕ್ಲಬ್ ಆವರಣದಲ್ಲಿ ಜಂಟಿಸುದ್ದಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುಂಚಶ್ರೀ ಗೆಳೆಯರ, ತಾಲೂಕು ಶ್ರೀನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘ ಮತ್ತು ನಾಗರಿಕ ವೇದಿಕೆ ಸಹಯೋಗದಲ್ಲಿ ಪಟ್ಟಣದ ಮಹಿಳಾ ಸರ್ಕಾರಿ ಕಾಲೇಜು ಆವರಣದಲ್ಲಿ ಅಂದು ಬೆಳಗ್ಗೆ 10.30ಕ್ಕೆ ನಡೆಯುವ ಸಮಾರಂಭವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಲಿದ್ದಾರೆ. ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದ ಸ್ವಾಮಿಗಳ ಸಾನಿಧ್ಯದಲ್ಲಿ ಸಮಾರಂಭ ಜರುಗಲಿದೆ ಎಂದರು.
ಶಾಸಕ ಕೆ.ಎಂ.ಉದಯ್ ಅವರಿಗೆ ಎಸ್.ಎಂ.ಕೃಷ್ಣ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅಭಿನಂದನಾ ಭಾಷಣ ಮಾಡಲಿದ್ದಾರೆ. ಡಾ.ಬಿ.ಕೃಷ್ಣ ರಚಿಸಿರುವ ಮದ್ದೂರು ತಾಲೂಕಿನ ಜನಪ್ರತಿನಿಧಿಗಳು ಹಾಗೂ ಶಿಕ್ಷಣ ಒಂದು ಮುನ್ನೋಟ ಕುರಿತ ಗ್ರಂಥವನ್ನು ಕರ್ನಾಟಕ ಸಂಘದ ಅಧ್ಯಕ್ಷ ಡಾ.ಬಿ.ಜಯಪ್ರಕಾಶ್ ಗೌಡ ಬಿಡುಗಡೆ ಮಾಡಲಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ಮನ್ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಇತಿಹಾಸ ಸಂಶೋಧಕ ತೈಲೂರು ವೆಂಕಟಕೃಷ್ಣ, ನಿವೃತ್ತ ಪ್ರಾಂಶುಪಾಲ ಡಾ.ಎಸ್.ಬಿ.ಶಂಕರೇಗೌಡ, ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಸಿ.ರವಿ, ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಕಂಠಿ, ಸಿ.ಎನ್.ಶಂಕರ್, ಲಿಂಗಯ್ಯ, ಬಿ.ವಿ.ಶಂಕರೇಗೌಡ, ಎಂ.ಎ.ಕೃಷ್ಣ, ದೇಶಹಳ್ಳಿ ಶಿವಪ್ಪ, ಹರೀಶ್, ಸುರೇಶ್ ಇದ್ದರು.